ನವದೆಹಲಿ:ಆಘಾತಕಾರಿ ಘಟನೆ ಒಂದರಲ್ಲಿ ಪೊಲೀಸ್​ ಅಧಿಕಾರಿ ಹಾಗೂ ಅವರ ಗರ್ಭಿಣಿ ಪತ್ನಿ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.
ಘಟನೆಯೂ ಉತ್ತರ ದೆಹಲಿಯ ಬುರಾರಿ ಪ್ರದೇಶದಲ್ಲಿ ನಡೆದಿದ್ದು ಸದ್ಯ ಪೊಲೀಸ್​ ಅಧಿಕಾರಿ ಹಾಗು ಆತನ ಪತ್ನಿ ಪ್ರಾಣಪಾಯದಿಂದ ಪಾರಾಗಿದ್ದಾರೆ.
ಘಟನೆಯೂ ಶುಕ್ರವಾರ ರಾತ್ರಿ 9:45ರ ಸುಮಾರಿಗೆ ನಡೆದಿದ್ದು ಬುರಾರಿಯಿಂದ ಜಹಾಂಗೀರ್ಪುರಿ ಕಡೆಗೆ ತನ್ನ ಪತ್ನಿಯ ಜೊತೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ.
ಈ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ದಂಪತಿಗಳ ಮೇಲೆ ಗುಂಡು ಹಾರಿಸಿ ಅವರ ಬಳಿ ಇದ್ದ ಮೊಬೈಲ್​ ಪೋನುಗಳು ಹಾಗು 7,000 ಸಾವಿರ ರೂಪಾಯಿ ನಗದನ್ನು ದೋಚಿ ಪರಾರಿಯಾಗಿದ್ದಾರೆ.
ಘಟನೆ ನಡೆದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಸ್ಥಳೀಯರ ಸಹಾಯದೊಂದಿಗೆ ದಂಪತಿಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಪೊಲೀಸ್​ ಅಧಿಕಾರಿ ಹೊಟ್ಟೆಯ ಭಾಗ ಹಾಗೂ ಅವರ ಪತ್ನಿಗೆ ಗಲ್ಲದ ಭಾಗಕ್ಕೆ ಗುಂಡು ತಗುಲಿ ಗಾಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 8 =
Remember me
