|ಪಂಕಜ ಕೆ.ಎಂ.ಬೆಂಗಳೂರು
ಕೋವಿಡ್ ಸಾಂಕ್ರಾಮಿಕ ನಂತರದಲ್ಲಿ ಆರೋಗ್ಯ ರಕ್ಷಣೆ ಮಹತ್ವದ ವಿಷಯವಾಗಿದ್ದು, ಈ ನಿಟ್ಟಿನಲ್ಲಿ ‘ಸ್ವಾಸ್ಥ್ಯ ಅಮೃತ್’ ಘೋಷವಾಕ್ಯದೊಂದಿಗೆ ದೇಶವು ಈ ವರ್ಷ ಏ.30ರಂದು ‘ಆಯುಷ್ಮಾನ್ ಭಾರತ್ ದಿವಸ್’ ಆಚರಿಸುತ್ತಿದೆ. ಆದರೆ ಚುನಾವಣಾ ನೀತಿ ಸಂಹಿತೆ ಕಾರಣದಿಂದಾಗಿ ಮೇ 13ರ ನಂತರ ಅಧಿಕೃತವಾಗಿ ಕಾರ್ಯಕ್ರಮ ಆಯೋಜಿಸಲಾಗುತ್ತದೆ.
2018ರ ಅಕ್ಟೋಬರ್​ನಲ್ಲಿ ಆರಂಭವಾದ ಆಯುಷ್ಮಾನ್ ಭಾರತ್ ಯೋಜನೆಯ ಉಪಯೋಗಗಳನ್ನು ಜನಸಾಮಾನ್ಯರಿಗೆ ತಿಳಿಸಲು ಹಾಗೂ ಮೂಲಸೌಲಭ್ಯಗಳನ್ನು ಉನ್ನತೀಕರಿಸಲು ‘ಆಯುಷ್ಮಾನ್ ಭಾರತ್ ದಿವಸ್’ ಆಚರಿಸಲಾಗುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ಕಡಿಮೆ ವೆಚ್ಚದ ಆರೋಗ್ಯ ರಕ್ಷಣೆಯ ಅರಿವು ಮೂಡಿಸುವುದು ಪ್ರಮುಖ ಉದ್ದೇಶವಾಗಿದೆ. ಆರೋಗ್ಯ ಮತ್ತು ಯೋಗಕ್ಷೇಮವನ್ನು ಉತ್ತೇಜಿಸಲು ಬಡವರಿಗೆ ಆರೋಗ್ಯ ವಿಮಾ ರಕ್ಷಣೆ ಖಚಿತಪಡಿಸಿಕೊಳ್ಳಲು ಹಾಗೂ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ (ಎಬಿಎಆರ್​ಕೆ) ಸೌಲಭ್ಯ ಪಡೆಯುವ ಕುರಿತು ಅರಿವು ಮೂಡಿಸಲು ಈ ದಿನವನ್ನು ರಾಷ್ಟ್ರೀಯ ಆರೋಗ್ಯ ವಿಮಾ ಕಾರ್ಯಕ್ರಮ ಜಾಗೃತಿ ದಿನ ಎಂಬುದಾಗಿಯೂ ಕರೆಯಲಾಗುತ್ತದೆ.
ದೇಶದ ಪ್ರತಿಯೊಬ್ಬರಿಗೂ ಆರೋಗ್ಯ ಸೇವೆ ಒದಗಿಸುವ ಗುರಿಯೊಂದಿಗೆ ಏ. 30 ಅನ್ನು ‘ಆಯುಷ್ಮಾನ್ ಭಾರತ ದಿವಸ’ ಎಂದು ಘೋಷಿಸಲಾಗಿದೆ. ಯೋಜನೆಯ ಮೊದಲ ಹೆಜ್ಜೆಯಾಗಿ ಜನರ ಮನೆಗಳಿಗೆ ವೈದ್ಯಕೀಯ ಸೇವೆ ತಲುಪಿಸಲು ಹಂತ ಹಂತವಾಗಿ ಯೋಗಕ್ಷೇಮ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ರಾಷ್ಟ್ರೀಯ ಮಾದರಿ ಸಮೀಕ್ಷಾ ಕಚೇರಿಯ (ಎನ್​ಎಸ್​ಎಸ್​ಒ) ಇತ್ತೀಚಿನ ಸಂಶೋಧನೆ ಪ್ರಕಾರ ಭಾರತದಲ್ಲಿ ಆರೋಗ್ಯ ವ್ಯವಸ್ಥೆಯು ಬಿಕ್ಕಟ್ಟಿನ ಸ್ಥಿತಿಯಲ್ಲಿದ್ದು, ಶೇ.86 ಗ್ರಾಮೀಣ ಪ್ರದೇಶದ ಜನರು ಹಾಗೂ ಶೇ.82 ನಗರ ಪ್ರದೇಶದ ಜನರು ಆರೋಗ್ಯ ವಿಮೆ ಹೊಂದಿಲ್ಲ. ಇದರ ಪರಿಣಾಮ ಅನಿರೀಕ್ಷಿತ ಘಟನೆ ಹಾಗೂ ದೀರ್ಘಕಾಲೀನ ಆರೋಗ್ಯ ಸಮಸ್ಯೆಯಿಂದ ಇಂಥ ಕುಟುಂಬಗಳು ಸಾಲದ ಸುಳಿಯಲ್ಲಿ ಸಿಲುಕಿಕೊಳ್ಳುತ್ತಿವೆ. ಇದಕ್ಕೆ ಪರಿಹಾರ ಒದಗಿಸುವ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ.
ಈ ಯೋಜನೆಯಡಿ ರೋಗಿಗಳು ಚಿಕಿತ್ಸೆ ಪಡೆಯಲು ಅನುಕೂಲವಾಗುವಂತೆ ರಾಜ್ಯಾದ್ಯಂತ ಎಬಿಎಆರ್​ಕೆ ಕೋ ಬ್ರಾ್ಯಂಡೆಡ್ ಕಾರ್ಡ್ (ಆರೋಗ್ಯ ಕಾರ್ಡ) ವಿತರಣೆ ಮಾಡಲಾಗುತ್ತಿದ್ದು, ಈವರೆಗೆ 1.39 ಕೋಟಿ ಮಂದಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ನೋಂದಣಿ ಹಾಗೂ ಕಾರ್ಡ್ ವಿತರಣೆ ಸ್ಥಗಿತಗೊಳಿಸಲಾಗಿದ್ದು, ಚುನಾವಣೆ ನಂತರ ಪುನರಾರಂಭಿಸಲಾಗುವುದು.
ಕರ್ನಾಟಕದಲ್ಲಿ ಎಬಿಎಆರ್​ಕೆ ಯೋಜನೆ ಜಾರಿಗೊಂಡು ನಾಲ್ಕೂವರೆ ವರ್ಷ ಕಳೆದಿದೆ. ಈ ಅವಧಿಯಲ್ಲಿ ರಾಜ್ಯದಲ್ಲಿನ ಸರ್ಕಾರಿ ಹಾಗೂ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆ, ಪ್ರಥಮ, ದ್ವಿತೀಯ ಹಾಗೂ ತೃತೀಯ ಹಂತ ಸೇರಿ 50.39 ಲಕ್ಷಕ್ಕೂ ಅಧಿಕ ಮಂದಿ ಯೋಜನೆಯಡಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.
ಆರೋಗ್ಯಕ್ಕಾಗಿ ಹಣ ಖರ್ಚು ಮಾಡಬೇಕಲ್ಲ ಎಂಬ ಜನಸಾಮಾನ್ಯರ ಚಿಂತೆಯನ್ನು ದೂರ ಮಾಡಿದ ಆಯುಷ್ಮಾನ್ ಭಾರತ್ ಯೋಜನೆ 5 ವರ್ಷ ಪೂರೈಸಿ 6ನೇ ವರ್ಷಕ್ಕೆ ಕಾಲಿಟ್ಟಿದೆ. ಪ್ರಧಾನಿ ನರೇಂದ್ರ ಮೋದಿಯವರು ಜನರ ಆರೋಗ್ಯ ತುರ್ತು ಅರಿತು ಜಾರಿ ಮಾಡಿದ ಈ ಯೋಜನೆ, 50 ಕೋಟಿಗೂ ಅಧಿಕ ಜನರಿಗೆ ಆರೋಗ್ಯ ಸುರಕ್ಷತೆಯ ಭರವಸೆ ನೀಡಿದೆ. ತಂತ್ರಜ್ಞಾನದೊಂದಿಗೆ ದೇಶದ ಇಡೀ ಆರೋಗ್ಯ ವ್ಯವಸ್ಥೆಯನ್ನು ಏಕೀಕೃತಗೊಳಿಸಿದ ಈ ಯೋಜನೆ, ‘ಎಲ್ಲೆಡೆಯೂ ಆರೋಗ್ಯ, ಎಲ್ಲರಿಗೂ ಆರೋಗ್ಯ’ ಎಂಬ ಸಂದೇಶ ಸಾರಿದೆ. ಇದು ನವಭಾರತ ನಿರ್ಮಾಣದ ಸದೃಢ ಹೆಜ್ಜೆಗಳಲ್ಲೊಂದು.
|ಡಾ.ಕೆ.ಸುಧಾಕರ್ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರು
5 ಲಕ್ಷ ರೂ. ವಿಮೆ ಸೌಲಭ್ಯ:ಎಬಿಎಆರ್​ಕೆ ಯೋಜನೆಯಡಿ, ಬಡತನ ರೇಖೆಗಿಂತ ಕೆಳಗಿರುವವರಿಗೆ ಉಚಿತ ಚಿಕಿತ್ಸೆ (ಕೆಲ ಚಿಕಿತ್ಸೆಗೆ ಅತ್ಯಲ್ಪ ಮೊತ್ತ ಪಾವತಿಸಬೇಕು) ಬಿಪಿಎಲ್ ಕಾರ್ಡ ಹೊಂದಿರುವ ಪ್ರತಿ ಕುಟುಂಬ ವಾರ್ಷಿಕ 5 ಲಕ್ಷ ರೂ. ವರೆಗೆ ಹಾಗೂ ಎಪಿಎಲ್ ಕಾರ್ಡ ಹೊಂದಿರುವ ಕುಟುಂಬ ವಾರ್ಷಿಕ -ಠಿ;1.5 ಲಕ್ಷ ವರೆಗೆ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
