ನವದೆಹಲಿ:ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯಕಾರಿ ಮಂಡಳಿಯ ಅಧ್ಯಕ್ಷರಾಗಿ ಕೇಂದ್ರ ಆರೋಗ್ಯ ಖಾತೆ ಸಚಿವ ಡಾ. ಹರ್ಷ್​ ವರ್ಧನ್ ಅವರು ನೇಮಕಗೊಂಡಿದ್ದು. ಅವರು ಇದೇ 22ರಂದು ಅಧಿಕಾರ ಸ್ವೀಕರಿಸಲಿದ್ದಾರೆ. ಭಾರತದಲ್ಲಿ ಕರೊನಾ ವೈರಸ್​ ವಿರುದ್ಧದ ಹೋರಾಟದಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದಾರೆ.
ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಮಂಗಳವಾರ (ಮೇ 19) ನಡೆದ 73 ನೇ ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್‌ಎ) ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕಾರ್ಯಕಾರಿ ಮಂಡಳಿ ಮೂರು ವರ್ಷಗಳ ಅವಧಿಗೆ 34 ಸದಸ್ಯರನ್ನು ಇದೇ ವೇಳೆ ಆಯ್ಕೆ ಮಾಡಲಾಗಿದೆ. ಈ ಸಭೆಯು ಮೇ 22 ರಂದು ನಡೆಯಲಿದ್ದು, ಅಂದು ಡಾ.ಹರ್ಷ್​ ವರ್ಧನ್​ ಅಧಿಕಾರ ಸ್ವೀಕರಿಸಲಿದ್ದಾರೆ.
ಇದನ್ನೂ ಓದಿ:ಮುಸ್ಲಿಮರ ದುಡ್ಡು ಮುಸ್ಲಿಮರಿಗಷ್ಟೇ, ಕರೊನಾ ನಿಧಿಗೆ ಅಲ್ಲ ಎಂದ ಶಾಸಕ ಜಮೀರ್​ ಅಹ್ಮದ್​- ಹಣ ಕೊಡುವವರಿಗೂ ಅಡ್ಡಗಾಲು!
ಜಪಾನ್​ನ ಡಾ. ಹಿರೋಕಿ ನಕಟಾನಿ ಅವರು ಇಲ್ಲಿಯವರೆಗೆ ಈ ಹುದ್ದೆಯಲ್ಲಿದ್ದರು. ಭಾರತದ ಪ್ರತಿನಿಧಿಯನ್ನು ಕಾರ್ಯಕಾರಿ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಬೇಕೆಂಬ ಪ್ರಸ್ತಾವನೆಗೆ 194 ದೇಶಗಳನ್ನೊಳಗೊಂಡ ವಿಶ್ವ ಆರೋಗ್ಯ ಸಭೆಯಲ್ಲಿ ಸಹಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಾಮಾನ್ಯವಾಗಿ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ಈ ಸ್ಥಾನಕ್ಕೆ ನಾಮನಿರ್ದೇಶನ ಮಾಡಲಾಗುತ್ತದೆ. ಆದರೆ, ಕೇಂದ್ರ ಸರ್ಕಾರವು ತನ್ನ ಸಚಿವರನ್ನೇ ಆ ಸ್ಥಾನಕ್ಕೆ ನೇಮಿಸಲು ನಿರ್ಧರಿಸಿದೆ.
ಈ ಹುದ್ದೆಯನ್ನು ಭಾರತ ಸೇರಿದಂತೆ ಮೂರು ಆಗ್ನೇಯ ಏಷ್ಯಾ ರಾಷ್ಟ್ರಗಳಿಗೆ ನೀಡಲು ಕಳೆದ ವರ್ಷವೇ ನಿರ್ಧರಿಸಲಾಗಿತ್ತು. ಇದು ಪೂರ್ಣ ಸಮಯದ ಹುದ್ದೆ ಅಲ್ಲ. ಪೂರ್ಣಾವಧಿ ಕರ್ತವ್ಯ ನಿಭಾಯಿಸುವ ಅಗತ್ಯ ಸಂಸ್ಥೆಯಲ್ಲಿ ಇರುವುದಿಲ್ಲ. ವರ್ಷಕ್ಕೆ ಎರಡು ಬಾರಿ ನಡೆಯುವ (ದ್ವಿ-ವಾರ್ಷಿಕ) ಸಭೆಗಳ ನೇತೃತ್ವ ವಹಿಸುವುದು ಪ್ರಮುಖ ಕರ್ತವ್ಯವಾಗಿರುತ್ತದೆ. ಆರೋಗ್ಯ ಕ್ಷೇತ್ರಗಳಲ್ಲಿ ತಾಂತ್ರಿಕವಾಗಿ ಪರಿಣತರಾಗಿರುವ ವ್ಯಕ್ತಿಗಳನ್ನು ಇದಕ್ಕೆ ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ:ಕರೊನಾ ಸೋಂಕಿತರ ಪ್ರಯಾಣದ ಹಿನ್ನೆಲೆ, ಸಂಪರ್ಕ ವಿವರ ನೀಡುವುದನ್ನು ನಿಲ್ಲಿಸಿತೇ ಸರ್ಕಾರ?
ಮಾಜಿ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರು 2016 ರಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಇದೇ ರೀತಿಯ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದರು.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:17 − 7 =
Remember me
