ಬೆಳಗಾವಿ:ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜವನ್ನು ಸುಟ್ಟು ಹಾಕಿದ ಬಗ್ಗೆ ಸದನದಲ್ಲಿ ಆಕ್ರೋಶ ವ್ಯಕ್ತವಾಯಿತು. ಮಹಾರಾಷ್ಟ್ರಕ್ಕೆ ಎಚ್ಚರಿಕೆ ನೀಡುವ ಉದ್ದೇಶದಿಂದ ಖಂಡನೀಯ ನಿರ್ಣಯ ತೆಗೆದುಕೊಂಡು ಅಲ್ಲಿನ ಸರ್ಕಾರಕ್ಕೆ ಕಳುಹಿಸಿ ಪುಂಡರ ಮೇಲೆ ಕ್ರಮ ಜರುಗಿಸುವಂತೆ ಆಗ್ರಹಿಸಲು ನಿರ್ಧಾರ ತೆಗೆದುಕೊಳ್ಳಲಾಯಿತು. ಕನ್ನಡದ ಧ್ವಜ ಹಿಡಿದು ಸದನದಲ್ಲಿ ಈ ವಿಚಾರ ಪ್ರಸ್ತಾಪಿಸಿದ ಶಾಸಕ ಅನ್ನದಾನಿ, ಮಹಾರಾಷ್ಟ್ರದಲ್ಲಿ ನಡೆದಿರುವ ಕೃತ್ಯದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಲು ಮುಂದಾದರು. ಹೆಚ್ಚಿನ ಸದಸ್ಯರು ಮಾತನಾಡಲು ಸಮಯ ಕೇಳಿದರು. ಇದು ಬಹಳ ಬೇಸರದ ಸಂಗತಿಯಾಗಿದೆ. ಇದು ಶೂನ್ಯವೇಳೆ ಆಗಿರುವುದರಿಂದ ಹೆಚ್ಚು ಚರ್ಚೆ ಬೇಡ ಎಂದು ಸಭಾಧ್ಯಕ್ಷರು ಅವಕಾಶ ನೀಡಲಿಲ್ಲ. ಮಧ್ಯಪ್ರವೇಶಿಸಿದ ಸಿದ್ದರಾಮಯ್ಯ, ಆ ಪುಂಡರನ್ನು ನಾವು ಬಂಧಿಸಲು ಸಾಧ್ಯವಿಲ್ಲ. ಇದೊಂದು ಹೀನಾಯ ಕೃತ್ಯ. ಈ ಪುಂಡರ ಮೇಲೆ ಕ್ರಮ ಜರುಗಿಸುವಂತೆ ಆಗ್ರಹಿಸಿ ಸಭೆಯಲ್ಲಿ ಖಂಡನೀಯ ನಿರ್ಣಯ ತೆಗೆದುಕೊಂಡು ಅದನ್ನು ಮಹಾರಾಷ್ಟ್ರ ಸರ್ಕಾರಕ್ಕೆ ಕಳಹಿಸಿಸಬೇಕು ಎಂದರು. ಇದ್ಕುತ್ತರಿಸಿದ ಸಚಿವ ಆರ್.ಅಶೋಕ್, ಇಂತಹ ಕೃತ್ಯಕ್ಕೆ ಕುಮ್ಮಕ್ಕು ನೀಡುತ್ತಿರುವ ಎಂಇಎಸ್, ಶಿವಸೇನೆ ಯಾವುದೇ ಸಂಘಟನೆ ಇರಬಹುದು ಗಡಿಭಾಗದಲ್ಲಿ ಪುಂಡಾಟಿಕೆ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಅಲ್ಲಿನ ಸಿಎಂಗೆ ಒತ್ತಾಯ ತರಲಾಗುವುದು ಎಂದರು. ಇದೇ ವೇಳೆ ಬೆಳಗಾವಿಯಲ್ಲಿ ಕನ್ನಡ ವಿಚಾರವಾಗಿ ಪ್ರತಿಭಟನೆ ಮಾಡುವ ವೇಳೆ ಬಂಧಿಸಿರುವ ಕನ್ನಡಪರ ಹೋರಾಟಗಾರರನ್ನು ಬಿಡುಗಡೆ ಮಾಡುವಂತೆ ಒತ್ತಾಯ ಕೇಳಿಬಂತು.
ಸಾಮರಸ್ಯ ಕನ್ನಡಿಗರ ದೌರ್ಬಲ್ಯವಲ್ಲ:ಬೆಂಗಳೂರು: ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟು ಕರ್ನಾಟಕ ಮತ್ತು ಕನ್ನಡಿಗರನ್ನು ಕೆಣಕಿರುವ ಎಂಇಎಸ್ ಪುಂಡರ ವಿರುದ್ಧ ಕಠಿಣವಾಗಿ ವರ್ತಿಸುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬಹುಭಾಷಾ ಪ್ರೇಮ, ಸಾಮರಸ್ಯ ಕನ್ನಡಿಗರ ದೌರ್ಬಲ್ಯವಲ್ಲ, ಔದಾರ್ಯ. ಕನ್ನಡ ದ್ರೋಹಿಗಳ ವಿರುದ್ಧ ಸರ್ಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಒಂದೊಮ್ಮೆ ಕನ್ನಡ ದ್ರೋಹಿಗಳನ್ನು ಹಾಗೆಯೇ ಬಿಟ್ಟರೆ ಕರ್ನಾಟಕ ನಿಮ್ಮನ್ನು ಕ್ಷಮಿಸುವುದಿಲ್ಲ ಎಂದಿದ್ದಾರೆ.
ಆಗಿದ್ದೇನು?:ಬೆಳಗಾವಿ ಅಧಿವೇಶನ ವಿರೋಧಿಸಿ ಎಂಇಎಸ್ ಪುಂಡರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪ್ರತಿಭಟನಾನಿರತರಿಗೆ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಮಸಿ ಬಳಿಯುವ ಮೂಲಕ ಬಿಸಿ ಮುಟ್ಟಿಸಿದ್ದರು. ಪೊಲೀಸ್ ಠಾಣೆ ಮೆಟ್ಟಿಲೇರಿದ್ದ ಈ ಪ್ರಕರಣ ಮಸಿ ಬಳಿದ ಕನ್ನಡಿಗರ ಮೇಲೆ ಕೇಸ್ ದಾಖಲಾಗಿತ್ತು. ಇತ್ತ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಕೆಲ ಕಿಡಿಗೇಡಿಗಳು ನಾಡಧ್ವಜ ಸುಟ್ಟು ಉದ್ಧಟತನ ಮೆರೆದಿದ್ದರು.
ಜಾಲತಾಣದಲ್ಲಿ ಸಿನಿಮಂದಿ ಖಂಡನೆ:ಬೆಂಗಳೂರಿನಲ್ಲಿ ಸಿನಿಮಂದಿ ಮತ್ತು ಕನ್ನಡಪರ ಹೋರಾಟಗಾರರು ಎಂಇಎಸ್ ಪುಂಡರ ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟವರನ್ನು ವಿರುದ್ಧ ಕ್ರಮ ಜರುಗಿಸುವಂತೆ ಸಿಎಂ ಸೇರಿ ಗೃಹ ಸಚಿವರನ್ನು ಕೋರಿದ್ದಾರೆ. ‘ನಮ್ಮ ನಾಡಧ್ವಜ ಸುಟ್ಟವರಿಗೆ ತಕ್ಕ ಶಿಕ್ಷೆಯಾಗಲಿ. ನಿಜವಾದ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಿ. ಜೈ ಕನ್ನಡ, ಜೈ ಕರ್ನಾಟಕ’ ಎಂದು ಶಿವರಾಜ್​ಕುಮಾರ್ ಟ್ವೀಟ್ ಮಾಡಿದ್ದಾರೆ. ‘ನಾಡು, ನುಡಿ, ಭಾಷೆ ನಮ್ಮ ಉಸಿರಾಟದ ಒಂದು ಭಾಗ. ಕನ್ನಡಕ್ಕೆ ಮಾಡಿದ ಅವಮಾನವನ್ನು ಕನ್ನಡಾಂಬೆಯ ಮಕ್ಕಳಾಗಿ ನಾವ್ಯಾರೂ ಸಹಿಸೆವು. ಆ ದ್ರೋಹಿಗಳನ್ನು ಬಂಧಿಸಿ, ನಮ್ಮವರನ್ನು ಬಿಡುಗಡೆಗೊಳಿಸಿ’ ಎಂದು ‘ದುನಿಯಾ’ ವಿಜಯ್ ಹೇಳಿದರೆ, ‘ಅವರು ಸುಟ್ಟಿದ್ದು ಕನ್ನಡದ ಧ್ವಜವಲ್ಲ. ಕನ್ನಡಿಗರ ಸ್ವಾಭಿಮಾನದ ಕಿಚ್ಚು. ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆ ಆಗಬೇಕು’ ಎಂದು ಗಣೇಶ್ ಒತ್ತಾ ಯಿಸಿದ್ದಾರೆ. ಅದೇ ರೀತಿ ನಟರಾದ ಜಗ್ಗೇಶ್, ಧ್ರುವ ಸರ್ಜಾ, ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ವಿನೋದ್ ಪ್ರಭಾಕರ್, ಪ್ರಜ್ವಲ್ ದೇವರಾಜ್, ನಟಿ ಮೇಘನಾ ಗಾಂವ್ಕರ್ ಸೇರಿ ಹಲವರು ಈ ಕೃತ್ಯವನ್ನು ಖಂಡಿಸಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ವಿವಾದದ ಕಿಡಿ ಹೊತ್ತಿಸಿದ ಮಾಜಿ ಸ್ಪೀಕರ್ ರಮೇಶ್‌ ಕುಮಾರ್ ಮಾತು…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
