ನವದೆಹಲಿ:ಧಾರಾಕಾರ ಮಳೆಯಿಂದ ಉಂಟಾದ ಭಾರಿ ಭೂಕುಸಿತದಿಂದ ರಾಷ್ಟ್ರೀಯ ಹೆದ್ದಾರಿಯೊಂದು ಕೊಚ್ಚಿ ಹೋಗಿದ್ದು, ಇನ್ನು ಎರಡು ದಿನಗಳ ಕಾಲ ಈ ಭಾಗದಲ್ಲಿ ಸಂಚಾರವನ್ನು ಬಂದ್ ಮಾಡಲಾಗಿದೆ. ಮಾತ್ರವಲ್ಲ, ರಸ್ತೆಯನ್ನು ತೆರವುಗೊಳಿಸಲಿಕ್ಕೇ ಎರಡು ದಿನಗಳ ಕಾಲ ತಗುಲಲಿದೆ ಎನ್ನಲಾಗಿದೆ.
ಜಮ್ಮು-ಕಾಶ್ಮೀರದ ಉಧಂಪುರ ಜಿಲ್ಲೆಯ ಸಮ್ರೋಲಿ ಪ್ರದೇಶದಲ್ಲಿ ಈ ಭಾರಿ ಪ್ರಮಾಣದ ಭೂಕುಸಿತ ಉಂಟಾಗಿದೆ. ಪರಿಣಾಮವಾಗಿ ದೇವಲ್ ಬ್ರಿಡ್ಜ್ ಸಮೀಪ ರಾಷ್ಟ್ರೀಯ ಹೆದ್ದಾರಿ-44ರ ಸುಮಾರು ನೂರು ಮೀಟರ್ ಉದ್ದದ ರಸ್ತೆ ಕೊಚ್ಚಿಕೊಂಡು ಹೋಗಿದೆ.
ಮಳೆ ಹಾಗೂ ಭೂಕುಸಿತದ ತೀವ್ರತೆ ಯಾವ ಪರಿ ಇತ್ತೆಂದರೆ ಇಲ್ಲಿದ್ದ ಜೆಸಿಬಿ ಕೂಡ ನದಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಸದ್ಯಕ್ಕೆ ಸಂಚಾರ ಬಂದ್ ಮಾಡಲಾಗಿದ್ದು, ರಸ್ತೆಯನ್ನು ತೆರವುಗೊಳಿಸಲು ಎರಡು ದಿನ ಬೇಕಾಗುತ್ತದೆ ಎಂದು ಉಧಂಪುರ ಟ್ರಾಫಿಕ್​ ಡಿವೈಎಸ್​ಪಿ ಹಿಮತ್ ಸಿಂಗ್ ತಿಳಿಸಿದ್ದಾರೆ.
ವಿಶ್ವಪರ್ಯಟನೆಯಲ್ಲಿ ಗಗನಸುಖಿ: ನಮಸ್ಕಾರ ದೇವರು.. ಇದು ಡಾಕ್ಟರ್ ಬ್ರೋ..!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
