ವರುಣ ಅಬ್ಬರಕ್ಕೆ ಉತ್ತರ ಪ್ರದೇಶ ಅಕ್ಷರಶಃ ತತ್ತರಿಸಿ ಹೋಗಿದೆ. ಕಳೆದ 24 ಗಂಟೆಗಳಲ್ಲಿ ಉತ್ತರ ಪ್ರದೇಶದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ 19 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಪರಿಹಾರ ಆಯುಕ್ತರ ಕಚೇರಿ ಸೋಮವಾರ ಸಂಜೆ ಮಾಹಿತಿ ನೀಡಿದೆ.
ಭಾರೀ ಮಳೆಗೆ 13 ಮಂದಿ ಸಾವನ್ನಪ್ಪಿದ್ದರೆ, ಸಿಡಿಲು ಬಡಿದು ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಹೇಳಿದೆ.
ಲಕ್ನೋ, ಕಾನ್ಪುರ, ಉನ್ನಾವೋ, ಹರ್ದೋಯಿ ಮತ್ತು ಸೀತಾಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಮುಂಜಾಗ್ರತ ಕ್ರಮವಾಗಿ ಜಿಲ್ಲಾಡಳಿತಗಳು ಸೋಮವಾರ ಶಾಲೆಗೆ ರಜೆ ಘೋಷಣೆ ಮಾಡಲಾಗಿತ್ತು.ಕನ್ನೌಜ್‌ನಲ್ಲಿ, ತಿರ್ವಾ ಪ್ರದೇಶದ ಲಾಲ್ಕಿಯಾಪುರ ಗ್ರಾಮದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಇಬ್ಬರು ಸಹೋದರರಾದ ಕಲ್ಲು (13) ಮತ್ತು ಅವನೀಶ್ (17) ಸಾವನ್ನಪ್ಪಿದ್ದಾರೆ.
ಸೆಪ್ಟೆಂಬರ್ 14ರವರೆಗೆ ಭಾರಿ ಮಳೆಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಪೂರ್ವ ವಲಯದಲ್ಲಿ ಸೆಪ್ಟೆಂಬರ್ 14 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ಸೆಪ್ಟೆಂಬರ್ 17 ರವರೆಗೆ ಲಘು ಮಳೆ ಮುಂದುವರಿಯುತ್ತದೆ ಎಂದು ಪರಿಹಾರ ಆಯುಕ್ತರ ಕಚೇರಿಯ ಅಧಿಕಾರಿ ತಿಳಿಸಿದ್ದಾರೆ. ಸೆಪ್ಟೆಂಬರ್ 15 ರವರೆಗೆ ರಾಜ್ಯದಾದ್ಯಂತ ಸಿಡಿಲಿನ ಎಚ್ಚರಿಕೆಯಿದ್ದರೂ, ರಾಜ್ಯದ ಪಶ್ಚಿಮ ಭಾಗದಲ್ಲಿ ಸೆಪ್ಟೆಂಬರ್ 17 ರವರೆಗೆ ಮಳೆಯಾಗುವ ಸಾಧ್ಯತೆಯಿದೆ.ರಾಜಧಾನಿ ಲಕ್ನೋದಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಯವರೆಗೆ 99.9 ಮಿಮೀ ಮಳೆಯಾಗಿದ್ದು, ಶಾಲೆಗಳಿಗೆ ರಜೆ ನೀಡಲಾಗಿದ್ದು, ತೀವ್ರ ಸಿಡಿಲಿನ ಸಾಧ್ಯತೆಯ ಹಿನ್ನೆಲೆಯಲ್ಲಿ ಜನರು ಅನಗತ್ಯವಾಗಿ ಹೊರಗೆ ಬರದಂತೆ ಸೂಚನೆ ನೀಡಲಾಗಿದೆ. ನಗರದ ಮಧ್ಯಭಾಗದಲ್ಲಿರುವ ಪ್ರಸಿದ್ಧ ವಿಶಾಲವಾದ ಅಂಬೇಡ್ಕರ್ ಉದ್ಯಾನವನದಲ್ಲಿ ಸ್ಥಾಪಿಸಲಾದ 60 ಆನೆಗಳ 52 ನೇ ಪ್ರತಿಮೆ ಸಿಡಿಲು ಬಡಿದು ಹಾನಿಗೊಳಗಾಗಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eight − seven =
Remember me
