Weather Alert 27-08-2023::ಕರಾವಳಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಸೆಪ್ಟೆಂಬರ್ 3ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ,ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ ಎಂದು ತಿಳಿದುಬಂದಿದೆ.
ಕರಾವಳಿಯ ಹಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಲಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಆದರೂ ಜನರಿಗೆ ಬಿಸಿತಾಪ ನಿರಾಸೆಯನ್ನುಂಟು ಮಾಡಿದೆ.
ಇನ್ನೊಂದೆಡೆ ಭಾರತೀಯ ಹವಾಮಾನ ಇಲಾಖೆ (IMD) ದೇಶದ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಿದ್ದು, ಮುಂದಿನ ಎರಡು ಮೂರು ದಿನಗಳಲ್ಲಿ ಸಿಕ್ಕಿಂನಲ್ಲಿ ಭಾರೀ ಮಳೆಯಾಗಲಿದೆ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ ಮತ್ತು ಬಿಹಾರದಾದ್ಯಂತ ಇಡೀ ವಾರ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 1 =
Remember me
