ಚೆನ್ನೈ:ತಮಿಳುನಾಡಿನಲ್ಲಿ ಆ.13ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ರಾಜ್ಯದಲ್ಲೂ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ:‘ಐಟಂ ಸಾಂಗ್ ಮಾಡ್ಲಿಕ್ಕೆ ಇನ್ನೂ ಸಮಯ ಬಂದಿಲ್ಲ’: ಖಡಕ್​ ಉತ್ತರ ಕೊಟ್ಟ ಶ್ರೀಲೀಲಾ!
ಬಂಗಾಳಕೊಲ್ಲಿಯಲ್ಲಿ ಹವಾಮಾನ ಬದಲಾವಣೆಯಿಂದ ವಾಯುಭಾರ ಕುಸಿತ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮನ್ನಾರ್ ಕೊಲ್ಲಿ, ದಕ್ಷಿಣ ತಮಿಳುನಾಡು ಕರಾವಳಿ ಪ್ರದೇಶಗಳು ಮತ್ತು ಕುಮಾರಿ ಕರಾವಳಿ ಪ್ರದೇಶಗಳಲ್ಲಿ ಗಂಟೆಗೆ 35 ರಿಂದ 45 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ಭಾನುವಾರ ಗುಡ್ಡಗಾಡು ಜಿಲ್ಲೆಗಳಾದ ನೀಲಗಿರಿ, ಕೊಯಮತ್ತೂರು, ದಿಂಡಿಗಲ್, ಥೇಣಿ, ತೆಂಕಶಿ, ತಿರುನಲ್ವೇಲಿ, ಮಧುರೈ, ಕನ್ನಿಯಾಕುಮಾರಿ, ಶಿವಗಂಗೈ, ರಾಮನಾಥಪುರಂ, ತೂತುಕ್ಕುಡಿ, ಪುದುಕೋಟ, ತಂಜಾವೂರುಗಳಲ್ಲಿ ಗುಡುಗು, ಮಿಂಚಿನ ಸಮೇತ ಮಳೆಯಾಗಲಿದೆ ಎಂದು ತಿಳಿಸಿದೆ.
ಅಲ್ಲದೆ, ಕೋವೈ, ನೆಲ್ಲೈ, ನೀಲಗಿರಿ, ತಿರುಪ್ಪೂರ್, ಥೇಣಿ, ದಿಂಡಿಗಲ್, ಸೇಲಂ, ನಾಮಕ್ಕಲ್, ಕರೂರ್, ತಿರುಚ್ಚಿ, ಅರಿಯಲೂರ್, ಪೆರಂಬಲೂರು, ತಂಜಾವೂರು, ಪುದುಕೋಟ, ಕನ್ಯಾಕುಮಾರಿ ಮತ್ತು ಮಧುರೈ ಜಿಲ್ಲೆಗಳಲ್ಲಿ ಸೋಮವಾರ ಮಳೆಯಾಗುವ ಸಾಧ್ಯತೆ ಇದೆ.
ಚೆನ್ನೈ ಹಾಗೂ ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಕಾಶವು ಮೋಡ ಕವಿದ ವಾತಾವರಣವಿರುತ್ತದೆ. ಬೆಂಗಳೂರು ಸುತ್ತಮುತ್ತ ಮೋಡ ಕವಿದ ವಾತಾವರಣ ಇರಲಿದ್ದು, ಮಳೆ ನಿರೀಕ್ಷಿಸಲಾಗಿದೆ.
ಹಿಂಡೆನ್‌ಬರ್ಗ್ ವರದಿ: ಸೆಬಿ ಮುಖ್ಯಸ್ಥೆ ಮಾಧಬಿ ರಾಜೀನಾಮೆಗೆ ಪ್ರತಿಪಕ್ಷಗಳ ಒತ್ತಾಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − eight =
Remember me
