ಹೈದರಾಬಾದ್​:ಕಳೆದ 2-3 ದಿನಗಳಿಂದ ನೆರೆಯ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಸುರಿಯುತ್ತಿರುವ ಭಾರೀ ಮಳೆಗೆ ಜನರು ಹೈರಾಣಾಗಿದ್ದಾರೆ. ಇಂದು ಕೂಡ ವರುಣನ ಅಬ್ಬರ ಮುಂದುವರಿಯಲಿದ್ದು, ಮಳೆಯ ಅವಾಂತರ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಧಾರಾಕಾರ ಮಳೆ ಮತ್ತು ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ತೆಲುಗು ರಾಜ್ಯ ಸರ್ಕಾರಗಳು ಸೋಮವಾರ ಮತ್ತು ಮಂಗಳವಾರ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿತ್ತು. ಆದ್ರೆ, ಇಂದು ಕೂಡ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಇದೀಗ ತೆಲಂಗಾಣದ ನಾಲ್ಕು ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ:ಬಿಸಿಸಿಐ ಆಯ್ಕೆ ಸಮಿತಿಗೆ ಹೊಸ ಎಂಟ್ರಿ! ಅಂದು ಸಚಿನ್, ದ್ರಾವಿಡ್ ಜತೆ ತಂಡದಲ್ಲಿದ್ದ ಮಾಜಿ ಆಟಗಾರ ಇವರು
ಜಿಲ್ಲೆಯ ಹಲವು ಪ್ರದೇಶಗಳು ಮಳೆಯ ಅನಾಹುತಕ್ಕೆ ತುತ್ತಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಇನ್ನೇನು ಮಳೆಯ ತೀವ್ರತೆ ಕಡಿಮೆಯಾಗುತ್ತಿದೆ ಎಂಬ ಲಕ್ಷಣಗಳು ಕಾಣಿಸುವ ಮುನ್ನವೇ ಭಾರತೀಯ ಹವಾಮಾನ ಇಲಾಖೆ ಇಂದು (ಸೆ. 4) ನಾಲ್ಕು ಜಿಲ್ಲೆಗಳಿಗೆ ಭಾರೀ ಮಳೆಯ ಮುನ್ಸೂಚೆಯನ್ನು ಕೊಟ್ಟಿದೆ. ಐಎಂಡಿ ವರದಿ ಪ್ರಕಾರ, ಮಂಚೇರಿಯಲ್, ಜಯಶಂಕರ್ ಭೂಪಾಲಪಲ್ಲಿ, ಕುಮುರಂ ಭೀಮ್ ಆಸಿಫಾಬಾದ್, ಮತ್ತು ಮುಲುಗು ಪ್ರತ್ಯೇಕ ಪ್ರದೇಶಗಳಲ್ಲಿ ತೀವ್ರ ಮಳೆಯಾಗುವ ನಿರೀಕ್ಷೆಯಿದೆ.
ಇನ್ನು ಅದಿಲಾಬಾದ್, ಭದ್ರಾದ್ರಿ ಕೊಥಗುಡೆಮ್, ಖಮ್ಮಂ ಮತ್ತು ಮಹಬೂಬಾಬಾದ್ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಬಿರುಸಿನ ಗಾಳಿ, ಗುಡುಗು-ಮಿಂಚು ಸಹಿತ ಧಾರಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ನಿರಂತರ ಮಳೆಯಿಂದ ಪ್ರವಾಹದ ಭೀತಿ ಎದುರಾಗಿದ್ದು, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಮಳೆ ಅವಾಂತರಕ್ಕೆ ಒಟ್ಟು 35 ಜನರು ಬಲಿಯಾಗಿದ್ದಾರೆ. ಎರಡೂ ರಾಜ್ಯಗಳಲ್ಲಿ 47,000ಕ್ಕೂ ಅಧಿಕ ಜನರನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಆಂಧ್ರಪ್ರದೇಶದಲ್ಲಿ ಮಳೆಯ ಆರ್ಭಟಕ್ಕೆ 19 ಮಂದಿ ಸಾವಿಗೀಡಾದರೆ, ತೆಲಂಗಾಣದಲ್ಲಿ 16 ಜನರು ಮೃತಪಟ್ಟಿರುವುದಾಗಿ ವರದಿಯಾಗಿದೆ,(ಏಜೆನ್ಸೀಸ್).
ಮುಂಬೈ ಇಂಡಿಯನ್ಸ್​ಗೆ​ ಹಾರ್ದಿಕ್​ ಅತ್ಯುತ್ತಮ​​! ಕ್ಯಾಪ್ಟನ್ ಆಗಿ ಉಳಿಯಲು ಈ 3 ಕಾರಣಗಳೇ ಸಾಕು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 1 =
Remember me
