ನವದೆಹಲಿ:ಕರೊನಾ ವಿರುದ್ಧದ ಕಾರ್ಯಾಚರಣೆಯಲ್ಲಿ ಕೇಂದ್ರ ಸಚಿವರು ತಮ್ಮ ಪ್ರದೇಶಗಳ ಜನರಿಗೆ ನೆರವಾಗುವಂತೆ ಪ್ರಧಾನಿ ನರೇಂದ್ರ ಮೋದಿ ಸಂಪುಟ ಸಹೋದ್ಯೋಗಿಗಳಿಗೆ ಕರೆ ನೀಡಿದ್ದಾರೆ. ಶುಕ್ರವಾರ ವಿಡಿಯೋ ಕಾನ್ಪರೆನ್ಸ್ ಮೂಲಕ ಕೇಂದ್ರ ಸಚಿವ ಸಂಪುಟ ಸಭೆ ನಡೆಸಿದ ಅವರು, ಸ್ಥಳೀಯ ಮಟ್ಟದಲ್ಲಿ ಸಮಸ್ಯೆಗಳನ್ನು ಕ್ಷಿಪ್ರವಾಗಿ ಗುರುತಿಸಿ ಅವುಗಳ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದರು. ಕರೊನಾ ಸಾಂಕ್ರಾಮಿಕತೆ ನಿರ್ವಹಣೆ ಬಗ್ಗೆ ನೀತಿ ಆಯೋಗದ ಸದಸ್ಯ ವಿ.ಕೆ. ಪೌಲ್ ಪ್ರಾತ್ಯಕ್ಷಿಕೆ ನೀಡಿದರು.
ಶತಮಾನದ ಬಿಕ್ಕಟ್ಟು: ದೇಶವನ್ನು ಕಾಡುತ್ತಿರುವ ಕರೊನಾ ಮಹಾಮಾರಿ ‘ಶತಮಾನಕ್ಕೊಮ್ಮೆ ಕಾಡುವ ಬಿಕ್ಕಟ್ಟು’ ಎಂದು ಸಂಪುಟ ಸಭೆ ಅಭಿಪ್ರಾಯಪಟ್ಟಿದೆ. ಅದು ಜಗತ್ತಿಗೇ ಒಂದು ದೊಡ್ಡ ಸವಾಲನ್ನು ಒಡ್ಡಿದೆ ಎಂದೂ ಹೇಳಿದೆ.
ಸಶಸ್ತ್ರ ಪಡೆಗಳಿಗೆ ತುರ್ತು ಅಧಿಕಾರ: ಕೋವಿಡ್ ಬಿಕ್ಕಟ್ಟು ಎದುರಿಸಲು ಸಶಸ್ತ್ರ ಪಡೆಗಳಿಗೆ ಶುಕ್ರವಾರ ತುರ್ತು ಆರ್ಥಿಕ ಅಧಿಕಾರ ಮಂಜೂರು ಮಾಡಲಾಗಿದೆ. ಸೇವೆಗಳನ್ನು ಒದಗಿಸುವ ಸೌಲಭ್ಯಗಳ ಕಾರ್ಯಾಚರಣೆ, ಸಾಧನ ಸಲಕರಣೆ ಹಾಗೂ ಸಂಪನ್ಮೂಲಗಳ ಖರೀದಿ ಮತ್ತು ಇತರ ಯಾವುದೇ ತುರ್ತು ಕಾರ್ಯ ನಡೆಸಲು ಪಡೆಗಳಿಗೆ ಅದು ಅವಕಾಶ ಕಲ್ಪಿಸುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ತಿಳಿಸಿದ್ದಾರೆ. ಆಸ್ಪತ್ರೆ ಹಾಗೂ ಕ್ವಾರಂಟೈನ್ ಕೇಂದ್ರಗಳ ನಿರ್ಮಾಣ ಹಾಗೂ ನಿರ್ವಹಣೆಗೆ ಅವಕಾಶ ನೀಡುತ್ತದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 9 =
Remember me
