ನವದೆಹಲಿ:ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೋರೆನ್ ಪತ್ನಿ ಕಲ್ಪನಾ ಸೊರೆನ್ ಶನಿವಾರ ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಪತ್ನಿ ಸುನೀತಾ ಕೇಜ್ರಿವಾಲ್ ರನ್ನು ಭೇಟಿಯಾದರು.
ಇದನ್ನೂ ಓದಿ:ಕಾಲೇಜು ವಿದ್ಯಾರ್ಥಿಗೆ ಐಟಿ ಶಾಕ್! ಎಷ್ಟು ಕೋಟಿ ರೂಪಾಯಿ ಆದಾಯ ತೆರಿಗೆ ನೋಟಿಸ್ ನೀಡಿದ್ರು ಗೊತ್ತಾ?ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಕಲ್ಪನಾ ಸೊರೆನ್, ಎರಡು ತಿಂಗಳ ಹಿಂದೆ ಜಾರ್ಖಂಡ್‌ನಲ್ಲಿ ಏನಾಯಿತೋ, ಅದೇ ಘಟನೆ ಈಗ ದೆಹಲಿಯಲ್ಲಿ ಪುನರಾವರ್ತನೆಯಾಗಿದೆ. ಸುನೀತಾ ಕೇಜ್ರಿವಾಲ್ ಜೊತೆ ತಮ್ಮ ನೋವು ಹಂಚಿಕೊಳ್ಳಲು ಇಲ್ಲಿಗೆ ಬಂದಿದ್ದೇನೆ. ಒಗ್ಗಟ್ಟಾಗಿ ಹೋರಾಟ ನಡೆಸಲಿದ್ದೇವೆ. ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಸಹ ಭೇಟಿ ಮಾಡಲಿದ್ದೇವೆ ಎಂದು ಹೇಳಿದರು.
ದೆಹಲಿ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಕೋರ್ಟ್ ಇಡಿ ಕಸ್ಟಡಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಿಸಿದೆ.
ಕೇಜ್ರಿವಾಲ್ ಬಂಧನದ ವಿರುದ್ಧ ಹೋರಾಡಲು ಸುನೀತಾ ಕೇಜ್ರಿವಾಲ್ ಅವರು ‘ಕೇಜ್ರಿವಾಲ್ ಕೋ ಆಶೀರ್ವಾದ್’ ಎಂಬ ವಾಟ್ಸಾಪ್ ಅಭಿಯಾನವನ್ನು ಪ್ರಾರಂಭಿಸಿದ್ದಾರೆ.
ಏತನ್ಮಧ್ಯೆ, ಅಕ್ರಮ ಗಣಿಗಾರಿಕೆ ಆರೋಪದ ಮೇಲೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಎರಡು ತಿಂಗಳ ಹಿಂದೆ ಇಡಿ ಬಂಧಿಸಿತ್ತು, ಆದರೆ ಬಂಧನಕ್ಕೂ ಮುನ್ನ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಸುಳ್ಳು ಆರೋಪದ ಮೇಲೆ ಇಡಿ ತನ್ನ ಪತಿಯನ್ನು ಬಂಧಿಸಿದೆ ಮತ್ತು ಸಾರ್ವಜನಿಕ ಸೇವೆಗಾಗಿ ತನ್ನ ಪತಿಯ ಹೋರಾಟವನ್ನು ಮುಂದುವರಿಸುವುದಾಗಿ ಕಲ್ಪನಾ ಘೋಷಿಸಿದರು. ಈ ಹಿನ್ನೆಲೆಯಲ್ಲಿ ಕಲ್ಪನಾ ಸೊರೆನ್ ಮತ್ತು ಸುನೀತಾ ಕೇಜ್ರಿವಾಲ್ ಭೇಟಿಗೆ ಆದ್ಯತೆ ಸಿಕ್ಕಿದೆ.
ಗಾಯತ್ರಿ ಸಿದ್ದೇಶ್ವರ ಅಡುಗೆ ಮನೆಗಷ್ಟೇ ಲಾಯಕ್ಕು ಎಂದ ಶಾಮನೂರ್​​ಗೆ ಸೈನಾ ನೆಹ್ವಾಲ್ ತಿರುಗೇಟು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
