ಅಮರಾವತಿ:ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಗುಡ್ಲವಲ್ಲೇರು ಎಂಜಿನಿಯರಿಂಗ್ ಕಾಲೇಜಿನ ಬಾಲಕಿಯರ ಹಾಸ್ಟೆಲ್‌ನ ವಾಶ್‌ರೂಮ್‌ನಲ್ಲಿ ಸೀಕ್ರೇಟ್​ ಕ್ಯಾಮೆರಾ ಪತ್ತೆಯಾಗಿದ್ದು, ಬಳಿಕ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ:ಮದುವೆ ಮನೆಯಲ್ಲಿ ಬಾಡೂಟಕ್ಕೆ ಬಡಿದಾಡಿದ ಸಂಬಂಧಿಕರು..ಕಡೆಗೆ ಏನಾಯ್ತು ಗೊತ್ತಾ!
ವಿದ್ಯಾರ್ಥಿನಿಯರ ಹಾಸ್ಟೆಲ್‌ನೊಳಗೆ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿರುವ ವಿಡಿಯೋಗಳು ಪ್ರಸಾರವಾಗುತ್ತಿರುವುದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಕ್ಯಾಮೆರಾ ಇಟ್ಟವನನ್ನು ಅದೇ ಸಂಸ್ಥೆಯ ವಿದ್ಯಾರ್ಥಿ ವಿಜಯ್ ಎಂದು ಗುರುತಿಸಲಾಗಿದೆ. ಈ ಬಗ್ಗೆ ಅಧಿಕಾರಿಗಳು ಪೂರ್ಣ ಪ್ರಮಾಣದ ತನಿಖೆ ಆರಂಭಿಸಿದ್ದು, ವಿಜಯ್ ನ ಮೊಬೈಲ್​ ಮತ್ತು ಲ್ಯಾಪ್ ಟಾಪ್ ವಶಪಡಿಸಿಕೊಂಡಿದ್ದಾರೆ.
ತನಿಖೆಯ ಸಮಯದಲ್ಲಿ ಸುಮಾರು 300 ಅಶ್ಲೀಲ ವೀಡಿಯೋಗಳು ಪತ್ತೆಯಾಗಿವೆ. ವಿಜಯ್ ವೀಡಿಯೋಗಳನ್ನು ವಿತರಿಸುವಲ್ಲಿ ತೊಡಗಿಸಿಕೊಂಡಿದ್ದು, ಇದರಲ್ಲಿ ಇನ್ನೂ ಹಲವರು ಭಾಗಿಯಾಗಿರಬಹುದು ಎಂದು ಹೇಳಲಾಗುತ್ತಿದೆ.
ಇದೇ ಆ.9 ರಂದು ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ನಡೆದಿದ್ದು, ದೇಶಾದ್ಯಂತ ಬೃಹತ್​ ಪ್ರತಿಭಟನೆಗಳಿಗೆ ಕಾರಣವಾಗಿದ್ದನ್ನು ಸ್ಮರಿಸಬಹುದು.
‘ಕಂಗನಾಗೆ ಅತ್ಯಾಚಾರಗಳ ಬಗ್ಗೆ ಸಾಕಷ್ಟು ಅನುಭವವಿದೆ’: ವಿವಾದಾತ್ಮಕ ಹೇಳಿಕೆ ನೀಡಿದ ಸಿಮ್ರಂಜಿತ್​ಸಿಂಗ್ ಮಾನ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − fourteen =
Remember me
