ನವದೆಹಲಿ:ಕಳೆದ ಮೂರು ದಿನಗಳಿಂದ ಈಶಾನ್ಯ ದೆಹಲಿ ರಕ್ತಸಿಕ್ತವಾಗಿದೆ. ಸಿಎಎ ಪರ-ವಿರೋಧಿ ಬಣಗಳ ನಡುವಿನ ಸಂಘರ್ಷದಿಂದ ಉಂಟಾದ ಹಿಂಸಾಚಾರದಲ್ಲಿ ಇದುವರೆಗೆ ಜೀವ ಕಳೆದುಕೊಂಡವರು 22 ಮಂದಿ.ಹಿಂಸಾಚಾರದ ಪ್ರಕರಣವನ್ನು ದೆಹಲಿ ಹೈಕೋರ್ಟ್​ ವಿಚಾರಣೆ ನಡೆಸುತ್ತಿದ್ದು, ಈಗಾಗಲೇ ಕಪಿಲ್​ ಮಿಶ್ರಾ ಆಡಿರುವ ಪ್ರಚೋದನಾಕಾರಿ ಭಾಷಣದ ಆಡಿಯೋವನ್ನು ಕೇಳಿಸಿಕೊಂಡಿದೆ.
ದೆಹಲಿಯಲ್ಲಿ ನಡೆಯುತ್ತಿರುವ ಸಿಎಎ ಸಂಬಂಧಪಟ್ಟ ಗಲಭೆಯನ್ನು ಸಹಿಸಿಕೊಳ್ಳುವುದಿಲ್ಲ. 1984ರಲ್ಲಿ ನಡೆದಿದ್ದ ಸಿಖ್​ ವಿರೋಧಿ ದಂಗೆಯಂತಹ ಹಿಂಸಾಚಾರ ಇನ್ನೊಮ್ಮೆ ನಡೆಯಲು ಕೋರ್ಟ್​ ಯಾವ ಕಾರಣಕ್ಕೂ ಅನುಮತಿ ನೀಡುವುದಿಲ್ಲ. ಗಲಭೆಯ ಮೇಲೆ ಕೋರ್ಟ್​ ಕಣ್ಗಾವಲು ಇಡಲು ಸಾಧ್ಯವಿಲ್ಲ. ಹಿಂಸಾಚಾರದಿಂದ ಹಾನಿಗೊಳಗಾದ ಪ್ರದೇಶಗಳಿಗೆ ದೆಹಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಭೇಟಿಕೊಡಬೇಕು. ಸಂತ್ರಸ್ತ ಜನರಲ್ಲಿ ಆತ್ಮವಿಶ್ವಾಸ ತುಂಬಬೇಕು ಎಂದು ಹೈಕೋರ್ಟ್ ಹೇಳಿದೆ.
ಅಲ್ಲದೆ, ಸಂತ್ರಸ್ತರಿಗಾಗಿ ಸಹಾಯವಾಣಿ ಕೇಂದ್ರ ತೆರೆಯಬೇಕು. ಗಾಯಾಳುಗಳನ್ನು ಸುರಕ್ಷಿತವಾಗಿ ಸಾಗಿಸಲು ಖಾಸಗಿ ಆಂಬುಲೆನ್ಸ್​ಗಳನ್ನು ಒದಗಿಸಬೇಕು. ಮನೆಯನ್ನು ಕಳೆದುಕೊಂಡವರಿಗೆ ಆಶ್ರಯಕೇಂದ್ರಗಳನ್ನು ನಿರ್ಮಿಸಿ, ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ದೆಹಲಿ ಆಡಳಿತಕ್ಕೆ ಸೂಚಿಸಿದೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 5 =
Remember me
