ಅಮರಾವತಿ:ಅಮರಾವತಿ ಇನ್ನರ್​ ರಿಂಗ್​ ರೋಡ್ (IRR)​ ಜೋಡಣೆ ಹಾಗೂ ಫೈಬರ್​ ನೆಟ್​ ಹಗರಣಕ್ಕೆ ಸಂಬಂಧಿಸಿದಂತೆ ಟಿಡಿಪಿ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಗೆ ಭಾರೀ ಹಿನ್ನಡೆಯಾಗಿದ್ದು, ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಆಂಧ್ರಪ್ರದೇಶ ಹೈಕೋರ್ಟ್​ ತಿರಸ್ಕರಿಸಿದೆ.
ಆಗಸ್ಟ್​ ತಿಂಗಳಲ್ಲಿ ನೀರಾವರಿ ಯೋಜನೆಗಳನ್ನು ಜಾರಿ ಮಾಡುವಂತೆ ಆಗ್ರಹಿಸಿ ಚಂದ್ರಬಾಬು ನಾಯ್ಡು ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಅಂಗಲ್ಲು ಗ್ರಾಮದಲ್ಲಿ ರ‍್ಯಾಲಿ ವೇಳೆ ಸಂಭವಿಸಿದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್​ ತಿರಸ್ಕರಿಸಿದೆ.
ಚಂದ್ರಬಾಬು ನಾಯ್ಡು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಸುರೇಶ್​ ರೆಡ್ಡಿ, ವಾದ-ಪ್ರತಿವಾದವನ್ನು ಸುದೀರ್ಘವಾಗಿ ಆಲಿಸಿದ ಬಳಿಕ ಮೂರು ಪ್ರಕರಣಗಳಿಗೆ ಸಂಬಂಧಿಸಿದಂತೆ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ಧಾರೆ.
Andhra Pradesh High Court dismisses TDP chief and former CM Chandrababu Naidu's bail petitions in Inner Ring Road, Fiber Net and Angallu 307 cases: Advocate Krishna Murthy
ಇದನ್ನೂ ಓದಿ:VIDEO| ನನ್ನನ್ನು ಕೊಲ್ಲಬೇಡಿ ಎಂದು ಅಂಗಲಾಚಿದರು ಮಹಿಳೆಯನ್ನು ಬಿಡದ ಹಮಾಸ್ ಉಗ್ರರು
ಅಮರಾವತಿ ಇನ್ನರ್​ ರಿಂಗ್​ ರೋಡ್ (IRR)​ ಜೋಡಣೆ ಹಾಗೂ ಫೈಬರ್​ ನೆಟ್​ ಹಗರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸಿಐಡಿ ಚಂದ್ರಬಾಬು ನಾಯ್ಡು ಹಾಗೂ ಅವರ ಪುತ್ರ ನಾರಾ ಲೋಕೇಶ್​ ವಿರುದ್ಧ FIR ದಾಖಲಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ನೀಡಿದೆ.
ಏತನ್ಮಧ್ಯೆ, ವಿಜಯವಾಡ ಎಸಿಬಿ ನ್ಯಾಯಾಲಯವು ಅವರ ಜಾಮೀನು ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದ ಹಿನ್ನೆಲೆಯಲ್ಲಿ IRR ಮತ್ತು ಫೈಬರ್ ನೆಟ್ ಹಗರಣಕ್ಕೆ ಸಂಬಂಧಿಸಿದಂತೆ ನಾಯ್ಡು ಅವರ ಹೆಸರಿನಲ್ಲಿ ಸಿಐಡಿ ಹೊರಡಿಸಿದ ಕೈದಿ ಟ್ರಾನ್ಸಿಟ್ ವಾರಂಟ್‌ಗಳ ವಿಚಾರಣೆಯನ್ನು ಆಲಿಸುವ ಸಾಧ್ಯತೆಯಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seventeen + twelve =
Remember me
