ಚೆನ್ನೈ:ತಮಿಳುನಾಡು ಬಿಎಸ್‌ಪಿ ರಾಜ್ಯಾಧ್ಯಕ್ಷ ಕೆ.ಆರ್ಮ್‌ಸ್ಟ್ರಾಂಗ್ ಅವರನ್ನು ಪಕ್ಷದ ಕಚೇರಿ ಆವರಣದಲ್ಲಿ ಸಮಾಧಿ ಮಾಡುವಂತೆ ಕೋರಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ತಿರಸ್ಕರಿಸಿದೆ. ಬಿಎಸ್‌ಪಿ ಕಚೇರಿಯ ವಿಸ್ತೀರ್ಣ ತುಂಬಾ ಕಿರಿದಾಗಿದ್ದು, ಹೆಚ್ಚು ಜನ ಸೇರಿದರೆ ಭವಿಷ್ಯದಲ್ಲಿ ಸಮಸ್ಯೆಗಳು ಎದುರಾಗಬಹುದು ಎಂದು ನ್ಯಾಯಾಲಯ ಹೇಳಿದೆ. ಡಿಎಂಕೆ ಸರ್ಕಾರದ ನಿಲುವನ್ನು ಉಳಿಸಿಕೊಂಡು ಮದ್ರಾಸ್ ಹೈಕೋರ್ಟ್ ಭಾನುವಾರ ಈ ತೀರ್ಪು ನೀಡಿದೆ.
ಇನ್ನು ಓದಿ:ಕುಲ್ಗಾಮ್ ಎನ್​ಕೌಂಟರ್​​; ಉಗ್ರಗಾಮಿ ವಿರೋಧಿ ಕಾರ್ಯಾಚರಣೆಯಲ್ಲಿ 6 ಭಯೋತ್ಪಾದಕರು ಹತ
ಸಮಾಧಿ ಮಾಡುವಂತೆ ಕೋರಿ ಸಲ್ಲಿಸಲಾಗಿರುವ ಸ್ಥಳವು ಓಡಾಟದ ದಾರಿಯಾಗಿದೆ ಎಂದು ಗಮನಿಸಿದ ನ್ಯಾಯಮೂರ್ತಿ ವಿ ಭವಾನಿ ಸುಬ್ಬರಾಯನ್ ಅವರು ಪಕ್ಷದ ಕಚೇರಿ ವಸತಿ ಪ್ರದೇಶದಲ್ಲಿದೆ ಎಂದು ಪರಿಗಣಿಸಿ ಪರ್ಯಾಯ ಸ್ಥಳ ಲಭ್ಯವಿದೆಯೇ ಎಂದು ವಿಚಾರಿಸಿದರು. ಬಳಿಕ ಆರ್ಮ್‌ಸ್ಟ್ರಾಂಗ್ ಅವರ ದೇಹವನ್ನು ಸಮೀಪದ ತಿರುವಳ್ಳೂರು ಜಿಲ್ಲೆಯಲ್ಲಿನ ಖಾಸಗಿ ಒಡೆತನದ ಒಂದು ಎಕರೆ ಜಾಗದಲ್ಲಿ ಹೂಳಬಹುದು ಎಂದು ಹೈಕೋರ್ಟ್ ಹೇಳಿದೆ. ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಪೊತ್ತೂರು ಗ್ರಾಮದ ಖಾಸಗಿ ಜಮೀನಿನಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ.
ಆರ್ಮ್‌ಸ್ಟ್ರಾಂಗ್ ಅವರ ಪತ್ನಿ ಕೆ.ಪೊರ್ಕೋಡಿ ಅವರು ಪಕ್ಷದ ಕಚೇರಿಯಲ್ಲಿ ಸಮಾಧಿ ಮಾಡಲು ಅನುಮೋದನೆ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸರ್ಕಾರವು ವಸತಿ ಸ್ಥಳವನ್ನು ಉಲ್ಲೇಖಿಸಿ ಆಕ್ಷೇಪಿಸಿತು.
ಪಕ್ಷದ ನಾಯಕಿ ಮಾಯಾವತಿ ಮತ್ತು ರಾಷ್ಟ್ರೀಯ ಸಂಯೋಜಕ ಆಕಾಶ್ ಆನಂದ್ ಆರ್ಮ್‌ಸ್ಟ್ರಾಂಗ್ ಅವರ ಪಾರ್ಥಿವ ಶರೀರಕ್ಕೆ ನಮನ ಸಲ್ಲಿಸಿ ಹತ್ಯೆಯ ಕುರಿತು ಸಿಬಿಐ ತನಿಖೆಗೆ ಒತ್ತಾಯಿಸಿದರು. ಕೆ.ಆರ್ಮ್‌ಸ್ಟ್ರಾಂಗ್ ಅವರನ್ನು ಮನೆಯ ಬಳಿಯೇ ಜುಲೈ 5ರಂದು ಅಪರಿಚಿತ ವ್ಯಕ್ತಿಗಳು ಹತ್ಯೆ ಮಾಡಿದ್ದರು. ಪ್ರಕರಣದಲ್ಲಿ ಇದುವರೆಗೆ ಎಂಟು ಮಂದಿಯನ್ನು ಬಂಧಿಸಲಾಗಿದೆ. (ಏಜೆನ್ಸೀಸ್​​)
ಕ್ರಿಮಿನಲ್​ ಕಾನೂನುಗಳ ಬಗೆಗಿನ ಹೇಳಿಕೆಯನ್ನು ಸಮರ್ಥಿಸಿಕೊಂಡ ಕಾಂಗ್ರೆಸ್​ ನಾಯಕ ಪಿ.ಚಿದಂಬರಂ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
