ನವದೆಹಲಿ:ದೇಶದಲ್ಲಿ ಕಳೆದೆರಡು ವಾರಗಳಿಂದ ಕೋವಿಡ್ ಮತ್ತು ಇನ್​ಫ್ಲೂಯೆಂಜಾ ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಉನ್ನತಮಟ್ಟದ ಸಭೆಯೊಂದನ್ನು ನಡೆಸಿದ್ದಾರೆ. ಮಾತ್ರವಲ್ಲ, ಸೂಕ್ತ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳುವಂತೆಯೂ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ:ಹತ್ತು ವರ್ಷಗಳಿಗೂ ಅಧಿಕ ಕಾಲ ಒಂದಾದ ಮೇಲೊಂದು ಹೆರಿಗೆ; 28ನೇ ವಯಸ್ಸಿನಲ್ಲೇ 9 ಮಕ್ಕಳ ಮಹಾತಾಯಿ!
ಸಭೆ ಬಳಿಕ ಮಾತನಾಡಿದ ಅವರು, ದೇಶದಲ್ಲಿ ಹೊಸ ಕೋವಿಡ್ ಪ್ರಕರಣಗಳಲ್ಲಿ ಹಾಗೂ ಇನ್​ಫ್ಲೂಯೆಂಜಾ ಸೋಂಕಿನ ಪ್ರಕರಣಗಳಲ್ಲೂ ಸ್ವಲ್ಪ ಏರಿಕೆ ಕಂಡುಬಂದಿದೆ. ಹೀಗಾಗಿ ನಾವು ಕೋವಿಡ್ ಸಂಬಂಧಿತ ಮುನ್ನೆಚ್ಚರಿಕೆಗಳನ್ನು ಪಾಲಿಸುವ ಜತೆಗೆ ಶ್ವಾಸಕೋಶ ಸಂಬಂಧಿತ ಸ್ವಚ್ಛತೆಯನ್ನು ಕೂಡ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ. ಅಲ್ಲದೆ ಲ್ಯಾಬ್​ಗಳ ಮೇಲೆ ಕಣ್ಗಾವಲು ಇಡುವ ಜತೆಗೆ ಜೀನೋಮ್ ಟೆಸ್ಟಿಂಗ್ ಮತ್ತು ಶ್ವಾಸಕೋಶ ಸಂಬಂಧಿತ ರೋಗಗಳ ಮೇಲೆ ತೀವ್ರ ನಿಗಾ ಇಡುವ ಅಗತ್ಯವಿದೆ ಎಂದೂ ಅವರು ತಿಳಿಸಿದ್ದಾರೆ.
ಇದನ್ನೂ ಓದಿ:ಪೊಲೀಸರಿಂದಲೇ ಅಪಹರಣ, ಹಣಕ್ಕೆ ಬೇಡಿಕೆ?; ತಲೆಮರೆಸಿಕೊಂಡಿರುವ ಸಬ್​ ಇನ್​ಸ್ಪೆಕ್ಟರ್!
ಹಿರಿಯ ನಾಗರಿಕರು ಹಾಗೂ ಕೋಮಾರ್ಬಿಡಿಟಿ ಇರುವಂಥವರು ಜನಸಂದಣಿ ಇರುವ ಸ್ಥಳಗಳಲ್ಲಿ ಹೋಗಬೇಕಾದಾಗ ಮಾಸ್ಕ್​ ಧರಿಸುವುದು ಉತ್ತಮ ಎಂದಿರುವ ಪ್ರಧಾನಿ ಮೋದಿ, ಕೋವಿಡ್ -19 ಸಾಂಕ್ರಾಮಿಕ ರೋಗ ಇನ್ನೂ ಮುಗಿದಿಲ್ಲ ಮತ್ತು ದೇಶಾದ್ಯಂತ ಕರೊನಾ ಪರಿಸ್ಥಿತಿಯನ್ನು ನಿಯಮಿತವಾಗಿ ಮೇಲ್ವಿಚಾರಣೆ ಮಾಡುವ ಅವಶ್ಯಕತೆ ಇದೆ ಎಂಬುದನ್ನೂ ಒತ್ತಿ ಹೇಳಿದ್ದಾರೆ.
ಇದನ್ನೂ ಓದಿ:ದೆಹಲಿಯಲ್ಲಿ ಭೂಕಂಪ!; ವರ್ಷಾರಂಭದಲ್ಲೇ ನಡುಗಿದ ಭೂಮಿ, ಆತಂಕದಲ್ಲಿ ರಾಜಧಾನಿಯ ಜನತೆ
ದೇಶದ ಆರು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳ ಕಂಡುಬಂದಿದ್ದ ಹಿನ್ನೆಲೆಯಲ್ಲಿ ಕಳೆದ ವಾರ ಕೇಂದ್ರ ಆರೋಗ್ಯ ಸಚಿವಾಲಯವು ಸೂಕ್ತ ಕ್ರಮಕೈಗೊಳ್ಳುವಂತೆ ಆಯಾ ರಾಜ್ಯಗಳಿಗೆ ತಿಳಿಸಿತ್ತು.
ಬೆರಳ ತುದಿಯಲ್ಲೇ ಇದೆ ಬದಲಿಸುವ ಶಕ್ತಿ; ಚುನಾವಣೆ ಸುಧಾರಣೆಗೆ ಆಗಲಿ ಬದಲಾವಣೆ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × four =
Remember me
