ಬೆಂಗಳೂರು:ಸದ್ಯ ಚಾಲ್ತಿಯಲ್ಲಿರುವ ಸ್ಮಾರ್ಟ್ ಕಾರ್ಡ್ ಆಧಾರಿತ ವಾಹನ ನೋಂದಣಿ ಪ್ರಮಾಣಪತ್ರ (ಆರ್​ಸಿ) ವಿತರಣೆ ವ್ಯವಸ್ಥೆಯನ್ನು ಡೀಲರ್​ವುಟ್ಟದಲ್ಲಿ ಹೊಸ ವಾಹನಗಳ ಆನ್​ಲೈನ್ ನೋಂದಣಿಯಲ್ಲಿಯೂ ಮುಂದುವರಿಸ ಬಹುದೇ ಎನ್ನುವುದನ್ನು ಸ್ಪಷ್ಟಪಡಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಕರ್ನಾಟಕ ಮೋಟಾರು ವಾಹನ ಅಧಿನಿಯಮ-1989ರ ನಿಯಮ 33ಕ್ಕೆ ತಿದ್ದುಪಡಿ ತಂದು, ಹೊಸ ವಾಹನಗಳಿಗೆ ಡೀಲರ್ ಮಟ್ಟದಲ್ಲೇ ಎಲೆಕ್ಟ್ರಾನಿಕ್ ಅಥವಾ ಆನ್​ಲೈನ್ ಮೂಲಕ ಆರ್​ಸಿ ವಿತರಿಸುವ ಸಂಬಂಧ 2021ರ ಅ.31ರಂದು ಸಾರಿಗೆ ಇಲಾಖೆ ಹೊರಡಿಸಿರುವ ಅಧಿಸೂಚನೆ ಪ್ರಶ್ನಿಸಿ, ಸ್ಮಾರ್ಟ್ ಕಾರ್ಡ್ ಆಧಾರಿತ ಆರ್​ಸಿ ವಿತರಣಾ ಸಂಸ್ಥೆಯಾದ ರೊಸ್ಮೆರ್ಟಾ ಟೆಕ್ನಾಲಜೀಸ್ ಸಲ್ಲಿಸಿರುವ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದ ಸಿಜೆ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿತು.
ಇದಕ್ಕೂ ಮುನ್ನ ಸರ್ಕಾರದ ಪರ ಹೆಚ್ಚುವರಿ ಅಡ್ವೊಕೇಟ್ ಜನರಲ್ ಧ್ಯಾನ್ ಚಿನ್ನಪ್ಪ ಹಾಜರಾಗಿ, ಅ.31ರ ಅಧಿಸೂಚನೆಗೂ ಮೊದಲು ಜಾರಿಯಲ್ಲಿದ್ದ ವ್ಯವಸ್ಥೆಯಂತೆಯೇ ಆರ್​ಸಿ ವಿತರಿಸಬೇಕೆಂದು ಕಳೆದ ಡಿ.7ರಂದು ನ್ಯಾಯಾಲಯ ಮಧ್ಯಂತರ ಆದೇಶ ನೀಡಿದೆ. ಆ ಆದೇಶ ತೆರವಿಗೆ ಕೋರಿ ಸರ್ಕಾರ ಮಧ್ಯಂತರ ಅರ್ಜಿ ಸಲ್ಲಿಸಿದೆ ಎಂದು ತಿಳಿಸಿದರು. ಅರ್ಜಿದಾರ ಸಂಸ್ಥೆಯ ಪರ ಹಿರಿಯ ವಕೀಲ ಸಜನ್ ಪೂವಯ್ಯ, ಸ್ಮಾರ್ಟ್ ಕಾರ್ಡ್ ಆಧಾರಿತ ಆರ್​ಸಿ ವಿತರಿಸಲು ಸರ್ಕಾರ ನಮ್ಮೊಂದಿಗೆ 15 ವರ್ಷಗಳ ಕನ್ಸೆಷನ್ ಅಗ್ರಿಮೆಂಟ್ (ವಿನಾಯಿತಿ ಒಪ್ಪಂದ) ಮಾಡಿಕೊಂಡಿದೆ. ಆ ಒಪ್ಪಂದ 2024ರ ವರೆಗೆ ಜಾರಿಯಲ್ಲಿರಲಿದೆ. ಈ ವಿಚಾರವನ್ನು ಪರಿಗಣಿಸಿಯೇ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.
ವಾದ-ಪ್ರತಿವಾದ ಆಲಿಸಿದ ಪೀಠ, ಸ್ಮಾರ್ಟ್ ಕಾರ್ಡ್ ವ್ಯವಸ್ಥೆಯನ್ನು ಮುಂದುವರಿಸಬಹುದೇ, ಡೀಲರ್​ವುಟ್ಟದಲ್ಲಿ ನಡೆಸುವ ಆನ್​ಲೈನ್ ನೋಂದಣಿಯಲ್ಲೂ ಸ್ಮಾರ್ಟ್ ಕಾರ್ಡ್ ವಿತರಿಸಬಹುದೇ ಎನ್ನುವುದನ್ನು ಸರ್ಕಾರ ಸ್ಪಷ್ಟಪಡಿಸಿದರೆ ಅರ್ಜಿಯನ್ನೇ ಇತ್ಯರ್ಥಪಡಿಸಬಹುದು ಎಂದು ಹೇಳಿತು. ಈ ಕುರಿತು ಮಾಹಿತಿ ಪಡೆದು ತಿಳಿಸಲಾಗುವುದು ಎಂದು ಎಎಜಿ ಹೇಳಿದರು. ಅದನ್ನು ಪರಿಗಣಿಸಿದ ಪೀಠ ವಿಚಾರಣೆಯನ್ನು ಫೆ.28ಕ್ಕೆ ಮುಂದೂಡಿತು.
ದ್ವಿಚಕ್ರವಾಹನದಲ್ಲಿ 4 ವರ್ಷದೊಳಗಿನ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ; ವೇಗ ಮಿತಿ ಕೂಡ ಅನ್ವಯ…

ಆನ್​ಲೈನ್​ ಫ್ರೆಂಡ್​ ಜತೆ ಕಷ್ಟ ಹೇಳ್ಕೊಂಡಿದ್ದಕ್ಕೆ 86 ಲಕ್ಷ ರೂ. ಕಳ್ಕೊಂಡ; ಅದೃಷ್ಟವಶಾತ್​ ಕಿಡ್ನಿ ಉಳೀತು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + twelve =
Remember me
