ಮುಂಬೈ:ಕಳೆದ 24 ಗಂಟೆಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಮಹಾನಗರಿ ತತ್ತರಿಸಿ ಹೋಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮುಂಬೈ ಮತ್ತು ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ಮುಖ್ಯರಸ್ತೆಗಳು ಜಲಾವೃತಗೊಂಡಿವೆ. ಭಾರೀ ಮಳೆಯಿಂದ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ರೈಲಿನ ಬೆನ್ನಲ್ಲೇ ಇದೀಗ ವಿಮಾನ ಹಾರಾಟ ಕೂಡ ರದ್ದುಗೊಳಿಸಲಾಗಿದೆ.
ಇದನ್ನೂ ಓದಿ:ಸಂದೇಶಖಾಲಿ ಪ್ರಕರಣ: ಸಿಬಿಐ ತನಿಖೆ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್​​
ಇಂದು ನಸುಕಿನ ಜಾವ 1 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ಧಾರಕಾರ ಮಳೆ ಸುರಿದಿದ್ದು, ಆರು ಗಂಟೆಗಳ ಅವಧಿಯಲ್ಲಿ ನಗರದ ಕೆಲವು ಪ್ರದೇಶಗಳಲ್ಲಿ 300 ಮಿ.ಮೀ.ಗೂ ಅಧಿಕ ಮಳೆ ದಾಖಲಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆ ಇದೀಗ ಭಾರತೀಯ ಹವಾಮಾನ ಇಲಾಖೆ ಸದ್ಯ ಮುಂಬೈ ನಗರಕ್ಕೆ ಆರೆಂಜ್​ ಅಲರ್ಟ್​ ಘೋಷಿಸಿದೆ.
ಥಾಣೆ, ಪಾಲ್ಘರ್ ಮತ್ತು ಕೊಂಕಣ ಬೆಲ್ಟ್. ವಿಕ್ರೋಲಿಯ ವೀರ್ ಸಾವರ್ಕರ್ ಮಾರ್ಗ್ ಮುನ್ಸಿಪಲ್ ಸ್ಕೂಲ್ ಮತ್ತು ಎಂಸಿಎಂಸಿಆರ್ ಪೊವಾಯಿಯಲ್ಲಿ ಕಳೆದ 24 ಗಂಟೆಗಳಲ್ಲಿ 315 ಮಿ.ಮೀಗಿಂತಲೂ ಹೆಚ್ಚು ಮಳೆ ದಾಖಲಾಗಿದೆ. ಐಎಂಡಿ ವರದಿ ಬೆನ್ನಲ್ಲೇ 50ಕ್ಕೂ ಹೆಚ್ಚು ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ,(ಏಜೆನ್ಸೀಸ್).
ಅಭಿಷೇಕ್​ ಶರ್ಮ ಶತಕಕ್ಕೆ ಗಿಲ್ ಕೊಟ್ಟ ಈ ಗಿಫ್ಟ್​​ ಕಾರಣ! ಇದರಿಂದಲೇ ಒಲಿಯಿತು ‘ಅಭಿ’ಗೆ ಅದೃಷ್ಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 3 =
Remember me
