ನವದೆಹಲಿ:ಶಾಲಾ ಮತ್ತು ಕಾಲೇಜು ತರಗತಿಗಳಲ್ಲಿ ಹಿಜಾಬ್​ ಧರಿಸುವುದನ್ನು ನಿಷೇಧಿಸಿದ್ದ ಕರ್ನಾಟಕ ಸರ್ಕಾರದ ಆದೇಶ ಎತ್ತಿ ಹಿಡಿದ ರಾಜ್ಯ ಹೈಕೋರ್ಟ್​ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್​ ಸೋಮವಾರ ವಿಚಾರಣೆಗೆ ಎತ್ತಿಕೊಳ್ಳಲಿದೆ.
ನೂತನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಆಗಿ ಯು.ಯು. ಲಲಿತ್​ ಅವರ ಮೊದಲ ಕೆಲಸದ ದಿನವಾದ ಸೋಮವಾರವೇ ಈ ಮಹತ್ವದ ಅರ್ಜಿ ವಿಚಾರಣೆ ನಡೆಯಲಿದೆ. ನ್ಯಾಯಮೂರ್ತಿಗಳಾದ ಹೇಮಂತ್​ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರಿರುವ ನ್ಯಾಯ ಪೀಠ ವಿಚಾರಣೆ ನಡೆಸಲಿದೆ.
ಅರ್ಜಿಯನ್ನು ತುರ್ತು ವಿಚಾರಣೆಗೆ ತೆಗೆದುಕೊಳ್ಳುವಂತೆ ಅಂದಿನ ಸಿಜೆಐ ಎನ್​.ವಿ. ರಮಣ ಹಲವು ಬಾರಿ ಸೂಚಿಸಿದ್ದರು. ಆದರೆ ಈ ಪ್ರಕರಣ ವಿಚಾರಣೆಗೆ ಲಿಸ್ಟ್​ ಆಗಿರಲಿಲ್ಲ. ಸರ್ಕಾರಿ ಅಧಿಕಾರಿಗಳ ಮಲತಾಯಿ ಧೋರಣೆಯಿಂದಾಗಿ ವಿದ್ಯಾರ್ಥಿಗಳ ನಂಬಿಕೆಯ ಆಚರಣೆಗೆ ಅಡ್ಡಿಯಾಗಿದೆ. ಇದರಿಂದ ಅನಗತ್ಯ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆ ಉಂಟಾಗಿದೆ ಎಂದು ಒಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − 8 =
Remember me
