ಶಿಮ್ಲಾ:ಪ್ರವಾಸಿ ತಾಣಗಳ ರಾಜ್ಯವಾಗಿರುವ ಹಿಮಾಚಲ ಪ್ರದೇಶದಲ್ಲಿ ನಡೆಯಬಾರದ ಘಟನೆಯೊಂದು ಭಾನುವಾರದಂದು ನಡೆದಿದೆ. ಗುಡ್ಡದ ಮೇಲ್ಭಾಗದಲ್ಲಿದ್ದ ಕಲ್ಲು ಬಂಡೆಗಳು ಇದ್ದಕ್ಕಿದ್ದಂತೆ ಕುಸಿದುಬಿದ್ದಿದ್ದು, ಅದರಿಂದಾಗಿ ಸೇತುವೆಯೂ ಮುರಿದುಬಿದ್ದಿದೆ. ಘಟನೆಯಲ್ಲಿ 9 ಪ್ರವಾಸಿಗರು ಬಲಿಯಾಗಿರುವುದಾಗಿ ಹೇಳಲಾಗಿದೆ.
ಸಾಂಗ್ಲಾ ಕಣಿವೆಯಲ್ಲಿ ಇಂತದ್ದೊಂದು ಘಟನೆ ನಡೆದಿದೆ. ಸೇತುವೆಯ ಬಳಿ ಪ್ರವಾಸಿಗರ ವಾಹನಗಳಿದ್ದವು. ಅದರ ಮೇಲೆ ಬಂಡೆ ಉರುಳಿ ಬಿದ್ದಿದ್ದರಿಂದಾಗಿ ಅವರ 11 ಪ್ರವಾಸಿಗರಿಗೆ ಗಾಯವಾಗಿದೆ. ಅದರಲ್ಲಿ 9 ಪ್ರವಾಸಿಗರು ಸಾವನ್ನಪ್ಪಿದ್ದಾರೆ ಎಂದು ಅಲ್ಲಿನ ಎಸ್​ಪಿ ಕಿನ್ನೌರ್ನ ಸಾಜು ರಾಮ್ ರಾಣಾ ತಿಳಿಸಿದ್ದಾರೆ. ಘಟನೆಯಲ್ಲಿ ಗಾಯಾಳುವಾದವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವೈದ್ಯರ ತಂಡವನ್ನೂ ಕರೆಸಲಾಗಿದೆ ಎಂದು ತಿಳಿಸಲಾಗಿದೆ.
#WATCH| Himachal Pradesh: Boulders roll downhill due to landslide in Kinnaur district resulting in bridge collapse; vehicles damagedpic.twitter.com/AfBvRgSxn0
— ANI (@ANI)July 25, 2021

ಘಟನೆಯ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್​ನಲ್ಲಿ ಸೆರೆ ಹಿಡಿದುಕೊಂಡಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. (ಏಜೆನ್ಸೀಸ್)
24 ಗಂಟೆಗಳಲ್ಲಿ 262 ತಾಲಿಬಾನ್ ಉಗ್ರರನ್ನು ಹೊಡೆದುರುಳಿಸಿದ ಅಫ್ಘಾನ್ ಸೇನೆ

ಒಲಿಂಪಿಕ್ಸ್​ನಲ್ಲಿ ಬೆಳ್ಳಿ ಗೆದ್ದ ಮೀರಾಬಾಯಿ ನಾಳೆ ಭಾರತಕ್ಕೆ ವಾಪಸ್

ಬಿಗ್​ಬಾಸ್ ಮಾಜಿ ಸ್ಪರ್ಧಿ ಕಾರು ಅಪಘಾತ; ಅಮೆರಿಕದಿಂದ ಬಂದಿದ್ದ ಸ್ನೇಹಿತೆ ಸ್ಥಳದಲ್ಲೇ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
