ನವದೆಹಲಿ:ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಆಡಾಳಿತಾರೂಢ ಬಿಜೆಪಿಗೆ ನೆಕ್​ ಟು ನೆಕ್​ ಪೈಟ್​ ಕೊಟ್ಟ ಕಾಂಗ್ರೆಸ್, ಅಧಿಕಾರದ ಗದ್ದುಗೆ ಏರುವುದು ಖಚಿತ. ಈಗಾಗಲೇ ಮ್ಯಾಜಿಕ್​ ನಂಬರ್​ 35 ದಾಟಿರುವ ಕಾಂಗ್ರೆಸ್​ ಭರ್ಜರಿ ಗೆಲುವಿನತ್ತ ಮುನ್ನುಗ್ಗುತ್ತಿದೆ.
ನವೆಂಬರ್​ 12ರಂದು ಹಿಮಾಚಲಪ್ರದೇಶ ವಿಧಾನಸಭೆ ಚುನಾವಣೆ ನಡೆದಿತ್ತು. ರಾಜ್ಯದಲ್ಲಿ ಒಟ್ಟು 68 ಕ್ಷೇತ್ರಗಳಿದ್ದು, ಬಹುಮತ ಪಡೆಯಲು ಮ್ಯಾಜಿಕ್​ ನಂಬರ್​ 35. ಸಂಜೆ 4.10ರ ವೇಳೆಗೆ ಕಾಂಗ್ರೆಸ್​ 35 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ್ದು, ಬಿಜೆಪಿ 21 ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ. ಇನ್ನೂ 9 ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಈ ಪೈಕಿ ಬಿಜೆಪಿ 5, ಕಾಂಗ್ರೆಸ್​ 4 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕೆಲವೇ ಕ್ಷಣದಲ್ಲಿ ಅಧಿಕೃತವಾಗಿ ಫಲಿತಾಂಶ ಹೊರಬೀಳಲಿದೆ.
1985ರಿಂದ ಇಲ್ಲಿ ಪ್ರತಿ ಐದು ವರ್ಷಕ್ಕೊಮ್ಮೆ ಸರ್ಕಾರ ಬದಲಾಗುತ್ತಾ ಬಂದಿದೆ. ಕಳೆದ ಬಾರಿ ಬಿಜೆಪಿ 44 ಸೀಟುಗಳನ್ನು ಗೆದ್ದಿತ್ತು. 21 ಸ್ಥಾನಗಳನ್ನು ಕಾಂಗ್ರೆಸ್​ ಗೆದ್ದುಕೊಂಡಿತ್ತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ತವರು ರಾಜ್ಯ ಹಿಮಾಚಲ ಪ್ರದೇಶದಲ್ಲಿ ಈ ಬಾರಿ ಕಾಂಗ್ರೆಸ್​ ಅಧಿಕಾರದ ಗದ್ದುಗೆ ಏರಲಿದೆ.
ಹಿಮಾಚಲ ಪ್ರದೇಶದ ನೂತನ ಸಿಎಂ ಆಗಿ ದಿ. ವೀರಭದ್ರ ಸಿಂಗ್ ಅವರ ಪುತ್ರಿ ಪ್ರತಿಭಾ ವಿ. ಸಿಂಗ್ ಆಯ್ಕೆ ಆಗುವ ಸಾಧ್ಯತೆ ದಟ್ಟವಾಗಿದೆ. ಕಾಂಗ್ರೆಸ್​ಗೆ ಬಹುಮತ ಸಿಗುತ್ತಿದ್ದಂತೆ ಸಂತಸ ಹಂಚಿಕೊಂಡಿರುವ ಪ್ರತಿಭಾ ಸಿಂಗ್, ಆಪರೇಷನ್​ ಕಮಲದ ಬಗ್ಗೆ ಚಿಂತೆಯಿಲ್ಲ, ನಮ್ಮದೇ ಸರ್ಕಾರ ಎಂದಿದ್ದಾರೆ.
ಮೊರ್ಬಿ ಸೇತುವೆ ದುರಂತದ ವೇಳೆ ನದಿಗೆ ಜಿಗಿದು ಜನರನ್ನು ರಕ್ಷಿಸಿದ್ದ ಬಿಜೆಪಿ ಅಭ್ಯರ್ಥಿ ಗೆಲುವು

ಪಿಯು ಪಾಸಾದವರಿಗೆ ಕೇಂದ್ರ ಸರ್ಕಾರಿ ಹುದ್ದೆ: ಎಸ್​ಎಸ್​ಸಿಯಿಂದ 4,500 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ನ.22ರಿಂದ ರಾಜ್ಯದಲ್ಲಿ ಮತ್ತೆ ಮಳೆ: ಚಳಿಯೂ ಹೆಚ್ಚಳ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − eighteen =
Remember me
