ಅಸ್ಸಾಂ:ಖಾಸಿ ಉಡುಗೆ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಅಪಹಾಸ್ಯ ಮಾಡುವ ಮೂಲಕ ಮೇಘಾಲಯದ ಸಂಸ್ಕೃತಿಯನ್ನು ತೃಣಮೂಲ ಕಾಂಗ್ರೆಸ್ ನಾಯಕ ಕೀರ್ತಿ ಆಜಾದ್ ಅಗೌರವಿಸಿದ್ದಾರೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಆರೋಪಿಸಿದ್ದಾರೆ.
ಟ್ವೀಟ್ ಮೂಲಕ, ಶಿಲ್ಲಾಂಗ್‌ಗೆ ಭೇಟಿ ನೀಡಿದ್ದಾಗ ಮೋದಿ ಧರಿಸಿದ್ದು ಮಹಿಳೆಯರ ಉಡುಪು ಎಂದು ಕೀರ್ತಿ ಆಜಾದ್ ಕಮೆಂಟ್ ಮಾಡಿದ್ದರು. ಇದಕ್ಕೆ ಬಿಜೆಪಿ ವಲಯದಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಈ ವಿಚಾರವಾಗಿ ಕೀರ್ತಿ ಆಜಾಯ್ ಪ್ರತಿಕ್ರಿಯಿಸಿ, ನನಗೆ ಯಾವುದೇ ಉಡುಪಿಗೆ ಅಗೌರವಿಸುವ ಉದ್ದೇಶ ಇಲ್ಲ. ಪ್ರಧಾನಿ ಮೋದಿಯವರ ಫ್ಯಾಶನ್ ಪ್ರೇಮವನ್ನು ಹೇಳಲು ಮುಂದಾಗಿದ್ದೇನೆ ಎಂದು ಹೇಳಿದ್ದಾರೆ.
ಕೀರ್ತಿಆಜಾದ್ ಅವರು ಮೇಘಾಲಯದ ಸಂಸ್ಕೃತಿ ಹಾಗೂ ಬುಡಕಟ್ಟು ಜನಾಂಗದ ವೇಷಭೂಷಣಗಳನ್ನು ಅಪಹಾಸ್ಯ ಮಾಢಿರುವುದು ದುಃಖಕರವಾಗಿದೆ. ಈ ಬಗ್ಗೆ ಕೀರ್ತಿಆಜಾದ್ ಸ್ಪಷ್ಟೀಕರಣ ನೀಡಬೇಕು. ನಿಮ್ಮ ಟೀಕೆ ನೋವುಂಟು ಮಾಡಿದ್ದು, ಜನರ ಮುಂದೆ ಕ್ಷಮೆಯಾಚಿಸಬೇಕು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಆಗ್ರಹಿಸಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + one =
Remember me
