ಗ್ವಾಲಿಯಾರ್​:ಶ್ರೀಲಂಕಾ ವಿರುದ್ಧದ ಏಕದಿನ ಹಾಗೂ ಟಿ20 ಸರಣಿ ಬಳಿಕ ರೆಸ್ಟ್​ ಮೂಡ್​ನಲ್ಲಿರುವ ಟೀಮ್​ ಇಂಡಿಯಾ ಆಟಗಾರರು ಸೆಪ್ಟೆಂಬರ್​ನಲ್ಲಿ ಬಾಂಗ್ಲಾದೇಶ ವಿರುದ್ಧ ಜರುಗಲಿರುವ ಸೀರೀಸ್​ನಲ್ಲಿ ಅಖಾಡಕ್ಕಿಳಿಯಲಿದ್ದಾರೆ. ಪ್ರವಾಸಿ ತಂಡದ ವಿರುದ್ಧ ನಡೆಯಲಿರುವ ಸರಣಿಗೆ ಭಾರತ ಆತಿಥ್ಯ ವಹಿಸಲಿದ್ದು, ಯಾವುದೇ ಕಾರಣಕ್ಕೂ ಸರಣಿ ನಡೆಸಬಾರದು ಎಂದು ಹಿಂದೂ ಮಹಾಸಭಾ ಆಗ್ರಹಿಸಿದೆ.
ಬಾಂಗ್ಲಾದೇಶ ವಿರುದ್ಧ ಎರಡು ಟೆಸ್ಟ್​, ಮೂರು ಟಿ20 ಪಂದ್ಯಗಳನ್ನು ಭಾರತ ಆಡಲಿದೆ. ಮೊದಲೆರಡು ಟೆಸ್ಟ್ ಪಂದ್ಯಗಳು ಕ್ರಮವಾಗಿ ಚೆನ್ನೈ ಹಾಗೂ ಕಾನ್ಪುರದಲ್ಲಿ ನಡೆಯಲ್ಲಿವೆ. ಆ ಬಳಿಕ ಆರಂಭವಾಗಲಿರುವ ಮೂರು ಪಂದ್ಯಗಳ ಟಿ20 ಸರಣಿಗೆ ಮಧ್ಯಪ್ರದೇಶ, ದೆಹಲಿ ಹಾಗೂ ಹೈದರಾಬಾದ್ ಕ್ರೀಡಾಂಗಣಗಳು ಆತಿಥ್ಯವಹಿಸಲಿವೆ. ಆದರೆ, ಮಧ್ಯಪ್ರದೇಶದ ಗ್ವಾಲಿಯಾರ್​ನಲ್ಲಿ ನಡೆಯಬೇಕಿರುವ ಟಿ20 ಪಂದ್ಯಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದ್ದು, ರದ್ದುಪಡಿಸುವಂತೆ ಆಗ್ರಹ ಕೇಳಿ ಬರುತ್ತಿದೆ.
ಅಕ್ಟೋಬರ್​ 06ರಂದು ಮಧ್ಯಪ್ರದೇಶದ ಗ್ವಾಲಿಯಾರ್​ನಲ್ಲಿರುವ ಮಾಧವ್​ರಾವ್​ ಕ್ರೀಡಾಂಗಣದಲ್ಲಿ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಅಂತಿಮ ಟಿ20 ಪಂದ್ಯ ನಡೆಯಲಿದೆ. ಆದರೆ ಈ ಪಂದ್ಯಕ್ಕೆ ಅಖಿಲ ಭಾರತ ಹಿಂದೂ ಮಹಾಸಭಾ ವಿರೋಧ ವ್ಯಕ್ತಪಡಿಸಿದೆ. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ಧ ಈ ಪಂದ್ಯವನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ರಕ್ತದಲ್ಲಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.
ಇದನ್ನೂ ಓದಿ:VIDEO| ಸನ್ಮಾನ ಸಮಾರಂಭದಲ್ಲಿ ಪ್ರಜ್ಞೆ ತಪ್ಪಿ ಬಿದ್ದ ವಿನೇಶ್​ ಪೋಗಟ್​
ಈ ಕುರಿತು ಮಾತನಾಡಿರುವ ರಾಷ್ಟ್ರೀಯ ಉಪಾಧ್ಯಕ್ಷ ಜೈವೀರ್​ ಭಾರಧ್ವಾಜ್​, ನೆರೆಯ ಬಾಂಗ್ಲಾದೇಶದ ಕ್ರಿಕೆಟ್​ ತಂಡದೊಂದಿಗೆ ಭಾರತದ ನೆಲದಲ್ಲಿ ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸುವುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಏಕೆಂದರೆ ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ಗುರಿಯಾಗಿಸಿ ದಾಳಿ ಮಾಡಲಾಗುತ್ತಿದೆ. ಹೀಗಾಗಿ ಈ ವಿಚಾರದಲ್ಲಿ ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಬೇಕು. ಇಷ್ಟೇ ಅಲ್ಲದೇ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಸರಣಿಯನ್ನು ರದ್ದುಪಡಿಸಬೇಕು. ಒಂದು ವೇಳ ಸರಣಿ ನಡೆಸಿದ್ದಲ್ಲಿ ನಾವು ಕಪ್ಪು ಬಾವುಟಗಳನ್ನು ಹಿಡಿದು ಪ್ರತಿಭಟಿಸುತ್ತೇವೆ ಎಂದು ಎಚ್ಚರಿಸಿದ್ದಾರೆ.
ಅಕ್ಟೋಬರ್ 6 ರಂದು ನಗರದ ಶಂಕರಪುರದಲ್ಲಿರುವ ಶ್ರೀಮಂತ್ ಮಾಧವರಾವ್ ಸಿಂಧಿಯಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದ್ದು, ಈ ಬಗ್ಗೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಪುತ್ರ ಆರ್ಯಮನ್ ಸಿಂಧಿಯಾ ಮಾಹಿತಿ ನೀಡಿದ್ದರು. ಆದರೆ ಇದೀಗ ಈ ಪಂದ್ಯಕ್ಕೆ ಹಿಂದೂ ಮಹಾಸಭಾ ವಿರೋಧ ವ್ಯಕ್ತಪಡಿಸುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಬಿಸಿಸಿಐ ಈ ಬಗ್ಗೆ ಯಾವ ಕ್ರಮ ಕೈಗೊಳ್ಳಿದೆ ಎಂಬುದನ್ನು ಕಾದು ನೋಡಬೇಕಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 10 =
Remember me
