ಹೊಸದಿಲ್ಲಿ:ಅಯೋಧ್ಯೆಯ ಶ್ರೀರಾಮಮಂದಿರದ ಕುರಿತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಉದ್ಧಟತನದ ಹೇಳಿಕೆ ನೀಡಿದ್ದಾರೆ ಎಂದು ಮಂಗಳವಾರ ಹಿಂದೂ ಸೇನೆ ದೆಹಲಿ ಪೊಲೀಸರಿಗೆ ದೂರು ನೀಡಿದೆ. ದೆಹಲಿ ಪೊಲೀಸ್ ಆಯುಕ್ತರಿಗೆ ಲಿಖಿತ ರೂಪದಲ್ಲಿ ದೂರನ್ನು ಸಲ್ಲಿಸಿದ ಹಿಂದೂ ಸೇನೆಯ ರಾಷ್ಟ್ರೀಯ ಅಧ್ಯಕ್ಷ ವಿಷ್ಣು ಗುಪ್ತಾ, ಓವೈಸಿ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲು ಕ್ರಮಗಳುವಂತೆ ತಿಳಿಸಿದ್ದಾರೆ.
ಇದನ್ನೂ ಓದಿ:ಅಂದು ವಿದೇಶದಲ್ಲಿ ಯುವತಿ ಜತೆ ಸಿಕ್ಕಿಬಿದ್ದ ಖ್ಯಾತ ನಟ ಇಂದು ಗಳಗಳನೆ ಕಣ್ಣೀರಿಟ್ಟ; ಕಾರಣ ಮಾತ್ರ ವಿಭಿನ್ನ…
ಭಾರತದಲ್ಲಿ ಕೋಮು ಸೌಹಾರ್ದತೆಯನ್ನು ಉಂಟುಮಾಡಲು ಪ್ರಯತ್ನಿಸುತ್ತಿರುವ ಸಾರ್ವಜನಿಕರಿಗೆ ಅಸಾದುದ್ದೀನ್ ಓವೈಸಿ ಉದ್ದೇಶಪೂರ್ವಕವಾಗಿ ಮತ್ತು ಬೇಜವಾಬ್ದಾರಿಯಿಂದ ತಪ್ಪು ಮಾಹಿತಿಯನ್ನು ನೀಡುತ್ತಿದ್ದಾರೆ ಎಂದು ಗುಪ್ತಾ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
🚨 BREAKING:
Hindu Sena files a complaint with Delhi Police against MIM MP Asaduddin Owaisi for inflammatory statements on the Shri Ram Temple🚩pic.twitter.com/A5oaAu7Zs9
— The Analyzer (News Updates🗞️) (@Indian_Analyzer)January 2, 2024

ಜನವರಿ 22ರಂದು ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆಯ ಬೆನ್ನಲ್ಲೇ ತೆಲಂಗಾಣದ ಹೈದರಾಬಾದ್‌ನ ಭವಾನಿ ನಗರದಲ್ಲಿ ಮಾತನಾಡಿದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, “ಕೇಂದ್ರದ ಚಟುವಟಿಕೆಗಳ ಬಗ್ಗೆ ಮುಸ್ಲಿಂ ಯುವಕರು ಜಾಗರೂಕರಾಗಿರಬೇಕು ಮತ್ತು ದೇಶಾದ್ಯಂತ ಮಸೀದಿಗಳು ಜನವಸತಿಯಲ್ಲಿ ಉಳಿಯಬೇಕು” ಎಂದು ಮನವಿ ಮಾಡಿದ್ದರು.
ಬಾಬರಿ ಮಸೀದಿಯನ್ನು ಉಲ್ಲೇಖಿಸಿ ಮಾತನಾಡಿದ ಓವೈಸಿ, “ಕಳೆದ 500 ವರ್ಷಗಳಿಂದ ಪವಿತ್ರ ಕುರಾನ್ ಪಠಣ ಮಾಡಿದ ಸ್ಥಳವು ಇಂದು ನಮ್ಮ ಕೈಯಲ್ಲಿಲ್ಲ. ಯುವಜನರೇ ನಾವು ನಮ್ಮ ಮಸೀದಿಯನ್ನು ಕಳೆದುಕೊಂಡಿದ್ದೇವೆ. ಅಲ್ಲಿ ಏನು ಮಾಡಲಾಗುತ್ತಿದೆ ಎಂಬುದನ್ನು ನೀವು ನೋಡುತ್ತಿದ್ದೀರಿ. ನಿಮ್ಮ ಹೃದಯದಲ್ಲಿ ನೋವಿಲ್ಲವೇ?” ಎಂದು ಓವೈಸಿ ಪ್ರಶ್ನಿಸಿದ್ದಾರೆ. ಈ ಹೇಳಿಕೆಯ ಬಳಿಕ ಈ ಬೆಳವಣಿಗೆ ಮುನ್ನೆಲೆಗೆ ಬಂದಿದೆ.
ಈ ಪ್ರಕರಣ ಕುರಿತು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ,(ಏಜೆನ್ಸೀಸ್).
ಪ್ರಿಯತಮೆ ಹುಡುಕಾಟದಲ್ಲಿ ನಟ ವಿನಯ್ ರಾಜ್​ಕುಮಾರ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
