ನವದೆಹಲಿ:ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಹೇಳಲಾಗಿದ್ದ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್​ ಪಕ್ಷವು ಪ್ರಚಂಡ ದಿಗ್ವಿಜಯ ಸಾಧಿಸಿದೆ.
ಇನ್ನು ರಾಷ್ಟ್ರದಾದ್ಯಂತ ಕಾಂಗ್ರೆಸ್​ ನಾಯಕರು ದಕ್ಷಿಣ ಭಾರತದಲ್ಲಿ ಬಿಜೆಪಿ ಸೋಲನ್ನು ಸಂಭ್ರಮಿಸುತ್ತಿದ್ದಾರೆ ಇತ್ತ ಪಕ್ಷದ ಹಿರಿಯ ನಾಯಕರೊಬ್ಬರು ವಿವಾದಾತ್ಮ ಹೇಳಿಕೆ ನೀಡುವ ಮೂಲಕ ಸುದ್ದಿಯಲ್ಲಿದ್ದಾರೆ.
ಹಿರಿಯ ಕಾಂಗ್ರೆಸ್​ ನಾಯಕ, ಮಾಜಿ ಕೇಂದ್ರ ಸಚಿವ ದಿಗ್ವಿಜಯ್​ ಸಿಂಗ್​ ಕಾರ್ಯಕ್ರಮ ಒಂದರಲ್ಲಿ ಮಾತನಾಡುವ ವೇಳೆ ಹಿಂದುತ್ವ ಒಂದು ಧರ್ಮ ಅಲ್ಲ ಎಂದು ಪ್ರತಿಪಾದಿಸಿದ್ದಾರೆ. ಧರ್ಮವನ್ನು ಯಾರು ಒಪ್ಪಿಕೊಳ್ಳುವುದಿಲ್ಲವೋ ಅಂತಹವರ ಮೇಲೆ ದಾಳಿ ಮಾಡುವುದನ್ನು ಹಿಂದೂ ಧರ್ಮ ಒಳಗೊಂಡಿರುತ್ತದೆ.
ಸಾಮರಸ್ಯ ಹಾಗು ಜನರ ಕಲ್ಯಾಣವನ್ನು ಭೋಧಿಸುವ ಸನಾತನ ಧರ್ಮದಲ್ಲಿ ನಾನು ನಂಬಿಕೆ ಇಟ್ಟಿದ್ದೇನೆ ಎಂದು ಹೇಳುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಹೊಸ ವಿವಾದ ಒಂದನ್ನು ಹುಟ್ಟುಹಾಕಿದ್ಧಾರೆ.
ಇದನ್ನೂ ಓದಿ:ಬಿಜೆಪಿಗೆ ವೋಟ್​ ಹಾಕಿದ್ದಕ್ಕೆ ಸಿಟ್ಟು; ಚಾಲಕನನ್ನು ಥಳಿಸಿ ಆಟೋ ಜಖಂ ಮಾಡಿದ ಕಿಡಿಗೇಡಿಗಳು
ಮಾತನಾಡುವ ವೇಳೆ ಬಜರಂಗದಳವನ್ನು ಗುಂಡಾಗಳ ಗುಂಪು ಎಂದು ಸಂಬೋಧಿಸಿರುವ ದಿಗ್ವಿಜಯ ಸಿಂಗ್​ ಬಿಜೆಪಿ ನಾಯಕರು ರಾಜಕೀಯ ಲಾಭಕ್ಕಾಗಿ ಇದನ್ನು ಬಳಸುತ್ತಿರುವುದಕ್ಕೆ ವಿಷಾದಿಸಿದ್ದಾರೆ.
ಬಜರಂಗದಳವನ್ನು ಆಂಜನೇಯನ ಜೊತೆ ಹೋಲಿಕೆ ಮಾಡಿ ಮಾತನಾಡುತ್ತಿರುವ ಬಿಜೆಪಿ ನಾಯಕರು ಇದೇ ಗೂಂಡಾಗಳು ಜಬಲ್​ಪುರದಲ್ಲಿರುವ ಕಾಂಗ್ರೆಸ್​ ಕಚೇರಿಗೆ ನು್ಗ್ಇ ಧ್ವಂಸ ಮಾಡಿದಾಗ ಯಾಕೆ ಮಾತನಾಡಲಿಲ್ಲ ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 6 =
Remember me
