ಚೆನ್ನೈ:ಪ್ರಕರಣದ ವಿಚಾರಣೆ ಮುಗಿಸಿ ಕೋರ್ಟ್​ನಿಂದ ಹೊರಬರುತ್ತಿದ್ದ ವೇಳೆ ಗುಂಪೊಂದು ರೌಡಿಶೀಟರ್​ನನ್ನು ನ್ಯಾಯಾಲಯದ ಮುಂಭಾಗದಲ್ಲೇ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ತಮಿಳುನಾಡಿನ ತಿರುವರೂರು ಜಿಲ್ಲೆಯಲ್ಲಿ ನಡೆದಿದೆ.
ಓನನ್​ ಸೆಂಥಿಲ್​ ಕೊಲೆಯಾದವರು ಎಂದು ತಿಳಿದು ಬಂದಿದೆ. ಆತನ ಜೊತೆಗಿದ್ದ ವಕೀಲರಾದ ಅಗಿಲನ್​ ಹಾಗೂ ಭಾರತಿರಾಜ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನರೆ ಕುರಿತು ಪ್ರತಿಕ್ರಿಯಿಸಿರುವ ಸ್ಥಳೀಯ ಪೊಲೀಸ್​ ಅಧಿಕಾರಿಯೊಬ್ಬರು ಓನನ್​ ಸೆಂಥಿಲ್​ ವಿರುದ್ಧ ಕೊಲೆ ಸೇರಿದಂತೆ ಅನೇಕ ಪ್ರಕರಣಗಳು ದಾಖಲಾಗಿದ್ದವು. ಇತ್ತೀಚಿಗೆ ಜಾಮೀನಿನ ಮೇಲೆ ಈತ ಬಿಡುಗಡೆಯಾಗಿ ಹೊರ ಬಂದಿದ್ದ. ಹಳೇ ವೈಷಮ್ಯದ ಹಿನ್ನಲೆಯಲ್ಲಿ ಕೊಲೆ ನಡೆದಿದ್ದು, ಆರೋಪಿಗಳು ಮೊದಲೇ ಶಸ್ತ್ರಸಜ್ಜಿತರಾಗಿ ಕೃತ್ಯ ಎಸಗಿದ್ದಾರೆ.
ಇದನ್ನೂ ಓದಿ:ಜೈಲಿನಲ್ಲಿ ಐಷಾರಾಮಿ ಜೀವನ; ಶಶಿಕಲಾ, ಇಳವರಸಿಗೆ ಜಾಮೀನು ರಹಿತ ವಾರೆಂಟ್ ಜಾರಿ
ಆರೋಪಿಗಳು ಸೆಂಥಿಲ್​ ಜೊತೆಗಿದ್ದ ವಕೀಲರ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಘಟನೆ ನಡೆದ ಪ್ರದೇಶದ ಸುತ್ತ ಅಳವಡಿಸಲಾಗಿರುವ ಸಿಸಿಟಿವಿಗಳನ್ನು ಪರಿಶೀಲಿಸಲಾಗುತ್ತಿದೆ. ಆರೋಪಿಗಳನ್ನು ಶೀಘ್ರದಲ್ಲಿಯೇ ಬಂಧಿಸಲಾಗುವುದು ಎಂದು ಸ್ಥಳೀಯ ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ.
ನ್ಯಾಯಾಲಯದ ಆವರಣದಲ್ಲಿ ಹತ್ಯೆ ಹಾಗೂ ಮಾರಣಾಂತಿಕ ಹಲ್ಲೆಯಾಗಿರುವುದನ್ನು ಖಂಡಿಸಿ ಕುಂಭಕೋಣಂನಲ್ಲಿ ವಕೀಲರ ಸಂಘವು ರಸ್ತೆ ತಡೆದು ಪ್ರತಿಭಟನೆ ನಡೆಸಿತ್ತು. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ವಿಫಲಗೊಂಡಿದೆ. ಈ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಎಚ್ಚೆತ್ತುಕೊಳ್ಳಬೇಕು ಎಂದು ಪ್ರತಿಭಟನಾ ನಿರತ ವಕೀಲರು ಆಗ್ರಹಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − 1 =
Remember me
