ಮುಂಬೈ:ವಾಣಿಜ್ಯ ನಗರ, ಮಹಾನಗರಿ ಮುಂಬೈನಲ್ಲಿ ಧೂಳು ಸಹಿತ ಭಾರೀ ಬಿರುಗಾಳಿ ಬೀಸಿದ್ದು, ಜನಜೀವನ ತತ್ತರಿಸಿ ಹೋಗಿದೆ. ನಿನ್ನೆ (ಮೇ.13) ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು ಗಂಭೀರವಾಗಿ ಗಾಯಗೊಂಡಿದ್ದರು. ಆದರೆ, ಇಂದಿನ ವರದಿ ಪ್ರಕಾರ, ಭೀಕರ ಘಟನೆಯಲ್ಲಿ ಒಟ್ಟು 14 ಮಂದಿ ಮೃತಪಟ್ಟಿದ್ದು, 74 ಜನರು ಗಂಭೀರ ಸ್ಥಿತಿಯಲ್ಲಿದ್ದಾರೆ. ಅಕ್ರಮ ಫಲಕದ ವಿರುದ್ಧ ಇದೀಗ ಮುಂಬೈ ಪೊಲೀಸ್​ ಠಾಣೆಯಲ್ಲಿ ಎಫ್ಐಆರ್​ ದಾಖಲಾಗಿದೆ.
ಇದನ್ನೂ ಓದಿ:ಕುತೂಹಲ ಕೆರಳಿಸಿದೆ ಐಪಿಎಲ್​ ಪ್ಲೇಆಫ್​ ರೇಸ್​; 3 ಸ್ಥಾನಗಳಿಗೆ 6 ತಂಡಗಳ ಪೈಪೋಟಿ!
ನಿನ್ನೆ ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಮುಂಬೈ ಮಹಾನಗರದಲ್ಲಿ ಕಾರ್ಮೋಡ ಆವರಿಸಿದ್ದು, ಮುಂಬೈ ನಗರದ ದಾದರ್, ಕುರ್ಲಾ, ಮಾಹಿಮ್, ಘಾಟ್‌ಕೋಪರ್, ಮುಲುಂಡ್ ಮತ್ತು ವಿಖ್ರೋಲಿ ಉಪನಗರಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಿದ್ದು, ದಕ್ಷಿಣ ಮುಂಬೈನ ಕೆಲವು ಭಾಗಗಳಲ್ಲಿ ತುಂತುರು ಮಳೆಯಾಗಿದೆ. ಥಾಣೆ, ಅಂಬರ್‌ನಾಥ್, ಬದ್ಲಾಪುರ್, ಕಲ್ಯಾಣ್ ಮತ್ತು ಉಲ್ಲಾಸ್‌ನಗರದಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆ ಸುರಿದಿದೆ.
ಕೇವಲ ಮುಂಬೈ ಮಾತ್ರವಲ್ಲ, ಮಹಾರಾಷ್ಟ್ರ ಹಲವು ಜಿಲ್ಲೆಗಳಿಗೆ ಈಗಾಗಲೇ ಭಾರೀ ಮಳೆ ಹಾಗೂ ಬಿರುಗಾಳಿಯ ಮುನ್ನೆಚ್ಚರಿಕೆ ನೀಡಲಾಗಿದೆ. ಥಾಣೆ, ಪಾಲ್‌ಘರ್, ರಾಯ್‌ಗಢ ಸೇರಿದಂತೆ ಹಲವೆಡೆ ಭಾರೀ ಮಳೆ ಸುರಿಯುವ ನಿರೀಕ್ಷೆಯಿದೆ. ಬಿರುಗಾಳಿಯ ರಭಸಕ್ಕೆ ಮುಂಬೈನ ಘಟಕೋಪುರದ ಪೆಟ್ರೋಲ್ ಬಂಕ್ ಮೇಲೆ ದೊಡ್ಡದಾಗಿ ನಿರ್ಮಿಸಲಾಗಿದ್ದ ಜಾಹೀರಾತು ಫಲಕ ಗಾಳಿಯ ರಭಸಕ್ಕೆ ಕುಸಿಯುತ್ತಿರುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ.
ಇದನ್ನೂ ಓದಿ:ಕುಟುಂಬಕ್ಕಾಗಿ ಬೀದಿಯಲ್ಲಿ​ ವ್ಯಾಪಾರಕ್ಕಿಳಿದಿದ್ದ ಬಾಲಕನಿಗೆ ಈಗ ಮತ್ತೊಂದು ಶಾಕ್! ಬಿಟ್ಟುಹೋದ ತಾಯಿ ವಾಪಾಸ್​
ಜಾಹೀರಾತು ಫಲಕ ಬಿದ್ದ ಪರಿಣಾಮ ಪೆಟ್ರೋಲ್ ಬಂಕ್‌ನಲ್ಲಿದ್ದ 7 ಮಂದಿಗೆ ತೀವ್ರ ಗಾಯಗಳಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯ ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ,(ಏಜೆನ್ಸೀಸ್).
ಪಕ್ಕಾ ಆರ್​ಸಿಬಿ ಪ್ಲೇಆಫ್​ಗೆ ಹೋಗೋದಿಲ್ಲ! ಹೇಗೆ ಅಂತೀರಾ? ಇಲ್ಲಿದೆ ನೋಡಿ ಲೆಕ್ಕಾಚಾರ

ಅಂದು ಆರ್​ಸಿಬಿ ಪ್ಲೇಆಫ್​ ಕನಸಿನ ಬಗ್ಗೆ ವಿಲ್​ ಜ್ಯಾಕ್ಸ್​ ನುಡಿದಿದ್ದ ಭವಿಷ್ಯ ಇಂದು ನಿಜವಾಗ್ತಿದೆ! ಏನು ಗೊತ್ತೇ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 8 =
Remember me
