ಹರಿಯಾಣ:ನಿರಂತರ ಸುರಿದ ಮಳೆಗೆ ಹರಿಯಾಣದ ನಗರ ಪ್ರದೇಶಗಳ ರಸ್ತೆಗಳು ಜಲಾವೃತಗೊಂಡಿದ್ದು, ಗೃಹ ಸಚಿವ ಅನಿಲ್ ವಿಜ್ ಪರಿಸ್ಥಿತಿಯನ್ನು ತಿಳಿಯಲು ಸ್ಥಳಕ್ಕೆ ದೋಣಿಯಲ್ಲಿ ತೆರಳಿ ಜನರ ಸಂಕಷ್ಟವನ್ನು ಆಲಿಸಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಅಪರಾಧ ಸಂಖ್ಯೆ ಹೆಚ್ಚಳ: ನಳಿನ ಕುಮಾರ ಕಟೀಲ ಟೀಕೆ
ಕಳೆದ ಮೂರು ದಿನಗಳಿಂದ ಹರಿಯಾಣದಲ್ಲಿ ಸುರಿಯುತ್ತಿರುವ ಧಾರಕಾರ ಮಳೆಯೂ ಮಂಗಳವಾರ ಕೊಂಚ ಇಳಿಮುಖ ಕಂಡಿದೆ. ನಗರದ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಘಟನೆಯ ಸ್ಥಳಕ್ಕೆ ಭೇಟಿ ನೀಡಿದ ಗೃಹ ಸಚಿವ ಅನಿಲ್ ವಿಜ್, ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಸಿರ್ಸಾದ ಶಾಸ್ತ್ರಿ ಕಾಲೋನಿ ಪ್ರದೇಶದಲ್ಲಿರುವ ತಮ್ಮ ನಿವಾಸದಿಂದ ಬೋಟ್ ಪ್ರಯಾಣ​​ ಆಯ್ಕೆ ಮಾಡಿಕೊಂಡರು. ಈ ದೃಶ್ಯವೂ ಇದೀಗ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದೆ.
ಸತತ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯು ಪಂಜಾಬ್ ಮತ್ತು ಹರಿಯಾಣದ ಹಲವಾರು ಭಾಗಗಳಲ್ಲಿ ಪ್ರವಾಹದ ಭೀತಿಯನ್ನು ಸೃಷ್ಟಿಸಿದೆ. ಅಪಾರ ಆಸ್ತಿ-ಪಾಸ್ತಿ ಹಾನಿಯಾಗಿದ್ದು, ಇಲ್ಲಿಯವರೆಗೂ 9 ಜನರು ಮಳೆಯ ಆರ್ಭಟಕ್ಕೆ ಮೃತರಾಗಿದ್ದಾರೆ ಎಂದು ವರದಿಯಾಗಿದೆ,(ಏಜೆನ್ಸೀಸ್).
https://www.vijayavani.net/after-release-from-prison-man-slits-wifes-throat
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − four =
Remember me
