ಶ್ರೀನಗರ:ಜಮ್ಮುಕಾಶ್ಮೀರದಲ್ಲಿ ಆರ್ಟಿಕಲ್​ 370ನ್ನು ರದ್ದುಗೊಳಿಸಿದ್ದರಿಂದಲೇ ಚೀನಾ ಇದೀಗ ಲಡಾಖ್​ ವಾಸ್ತವ ನಿಯಂತ್ರಣ ರೇಖೆ ಬಳಿ ಆಕ್ರಮಣ ಮಾಡುತ್ತಿದೆ ಎಂದು ಜಮ್ಮುಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್​ ಅಬ್ದುಲ್ಲಾ ಹೇಳಿದ್ದಾರೆ.
ಇಂದು ಮಾಧ್ಯಮವೊಂದಕ್ಕೆ ಮಾತನಾಡಿದ ಅವರು, ಜಮ್ಮುಕಾಶ್ಮೀರದ ವಿಶೇಷ ಸ್ಥಾನಮಾನ ರದ್ದಾಗುತ್ತದೆ ಎಂದು ಚೀನಾ ನಿರೀಕ್ಷೆ ಮಾಡಿರಲಿಲ್ಲ. ಅದಕ್ಕಾಗಿಯೇ ಈಗ ಲಡಾಖ್​​ ಗಡಿಯಲ್ಲಿ ಕ್ಯಾತೆ ತೆಗೆದು, ಆಕ್ರಮಣ ಮಾಡುತ್ತಿದೆ. ಹಾಗೇ ಚೀನಾದ ಸಹಕಾರದಿಂದ ಜಮ್ಮುಕಾಶ್ಮೀರದಲ್ಲಿ ಆರ್ಟಿಕಲ್​ 370 ಮರುಸ್ಥಾಪಿತವಾಗುತ್ತದೆ ಎಂಬ ಆಶಯವಿದೆ ಎಂದಿದ್ದಾರೆ.
ನಾನೆಂದೂ ಚೀನಾ ಅಧ್ಯಕ್ಷನನ್ನು ಭಾರತಕ್ಕೆ ಆಹ್ವಾನಿಸಲಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿ ಅದನ್ನು ಮಾಡಿದ್ದಾರೆ. ಚೀನಾ ಅಧ್ಯಕ್ಷನನ್ನು ಆಮಂತ್ರಿಸುವ ಜತೆ ಅವರೊಂದಿಗೆ ಔತಣಕೂಟವನ್ನೂ ನಡೆಸಿದ್ದಾರೆ ಎಂದು ಫಾರೂಕ್​ ಅಬ್ದುಲ್ಲಾ ವ್ಯಂಗ್ಯವಾಡಿದರು.
ಕಳೆದ ವರ್ಷ ಆಗಸ್ಟ್​ 5ರಂದು ಸರ್ಕಾರ ಜಮ್ಮುಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಗೊಳಿಸುವುದನ್ನು ನಾವ್ಯಾರೂ ನಿರೀಕ್ಷೆ ಮಾಡಿರಲಿಲ್ಲ. ಅದಾದ ಬಳಿಕ ನಮಗೆ ಮಾತನಾಡಲು ಅವಕಾಶವೂ ಸಿಗಲಿಲ್ಲ ಎಂದೂ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 2 =
Remember me
