ನವದೆಹಲಿ:ಕೇಂದ್ರ ಬಜೆಟ್​ಗೆ ಕ್ಷಣಗಣನೆ ಆರಂಭವಾಗಿದೆ. ಶನಿವಾರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್​ ಮಂಡಿಸಲಿರುವ ಬಜೆಟ್​ ಕುರಿತು ಚರ್ಚಿಸಲು ಇಂದು ಬಜೆಟ್​ ಅಧಿವೇಶನ ಆರಂಭವಾಗಿ. ಇನ್ನು ಕೆಲವೇ ಕ್ಷಣಗಳಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ. ಇದಕ್ಕೂ ಪ್ರಧಾನಿ ನರೇಂದ್ರ ಮೋದಿ ಮಾತನಾಡಿ, ಅಧಿವೇಶನದಲ್ಲಿ ಆರ್ಥಿಕತೆ ಮತ್ತು ಜನರ ಸಬಲೀಕರಣ ಬಗ್ಗೆ ವಿವರವಾಗಿ ಚರ್ಚಿಸುವ ಭರವಸೆ ಇದೆ ಎಂದರು.
ನಮ್ಮ ಅಧಿವೇಶನದಲ್ಲಿ ಆರ್ಥಿಕ ವಿಚಾರಗಳು ಮತ್ತು ಪ್ರಸ್ತುತ ಜಾಗತಿಕ ಆರ್ಥಿಕ ಪರಿಸ್ಥಿತಿಯಲ್ಲಿ ಭಾರತ ಹೇಗೆ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು ಎಂಬುದರ ಬಗ್ಗೆ ಹೆಚ್ಚು ಗಮನ ಕೊಡುತ್ತೇವೆ ಎಂದು ಹೇಳಿದರು.
ಈ ಅಧಿವೇಶನದ ಬಗ್ಗೆ ಒಂದನ್ನು ಖಚಿತಪಡಿಸಲು ಇಚ್ಛಿಸುತ್ತೇನೆ. ಮುಂದಿನ ದಶಕಗಳಿಗೆ ಬಲವಾದ ಅಡಿಪಾಯವನ್ನು ಇಡುತ್ತೇವೆ. ಹೆಚ್ಚಾಗಿ ಆರ್ಥಿಕ ವಿಚಾರಗಳ ಬಗ್ಗೆಯೇ ಚರ್ಚಿಸುತ್ತೇವೆ. ಸಂಸತ್ತಿನ ಎರಡು ಮನೆಯು ಬಜೆಟ್​ ವಿಚಾರದಲ್ಲಿ ಒಳ್ಳೆಯ ಚರ್ಚೆ ನಡೆಸುತ್ತವೆ ಎಂದು ಬಯಸಿದ್ದೇನೆ ಎಂದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 9 =
Remember me
