ನವದೆಹಲಿ:ಕಳ್ಳತನ ಮಾಡಿದ್ದಾರೆ ಎಂದು ಶಂಕಿಸಿ ನರ್ಸಿಂಗ್​ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರನ್ನು ಹಾಸ್ಟೆಲ್ ವಾರ್ಡನ್​ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಘಟನೆ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು ಆರೋಪಿ ಮಹಿಳಾ ವಾರ್ಡನ್​ನನ್ನು ಕೆಲಸದಿಂದ ವಜಾ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿ ಒಬ್ಬರು LNJP ಸರ್ಕಾರಿ ಆಸ್ಪತ್ರೆಯ ಅಹಲ್ಯಾಭಾಯಿ ಕಾಲೇಜ್​ ಆಪ್​ ನರ್ಸಿಂಗ್​ನಲ್ಲಿ ಮಂಗಳವಾರ ತಡರಾತ್ರಿ ಘಟನೆ ನಡೆದಿದೆ.
ಅಂತಿಮ ವರ್ಷ ಬಿಎಸ್​ಸಿ ಪದವಿ ವ್ಯಾಸಂಗ ಮಾಡುತ್ತಿರುವ ಸಂತ್ರಸ್ತ ವಿದ್ಯಾರ್ಥಿನಿಯರು ಹಾಸ್ಟೆಲ್​ ವಾರ್ಡನ್​ ಹಾಗೂ ಸಹಪಾಠಿಗಳೊಂದಿಗೆ ದೆಹಲಿಯ ಮಂಡಿ ಪ್ರದೇಶದಲ್ಲಿ ಕಾರ್ಯಕ್ರಮ ಒಂದಕ್ಕೆ ತೆರಳಿದ್ದರು.
ಈ ವೇಳೆ ಹಾಸ್ಟೆಲ್​ ವಾರ್ಡನ್​ ತನ್ನ ಬ್ಯಾಗಿನಲ್ಲಿದ್ದ 8,000 ಸಾವಿರ ರೂಪಾಯಿ ಕಾಣೆಯಾಗಿರುವ ಕುರಿತು ಹೇಳಿದ್ದಾರೆ ಮತ್ತು ಇಬ್ಬರು ಸಂತ್ರಸ್ತ ವಿದ್ಯಾರ್ಥಿನಿಯರ ಮೇಲೆ ಶಂಕೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಬಿರುಬೇಸಿಗೆಯಲ್ಲೂ ತಂಪೆರೆದ ಮಳೆರಾಯ; ರಾಷ್ಟ್ರ ರಾಜಧಾನಿ ಸಖತ್​… ಕೂಲ್​
ಹಾಸ್ಟೆಲ್​ಗೆ ಬಂದ ನಂತರ ಸಹಪಾಠಿಗಳ ಸಹಾಯದೊಂದಿಗೆ ವಿದ್ಯಾರ್ಥಿನಿಯರನ್ನು ವಿವಸ್ತ್ರಗೊಳಿಸಿದ ಹಾಸ್ಟೆಲ್​ ವಾರ್ಡನ್​ ದುಡ್ಡು ಙತ್ತೆಯಾಗದ ಕಾರಣ ಬಿಟ್ಟು ಕಳುಹಿಸಿದ್ದಾರೆ.
ತಮ್ಮಗೆ ಈಗಾದ ಕುರಿತು ಸಂತ್ರಸ್ತ ವಿದ್ಯಾರ್ಥಿನಿಯರು ಪೋಷಕರ ಬಳಿ ಅಳಲು ತೋಡಿಕೊಂಡಿದ್ದು ಈ ಬಗ್ಗೆ ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳ ತಂಡ ವಿದ್ಯಾರ್ಥಿನಿಯರ ಹೇಳಿಕೆಯನ್ನು ಪಡೆದು ಅವರನ್ನು ರಕ್ಷಿಸಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿ ಒಬ್ಬರು ತಿಳಿಸಿದ್ದಾರೆ.
ವಿದ್ಯಾರ್ಥಿನಿಯರು ನೀಡಿದ ದೂರಿನ ಮೇರೆಗೆ ಆರೋಪಿ ಮಹಿಳಾ ವಾರ್ಡನ್​ ಹಾಗೂ ಕೃತ್ಯಕ್ಕೆ ಸಹಕರಿಸಿದವರ ವಿರುದ್ಧ ತಿಲಕ್​ ಮಾರ್ಗ್​​ ಪೊಲೀಸ್​ ಠಾಣೆಯಲ್ಲಿ ಭಾರತ ದಂಡ ಸಂಹಿತೆ(IPC Section) 354 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಘಟನೆ ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತಿರುವ ಅಹಲ್ಯಾಭಾಯಿ ಕಾಲೇಜು ಆಡಳಿತ ಮಂಡಳಿ ಪ್ರಾಂಶುಪಾಲರ ನೇತೃತ್ವದಲ್ಲಿ ಸಮಿತಿ ಒಂದನ್ನು ರಚಿಸಿದ್ದು ಆರೋಪಿ ಮಹಿಳಾ ವಾರ್ಡನ್​ ಹಾಗೂ ಜೃತ್ಯಕ್ಕೆ ಸಹಕರಿಸಿದ ವಿದ್ಯಾರ್ಥಿನಿಯರನ್ನು ಅಮಾನತತ್ತಿನಲ್ಲಿರಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 6 =
Remember me
