ನವದೆಹಲಿ:ಸಂದೇಶಖಾಲಿ ಪ್ರಕರಣದ ಸಿಬಿಐ ತನಿಖೆಯನ್ನು ವಿರೋಧಿಸಿದ್ದಕ್ಕಾಗಿ ಪಶ್ಚಿಮ ಬಂಗಾಳ ಸರ್ಕಾರವನ್ನು ಸೋಮವಾರ ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತು.
ಇದನ್ನೂ ಓದಿ:ಕೋಟ್ಯಧಿಪತಿ ವರನಿಗಾಗಿ ಆನ್​ಲೈನ್ ​ಮೊರೆ..ಕುಳಿತಲ್ಲೇ ಖರ್ಚು ಮಾಡಿದ್ದು ಎಷ್ಟು ಲಕ್ಷ ಗೊತ್ತಾ? ಕಡೆಗೆ ಆಗಿದ್ದೇನು?
ಸರ್ಕಾರಿ ಯಂತ್ರ ಸಂದೇಶಖಾಲಿ ಪ್ರಕರಣದ ಸಿಬಿಐ ತನಿಖೆಯನ್ನು ವಿರೋಧಿಸಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಛೀಮಾರಿ ಹಾಕಿತು. ಒಬ್ಬ ವ್ಯಕ್ತಿಯ ಹಿತಾಸಕ್ತಿಗಾಗಿ ರಾಜ್ಯ ಸರ್ಕಾರವು ಉನ್ನತ ಮಟ್ಟದ ಸಂಸ್ಥೆಯೊಂದರಿಂದ ತನಿಖೆ ನಡೆಸುವುದನ್ನು ವಿರೋಧಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದೆ.
ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಅವರ ಪೀಠವು ಸಿಬಿಐ ತನಿಖೆಗೆ ನಿರ್ದೇಶಿಸುವ ಹೈಕೋರ್ಟ್‌ನ ಆದೇಶಕ್ಕೆ ಯಾವುದೇ ತಡೆಯಾಜ್ಞೆ ನೀಡಲು ನಿರಾಕರಿಸಿತು. ವೈಯಕ್ತಿಕ ಹಿತಾಸಕ್ತಿಗಳನ್ನು ರಕ್ಷಿಸಲು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಸಂಪರ್ಕಿಸಬಹುದೇ ಎಂದು ಪ್ರಶ್ನಿಸಿತು.
ತೃಣಮೂಲದ ಮಾಜಿ ಮುಖಂಡ ಶೇಖ್ ಶಹಜಹಾನ್​ ಸಂದೇಶಖಾಲಿಯಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳು ಮತ್ತು ಭೂಕಬಳಿಕೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ.
ಸುಪ್ರೀಂ ಕೋರ್ಟ್‌ನ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ರಾಜ್ಯದ ಪರ ವಾದ ಮಂಡಿಸಿದ ವಕೀಲ ರು, ರಾಜ್ಯದ ವಿರುದ್ಧ ಟೀಕೆಗಳು ಮತ್ತು ಅವಲೋಕನಗಳು ಇರುವುದರಿಂದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದೇವೆ ಎಂದು ಹೇಳಿದರು.
ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಮನವಿಯಲ್ಲಿ, ಏಪ್ರಿಲ್ 10 ರ ಹೈಕೋರ್ಟ್‌ನ ಆದೇಶವು ಪೊಲೀಸ್ ಪಡೆ ಸೇರಿದಂತೆ “ಇಡೀ ರಾಜ್ಯ ಯಂತ್ರವನ್ನು ನಿರಾಶೆಗೊಳಿಸಿದೆ” ಎಂದು ಹೇಳಿತ್ತು.
“ಯಾವುದೇ ಮಾರ್ಗಸೂಚಿಗಳಿಲ್ಲದೆ ಸಿಬಿಐಗೆ ಅಗತ್ಯವಾದ ಬೆಂಬಲವನ್ನು ಒದಗಿಸುವಂತೆ ಹೈಕೋರ್ಟ್ ಅತ್ಯಂತ ಸಾಮಾನ್ಯ ಆದೇಶದಲ್ಲಿ ರಾಜ್ಯಕ್ಕೆ ನಿರ್ದೇಶಿಸಿದೆ. ಇದು ರಾಜ್ಯದ ಪೊಲೀಸರ ಅಧಿಕಾರವನ್ನು ಕಸಿದುಕೊಳ್ಳುತ್ತದೆ ಎಂದು ರಾಜ್ಯ ಸರ್ಕಾರ ಪರ ವಕೀಲರು ವಾದಿಸಿದರು.
ಕಾಸರಗೋಡಿಗೆ ಆಗಮಿಸಿದ ಸನ್ನಿ ಲಿಯೋನ್..ಮಾದಕ ನಟಿ ನೋಡಲು ಮುಗಿಬಿದ್ದ ಅಭಿಮಾನಿಗಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + fifteen =
Remember me
