ಡೆಹ್ರಾಡೂನ್​:ಇತ್ತೀಚಿನ ದಿನಗಳಲ್ಲಿ ವಿಮಾನಗಳಲ್ಲಿ ಅಹಿತಕರ ಘಟನೆಗಳು ಹೆಚ್ಚಾಗಿ ವರದಿಯಾಗುತ್ತಿದ್ದು, ಈ ಮಧ್ಯೆ ಕಳಿತುಕೊಳ್ಳುವ ವಿಚಾರವಾಗಿ ಇಬ್ಬರು ಪ್ರಯಾಣಿಕರ ನಡುವೆ ಗಲಾಟೆಯಾಗಿರುವ ಘಟನೆ ಮುಂಬೈ-ಡೆಹ್ರಾಡೂನ್​ ವಿಮಾನದಲ್ಲಿ ನಡೆದಿದೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆದ ಬೆನ್ನಲ್ಲೇ ವಿಸ್ತಾರ ಏರ್​ಲೈನ್ಸ್​ ಪ್ರಕಟಣೆ ಒಂದನ್ನು ಹೊರಡಿಸಿದ್ದು, ವಿಸ್ತೃತವಾದ ಹೇಳಿಕೆ ಒಂದನ್ನು ಬಿಡುಗಡೆ ಮಾಡಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ವಿಸ್ತಾರ ಏರ್​ಲೈನ್ಸ್​ ಘಟನೆಯೂ ಜೂನ್​ 25ರಂದು ಮುಂಬೈ-ಡೆಹ್ರಾಡೂನ್​ ವಿಮಾನ ಸಂಖ್ಯೆ UK852ನಲ್ಲಿ ನಡೆದಿದೆ. ಮುಂಬೈನಿಂದ ಡೆಹ್ರಾಡೂನ್​ನತ್ತ ಹೊರಟಿದ್ದ ವಿಮಾನದಲ್ಲಿ ಪ್ರಯಾಣಿಕನೋರ್ವ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಯುವತಿಯಿಂದ ಕಿರಿಕಿರಿ ಅನುಭವಿಸಿದ್ದಾರೆ.
Kalesh Inside the vistara flight b/w Two man over a guy touched another man Daughterpic.twitter.com/BTlS1EHhma
ಇದನ್ನೂ ಓದಿ:ನವಜಾತ ಶಿಶುವಿನ ಜೀವಕ್ಕೆ ಕುತ್ತು ತಂದ ಅತಿಯಾದ ತಂಬಾಕು ಸೇವನೆ
ಈ ಸಂಬಂಧ ಮುಂಬದಿ ಕುಳಿತಿದ್ದ ಪ್ರಯಾಣಿಕ ಯುವತಿಯನ್ನು ಪ್ರಶ್ನಿಸಿದ್ದು, ಇದಕ್ಕೆ ಆಕೆಯ ಪೋಷಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವೇಳೆ ಉಭಯ ಪ್ರಯಾಣಿಕರ ನಡುವೆ ಮಾತಿನ ಚಕಮಕಿ ನಡೆದಿದ್ದು, ಕ್ಯಾಬಿನ್​ ಕ್ರೂ ಸಿಬ್ಬಂದಿ ಮದ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಘಟನೆಯ ವಿಡಿಯೋ ವೈರಲ್​​ ಆದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧದ ಚರ್ಚೆಯನ್ನು ಹುಟ್ಟುಹಾಕಿದೆ.
ಇತ್ತೀಚಿನ ದಿನಗಳಲ್ಲಿ ವಿಮಾನದಲ್ಲಿ ಪ್ರಯಾಣಿಸುವ ವೇಳೆ ಅಹಿತಕರ ಘಟನೆಗಳು ಹೆಚ್ಚಾಗಿ ನಡೆಯುತ್ತಿದ್ದು, ಪ್ರಯಾಣಿಕರು ಹಾಗೂ ಕ್ಯಾಬಿನ್​ ಕ್ರೂ ಸಿಬ್ಬಂದಿ ನಡುವೆ ಕ್ಷುಲಕ ವಿಚಾರಕ್ಕೆ ಗಲಾಟೆಗಳು ನಡೆದಿರುವ ಅನೇಕ ಉದಾಹರಣೆಗಳಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − 4 =
Remember me
