ಅಯೋಧ್ಯೆ:ಜನವರಿ 22ರಂದು ನಡೆದ ಅಯೋಧ್ಯೆ ರಾಮಮಂದಿರದ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ಅದ್ದೂರಿಯಾಗಿ ನೆರವೇರಿದ್ದು, ಹೊಸದಾಗಿ ಉದ್ಘಾಟನೆಗೊಂಡ ರಾಮಮಂದಿರದಲ್ಲಿ ನೆಲೆಸಿರುವ ರಾಮಲಲ್ಲಾ ನೋಡಲು ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುತ್ತಿದ್ದಾರೆ. ಶ್ರೀರಾಮನ ದರ್ಶನ ಪಡೆಯಲು ಇಂದಿಗೂ ಕೂಡ ಸರತಿ ಸಾಲಿನಲ್ಲಿ ನಿಂತು ಭೇಟಿ ಕೊಡುತ್ತಿರುವ ಭಕ್ತರ ಸಂಖ್ಯೆ ಕಳೆದು ಆರು ದಿನಗಳಲ್ಲಿ ಮತ್ತಷ್ಟು ಹೆಚ್ಚಿದೆ.
ಇದನ್ನೂ ಓದಿ:ಜನ್ನಿಕ್ ಸಿನ್ನರ್‌ಗೆ ಚೊಚ್ಚಲ ಗ್ರಾಂಡ್ ಸ್ಲಾಂ: ಆಸ್ಟ್ರೇಲಿಯನ್ ಓಪನ್ ಗೆದ್ದ ಇಟಲಿ ಆಟಗಾರ
ಜನವರಿ 22ರಂದು ಉದ್ಘಾಟನೆಗೊಂಡ ದಿನದಿಂದ ಸುಮಾರು 19 ಲಕ್ಷ ಭಕ್ತರು ಬಾಲರಾಮನ ದರ್ಶನ ಪಡೆಯಲು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಜ. 23ರಂದು ಪ್ರಾಣ ಪ್ರತಿಷ್ಠಾಪನೆ ಸಮಾರಂಭ ಮುಗಿದ ಬಳಿಕ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಯಿತು. ಅಂದಿನಿಂದ ಕಳೆದ ಆರು ದಿನಗಳಲ್ಲಿ ಅಂದಾಜು 19 ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ಶ್ರೀರಾಮನ ವಿಗ್ರಹಕ್ಕೆ ಪೂಜೆ ಸಲ್ಲಿಸಿದ್ದಾರೆ.
ಮೊದಲ ದಿನವೇ 5 ಲಕ್ಷ ಜನರು ಭೇಟಿ ನೀಡಿದ್ದು, ತದನಂತರ ಭಕ್ತರ ಸಂಖ್ಯೆಯಲ್ಲಿ ಮತ್ತಷ್ಟು ಹೆಚ್ಚಳ ಕಂಡುಬಂದಿದೆ. ದೇವಾಲಯಕ್ಕೆ ಆಗಮಿಸಿದ ಭಕ್ತರ ಸುರಕ್ಷತೆ ಮತ್ತು ಜನಸಂದಣಿಯನ್ನು ನಿರ್ವಹಿಸುವಲ್ಲಿ ದೇವಾಲಯದ ಟ್ರಸ್ಟ್​ ಹಾಗೂ ಮಂಡಳಿಯ ಅಧಿಕಾರಿಗಳು ಭಾರೀ ಶ್ರಮಿಸುತ್ತಿದ್ದಾರೆ. ಕ್ರಮಬದ್ಧವಾದ ಸರತಿ ಸಾಲುಗಳನ್ನು ಸುಗಮಗೊಳಿಸಲು ಮತ್ತು ಸುರಕ್ಷತಾ ಮಾನದಂಡಗಳನ್ನು ನಿರ್ವಹಿಸಲು ಮತ್ತಷ್ಟು ಬಿಗಿ ಕ್ರಮಗಳನ್ನು ತೆಗೆದುಕೊಂಡಿದ್ದಾರೆ,(ಏಜೆನ್ಸೀಸ್).
ನಿತ್ಯಭವಿಷ್ಯ: ಈ ರಾಶಿಯವರಗಿಂದು ದೇಶ ಪ್ರಯಾಣ ಸಂದರ್ಭ ಮತ್ತು ಶಿಕ್ಷಣ ಕ್ಷೇತ್ರಗಳ ಕೆಲಸಗಾರರಿಗೆ ವಿಶೇಷ ಸವಲತ್ತು ಸಿಗಲಿದೆ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:sixteen + 18 =
Remember me
