ಲಖನೌ:ಉತ್ತರ ಪ್ರದೇಶದ ಲಕ್ಷಾಂತರ ಕಾರ್ಮಿಕರು ದೇಶದ ತುಂಬೆಲ್ಲ ದುಡಿಯುತ್ತಿದ್ದಾರೆ. ಅವಕಾಶ, ಹೆಚ್ಚು ಕೂಲಿ ಸಿಗುವೆಡೆಗೆ ದೊಡ್ಡ ಸಂಖ್ಯೆಯಲ್ಲಿ ತೆರಳುತ್ತಿದ್ದ ಅವರೆಲ್ಲರೂ ಕೋವಿಡ್​ 19 ಲಾಕ್​ಡೌನ್​ನಿಂದಾಗಿ ತವರು ರಾಜ್ಯಕ್ಕೆ ಮರಳುತ್ತಿದ್ದಾರೆ.
ಉತ್ತರ ಪ್ರದೇಶದ ಗೃಹ ಖಾತೆಯ ಅಪರ ಮುಖ್ಯ ಕಾರ್ಯದರ್ಶಿ ಅವನೀಶ್​ ಕುಮಾರ್​ ಅವಸ್ತಿ ಅವರ ಪ್ರಕಾರ ಶುಕ್ರವಾರದವರೆಗೆ 15 ಲಕ್ಷಕ್ಕೂ ಹೆಚ್ಚು ವಲಸೆ ಕಾರ್ಮಿಕರು ರಾಜ್ಯಕ್ಕೆ ಮರಳಿದ್ದರು. ಆದರೆ, ಶನಿವಾರ ಒಂದೇ ದಿನ 1.5 ಲಕ್ಷಕ್ಕೂ ಹೆಚ್ಚು ವಲಸೆ ಕಾರ್ಮಿಕರು ರಾಜ್ಯಕ್ಕೆ ಮರಳಿದ್ದು ಇದುವರೆಗೆ ಮರಳಿದ ವಲಸೆ ಕಾರ್ಮಿಕರ ಸಂಖ್ಯೆ 16.5 ಲಕ್ಷಕ್ಕೆ ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಶ್ರಮಿಕ್​ ಸ್ಪೆಶಲ್​ ರೈಲು ಸ್ಥಗಿತ; ಸ್ಫೋಟಿಸಿದ ವಲಸೆ ಕಾರ್ಮಿಕರ ಆಕ್ರೋಶ
ಹೆಚ್ಚೆಚ್ಚು ಸಂಖ್ಯೆಯಲ್ಲಿ ವಲಸೆ ಕಾರ್ಮಿಕರು ರಾಜ್ಯಕ್ಕೆ ಮರಳುತ್ತಿರುವುದರಿಂದ, ರಾಜ್ಯದಲ್ಲಿ ಕರೊನಾ ಸೋಂಕು ಹೆಚ್ಚಾಗುವ ಬಗ್ಗೆ ಆತಂಕ ಮನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಜನರು ಬರದಂತೆ ತಡೆಯಲು ಉತ್ತರ ಪ್ರದೇಶ ಸರ್ಕಾರ ಪ್ರಯತ್ನಿಸುತ್ತಿರುವುದಾಗಿ ಹೇಳಲಾಗಿದೆ.
‘ರಾಹುಲ್ ಗಾಂಧಿ ವಲಸೆ ಕಾರ್ಮಿಕರ ಮಕ್ಕಳನ್ನು ಎತ್ತಿಕೊಂಡು, ಅವರೊಂದಿಗೆ ನಡೆದಿದ್ದರೆ ಚೆನ್ನಾಗಿತ್ತು…’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + nine =
Remember me
