ನವದೆಹಲಿ:ಒಡಿಶಾದಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ 233 ಮಂದಿ ಮೃತಪಟ್ಟು, 900ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಸ್ವಾಂತತ್ರ್ಯ ಭಾರತದ ನಂತರ ಸಂಭವಿಸಿದ ಅತ್ಯಂತ ಮಾರಾಣಾಂತಿಕ ಅಪಘಾತಗಳಲ್ಲಿ ಒಡಿಶಾ ರೈಲು ದುರಂತ ಕೂಡ ಒಂದಾಗಿದೆ. ಈ ದುರಂತಕ್ಕೆ ಕಾರಣವೇನು? ಮತ್ತು ಅಪಘಾತ ಹೇಗೆ ಸಂಭವಿಸಿತು ಎಂಬುದರ ಮಾಹಿತಿ ಇಲ್ಲಿದೆ.
* ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಈ ದುರಂತ ಸಂಭವಿಸಿತು. ಘಟನಾ ಸ್ಥಳದಲ್ಲಿ 3 ರೈಲು ಮಾರ್ಗಗಳಿದ್ದವು.
* ಪಶ್ಚಿಮ ಬಂಗಾಳದ ಹೌರಾ ನಗರದ ಶಾಲಿಮಾರ್ ರೈಲು ನಿಲ್ದಾಣದಿಂದ ತಮಿಳುನಾಡಿನ ಚೆನ್ನೈಗೆ ಮೇನ್ ಲೈನ್​ನಲ್ಲಿ ಶುಕ್ರವಾರ (ಜೂ. 2) ಸಂಜೆ 7.30ಕ್ಕೆ 12841 ನಂಬರ್​ನ ಕೋರಮಂಡಲ್​ ಎಕ್ಸ್​ಪ್ರೆಸ್​ ರೈಲು ಹೊರಟಿತ್ತು. ಈ ವೇಳೆ ಒಡಿಶಾದ ಬಹನಗಾ ಬಜಾರ್ ಸ್ಟೇಷನ್ ಬಳಿ ಹಳಿ ತಪ್ಪಿದೆ.
ಇದನ್ನೂ ಓದಿ:ಒಡಿಶಾ ರೈಲು ದುರಂತ; ಸಂತ್ರಸ್ತರ ಸಂಬಂಧಿಕರಿಗಾಗಿ ಇಲ್ಲಿವೆ ಸಹಾಯವಾಣಿ ಸಂಖ್ಯೆಗಳು
* ಹಳಿ ತಪ್ಪಿದ ಕೋರಮಂಡಲ್​ ಎಕ್ಸ್​ಪ್ರೆಸ್​ ಪಕ್ಕದ ಹಳಿಯಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಮೊದಲು ಡಿಕ್ಕಿ ಹೊಡೆಯಿತು. ಇದರಿಂದ ಕೋರಮಂಡಲ್ ಎಕ್ಸ್‌ಪ್ರೆಸ್​ನ 12 ಬೋಗಿಗಳು ಹಳಿ ತಪ್ಪಿ, ಮೂರನೇ ರೈಲು ಮಾರ್ಗದ ಮೇಲೆ ಬಿದ್ದವು.
* ಇದೇ ಮಾರ್ಗವಾಗಿ ಇನ್ನೊಂದು ಹಳಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಬೆಂಗಳೂರಿನ ಯಶವಂತಪುರ- ಹೌರ ಎಕ್ಸ್‌ಪ್ರೆಸ್‌ ( ರೈಲು ನಂಬರ್​ 12864) ಬರುತ್ತಿತ್ತು. ಈ ರೈಲು ಬೆಂಗಳೂರಿನ ಬೈಯಪ್ಪನಹಳ್ಳಿಯ SMVT ರೈಲು ನಿಲ್ದಾಣದಿಂದ ಹೊರಟಿತ್ತು.
* ಇನ್ನೊಂದು ಹಳಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಆಗಮಿಸಿದ ಬೆಂಗಳೂರು- ಹೌರಾ ಎಕ್ಸ್‌ಪ್ರೆಸ್‌, ಹಳಿ ತಪ್ಪಿದ್ದ ಕೋರಮಂಡಲ್​ ಎಕ್ಸ್​ಪ್ರೆಸ್​ ರೈಲಿನ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಬೆಂಗಳೂರು- ಹೌರಾ ಎಕ್ಸ್‌ಪ್ರೆಸ್​ನ ನಾಲ್ಕು ಬೋಗಿಗಳು ಸಹ ಹಳಿ ತಪ್ಪಿವೆ. ಇದರಿಂದಾಗಿ ಭೀಕರ ಅಪಘಾತ ಸಂಭವಿಸಿದ್ದು, ಈವರೆಗೆ 233 ಮಂದಿ ಅಸುನೀಗಿದ್ದಾರೆ.
ಸದ್ಯ ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಬಿರುಸಿನಿಂದ ನಡೆಯುತ್ತಿದೆ. ಈಗಾಗಲೇ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್​ಡಿಆರ್​ಎಫ್​)ಯ 3 ಘಟಕ, ಒಡಿಶಾದ ವಿಪತ್ತು ಕ್ಷಿಪ್ರ ಕಾರ್ಯಾಚರಣೆ ಪಡೆ (ಒಡಿಆರ್​ಎಫ್​)ಯ 4 ಘಟಕ, 15ಕ್ಕೂ ಹೆಚ್ಚು ಅಗ್ನಿಶಾಮಕ ತಂಡ, 30ಕ್ಕೂ ಹೆಚ್ಚು ವೈದ್ಯರು, 200ಕ್ಕೂ ಹೆಚ್ಚು ಪೊಲೀಸ್​ ಸಿಬ್ಬಂದಿ ಮತ್ತು 60ಕ್ಕೂ ಹೆಚ್ಚು ಆಂಬ್ಯುಲೆನ್ಸ್​ಗಳು ಸ್ಥಳದಲ್ಲಿ ಬೀಡುಬಿಟ್ಟಿರುವುದಾಗಿ ಒಡಿಶಾ ಸರ್ಕಾರದ ಮುಖ್ಯಕಾರ್ಯದರ್ಶಿ ಪ್ರದೀಪ್​ ಜೆನಾ ಅವರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರಿಗೆ ತಲಾ 10 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂ. ಹಾಗೂ ಸಣ್ಣಪುಟ್ಟ ಗಾಯಗಳಾದವರಿಗೆ 50,000 ಪರಿಹಾರ ನೀಡುವುದಾಗಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಘೋಷಿಸಿದ್ದಾರೆ.
ಇದನ್ನೂ ಓದಿ:51 ಡಿವೈಎಸ್​ಪಿಗಳ ವರ್ಗಾವಣೆ; ಇಲ್ಲಿದೆ ಪೂರ್ಣ ಪಟ್ಟಿ…
ರೈಲು ದುರಂತದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಕೂಡ ಟ್ವೀಟ್​ ಮೂಲಕ ಪ್ರತಿಕ್ರಿಯೆ ನೀಡಿದ್ದು, ಸಂತಾಪ ವ್ಯಕ್ತಪಡಿಸಿದ್ದಾರೆ. ಒಡಿಶಾದಲ್ಲಿ ಸಂಭವಿಸಿದ ರೈಲು ದುರಂತದಿಂದ ಆಘಾತಕ್ಕೆ ಒಳಗಾಗಿದ್ದೇನೆ ಮತ್ತು ತೀವ್ರವಾಗಿ ನೊಂದಿದ್ದೇನೆ. ಈ ದುಃಖದ ಸಮಯದಲ್ಲಿ ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ. ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಮಾತನಾಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದೇನೆ. ಸ್ಥಳದಲ್ಲಿ ರಕ್ಷಣಾ ಕಾರ್ಯಗಳು ನಡೆಯುತ್ತಿವೆ ಮತ್ತು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.(ಏಜೆನ್ಸೀಸ್​)
ಒಡಿಶಾ ರೈಲು ದುರಂತ: ಭಾರತ ಇತಿಹಾಸದಲ್ಲಿ ಸಂಭವಿಸಿರುವ ಭೀಕರ ರೈಲು ಅಪಘಾತಗಳ ಚಿತ್ರಣ ಇಲ್ಲಿದೆ…

ಒಡಿಶಾ ರೈಲು ದುರಂತ: ಸಾವಿನ ಸಂಖ್ಯೆ 233ಕ್ಕೆ ಏರಿಕೆ, 900ಕ್ಕೂ ಅಧಿಕ ಮಂದಿಗೆ ಗಾಯ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:thirteen − ten =
Remember me
