ಹೈದರಾಬಾದ್​:ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಸರಣಿ ರಸ್ತೆ ಅಪಘಾತಗಳು ಸಂಭವಿಸುತ್ತಿವೆ. ವಾಹನ ಸವಾರರ ನಿರ್ಲಕ್ಷ್ಯದಿಂದ ಇಂತಹ ಅವಘಡಗಳು ನಡೆಯುತ್ತಿವೆ ಎನ್ನುತ್ತಾರೆ ಅಧಿಕಾರಿಗಳು. ರಸ್ತೆ ಅಪಘಾತಗಳನ್ನು ತಡೆಗಟ್ಟುವ ಸಲುವಾಗಿಯೇ ಸಂಚಾರ ನಿಯಮಗಳನ್ನು ಅಳವಡಿಸಲಾಗಿದೆ. ಕುಡಿದು ವಾಹನ ಚಲಾಯಿಸುವವರು ಸೇರಿದಂತೆ ಸಂಚಾರ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸಲಾಗುತ್ತದೆ.
ಇಷ್ಟೆಲ್ಲ ಮಾಡಿದರೂ ಕೆಲ ವಾಹನ ಸವಾರರು ತಮ್ಮ ನಡೆಯನ್ನು ಬದಲಿಸಿಕೊಳ್ಳದೆ ಅಪಘಾತ ಮಾಡಿಕೊಳ್ಳುತ್ತಿದ್ದಾರೆ. ಇದೀಗ ಟಿಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಹಾಗೂ ಹುಬ್ಬಳ್ಳಿ ಹುಲಿ ವಿಶ್ವನಾಥ್​ ಸಜ್ಜನರ್ ಅವರು ಒಂದೇ ಬೈಕ್‌ನಲ್ಲಿ ಏಳು ಮಂದಿ ಪ್ರಯಾಣಿಸುವ ಫೋಟೋವೊಂದನ್ನು ಶೇರ್ ಮಾಡಿ, ಭಾವನಾತ್ಮಕವಾಗಿ ಟ್ವೀಟ್ ಮಾಡಿದ್ದಾರೆ. ಇದೀಗ ಆ ಟ್ವೀಟ್​ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಟಿಎಸ್​ಆರ್​ಟಿಸಿಯ ಎಂಡಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ವಿವಿಧ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಟಿಎಸ್​ಆರ್​ಟಿಸಿಯನ್ನು ಲಾಭದ ಹಾದಿಯಲ್ಲಿ ಮುನ್ನಡೆಸಲು ಸಜ್ಜನರ್​ ಶ್ರಮಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿದ್ದು, ಆರ್‌ಟಿಸಿ ನಿರ್ಧಾರಗಳನ್ನು ಕಾಲಕಾಲಕ್ಕೆ ಜನರಿಗೆ ತಿಳಿಸುತ್ತಿರುತ್ತಾರೆ ಮತ್ತು ಪ್ರಯಾಣಿಕರನ್ನು ಎಚ್ಚರಿಸುತ್ತಿರುತ್ತಾರೆ. ರಸ್ತೆ ಅಪಘಾತಗಳ ಸಂದರ್ಭದಲ್ಲಿ ಸೂಕ್ತ ಮುನ್ನೆಚ್ಚರಿಕೆ ಮತ್ತು ಸೂಚನೆಗಳನ್ನು ನೀಡುತ್ತಾರೆ. ಇತ್ತೀಚೆಗೆ ವಾಹನ ಚಾಲಕನೊಬ್ಬ ಮಾಡಿದ ಸಾಹಸಕ್ಕೆ ಪ್ರತಿಕ್ರಿಯಿಸಿರುವ ಸಜ್ಜನರ್​ ಭಾವುಕರಾಗಿ ಟ್ವೀಟ್ ಮಾಡಿದ್ದಾರೆ.
ಸದ್ಯ ತೆಲಂಗಾಣದಲ್ಲಿ ಬಿಸಿಲು ಸುಡುತ್ತಿದೆ. ಈ ಸಮಯದಲ್ಲಿ ಹೊರಗೆ ಹೋಗುವುದು ತುಂಬಾ ಅಪಾಯಕಾರಿ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಹೀಗಿರುವಾಗ ಇಲ್ಲೊಬ್ಬ ಬೈಕ್​ ಸವಾರ ಏಳು ಜನರೊಂದಿಗೆ ಪ್ರಯಾಣ ಮಾಡಿದ್ದಾನೆ. ಪತ್ರಿಕೆಯೊಂದರಲ್ಲಿ ಪ್ರಕಟವಾದ ಸುದ್ದಿಯ ಫೋಟೋವನ್ನು ಶೇರ್​ ಮಾಡಿಕೊಂಡಿರುವ ಸಜ್ಜನರ್​, ಮಂಡುಟೆಂಡದಲ್ಲಿ ಒಂದು ಬೈಕಿಗೆ ಇಷ್ಟು ಮಂದಿನಾ? ಪ್ರಾಣವನ್ನೇ ಪಣಕ್ಕಿಟ್ಟು ಈ ರೀತಿ ಅಪಾಯಕಾರಿಯಾಗಿ ಬೈಕ್ ಓಡಿಸುವುದು ಸರಿಯಲ್ಲ. ಕೆಲ ಪಾಲಕರು ತಮ್ಮ ಮಕ್ಕಳ ಜೀವದ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವುದು ತುಂಬಾ ಬೇಸರ ತಂದಿದೆ. ಈ ರೀತಿಯ ನಿರ್ಲಕ್ಷ್ಯದಿಂದ ನಿತ್ಯ ಎಲ್ಲೋ ಒಂದು ಕಡೆ ಅಪಘಾತಗಳು ಸಂಭವಿಸುತ್ತಲೇ ಇವೆ ಎಂದು ಭಾವುಕರಾದರು.
మండుటెండలో ఒక్క బైక్ పై ఇంత మందా!?
ప్రాణాలను పణంగా పెట్టి ప్రమాదకరమైన ఇలాంటి బైక్ ప్రయాణం ఏమాత్రం శ్రేయస్కరం కాదు. చిన్నారుల విషయంలో కొందరు తల్లిదండ్రులు ఇలా నిర్లక్ష్యంగా వ్యవరించడం బాధాకరం.@MORTHIndia@Team_Road_Squad@HiHyderabad@YakaswamyChalla#RoadSafety#TrafficRules…pic.twitter.com/TufFMFJ0BS
— V.C. Sajjanar, IPS (@SajjanarVC)April 24, 2024

ಸಜ್ಜನರ್ ಅವರ ಟ್ವೀಟ್​ಗೆ ನೆಟ್ಟಿಗರು ಪ್ರತಿಕ್ರಿಯಿಸಿದ್ದು, ಇಂತಹವರನ್ನು ಟ್ರಾಫಿಕ್ ಸಿಬ್ಬಂದಿ ಹಿಡಿದು ಭಾರಿ ದಂಡ ಹಾಕಿದರೆ ಇನ್ನು ಮುಂದೆ ಹಾಗೆ ಮಾಡುವುದಿಲ್ಲ ಎಂದು ಕಾಮೆಂಟ್ ಮಾಡುತ್ತಿದ್ದಾರೆ.
ಯಾರು ಈ ಸಜ್ಜನರ್​?ಸೈಬರಾಬಾದ್‌ನ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದ ಸಜ್ಜನರ್​ ಅವರು ಪ್ರಸ್ತುತ ಟಿಎಸ್​ಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ. ಸಜ್ಜನರ ಅವರು ಸೈಬರಾಬಾದ್‌ ಆಯುಕ್ತರಾಗಿದ್ದಾಗ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಮಾತ್ರವಲ್ಲದೆ ಹಲವಾರು ಸೇವಾ ಕಾರ್ಯಕ್ರಮಗಳನ್ನು ಕೈಗೊಂಡರು. ಸೈಬರಾಬಾದ್ ಪೊಲೀಸ್ ಕಮೀಷನರೇಟ್‌ನಲ್ಲಿ ಹಲವಾರು ಸುಧಾರಣೆಗಳನ್ನು ಪ್ರಾರಂಭಿಸಿದರು ಮತ್ತು ಕೋವಿಡ್ -19 ಮೊದಲ ಅಲೆಯ ಸಮಯದಲ್ಲಿ ವಲಸೆ ಕಾರ್ಮಿಕರು ತಮ್ಮ ಮನೆಗಳನ್ನು ತಲುಪಲು ಸಹಾಯ ಮಾಡುವಲ್ಲಿ ಮುಂಚೂಣಿಯಲ್ಲಿದ್ದರು. ಹೈದರಾಬಾದ್​ನ ಪಶುವೈದ್ಯೆಯನ್ನು ಹತ್ಯೆ ಮಾಡಿದವರನ್ನು ಎನ್​ಕೌಂಟರ್​ ಮಾಡಿದ ಪ್ರಕರಣದಲ್ಲಿ ವಿಶ್ವನಾಥ್​ ಸಜ್ಜನರ್ ಭಾರಿ ಸುದ್ದಿಯಾದರು. ಅವರ​ ಸಾಹಸವನ್ನು ರಾಷ್ಟ್ರದೆಲ್ಲೆಡೆ ಜನರು ಶ್ಲಾಘಿಸಿದರು. ವಿಶ್ವನಾಥ್​ ಅವರು ಮೂಲತಃ ಕರ್ನಾಟಕದ ಹುಬ್ಬಳ್ಳಿ ಮೂಲದವರು.(ಏಜೆನ್ಸೀಸ್​)
ನನ್ನ ಕೂದಲಿನ ಬಗ್ಗೆ ನಿಮಗೇಕೆ ಚಿಂತೆ! ಟ್ರೋಲ್​ ಮಾಡುವವರಿಗೆ ಖಡಕ್​ ತಿರುಗೇಟು ಕೊಟ್ಟ ಪ್ರಾಚಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × two =
Remember me
