ಧರ್ಮಶಾಲಾ:ಸರ್ಕಾರಿ ಶಾಲೆಯ ಶಿಕ್ಷಕರೊಬ್ಬನ ಮೇಲೆ 9ನೇ ತರಗತಿಯ ಬಾಲಕಿಗೆ ಬಲವಂತವಾಗಿ ‘ಅಶ್ಲೀಲ’ ವಿಡಿಯೋ ತೋರಿಸಿ, ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಆರೋಪ ಕೇಳಿ ಬಂದಿದೆ.
ಇದನ್ನೂ ಓದಿ:ಕಾಂಗ್ರೆಸ್​ಗೆ ಶಾಕ್ ಮೇಲೆ ಶಾಕ್: ಪ್ರಚಾರಕ್ಕೆ ಹಣದ ಕೊರತೆ, ಸ್ಪರ್ಧೆಯಿಂದ ಹಿಂದೆ ಸರಿದ ಅಭ್ಯರ್ಥಿ!
ಹಿಮಾಚಲ ಪ್ರದೇಶದ ಸರ್ಕಾರಿ ಶಾಲೆಯ ಶಿಕ್ಷಕ ಜುಂಗಾದಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಡ್ರಾಯಿಂಗ್​ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದು ಮೇ 3 ರಂದು ಧಲ್ಲಿ ಪೊಲೀಸ್​ ಠಾಣೆಯಲ್ಲಿ ಬಾಲಕಿಯ ತಾಯಿ ದೂರು ದಾಖಲಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಘಟನೆ ಹಿನ್ನೆಲೆ?: ಗುರುವಾರ ( ಮೇ 2, 2024) ಹೆಚ್ಚುವರಿ ತರಗತಿ ಬಳಿಕ ತನ್ನ ಮಗಳನ್ನು ಶಿಕ್ಷಕ ಶಾಲೆಯಲ್ಲಿರುವಂತೆ ಹೇಳಿದ್ದಾನೆ. ಬಳಿಕ ತನ್ನ ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋವನ್ನು ಬಾಲಕಿಗೆ ಬಲವಂತವಾಗಿ ತೋರಸಿದ್ದಾನೆ. ಹಾಗೂ ಶಿಕ್ಷಕ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಬಾಲಕಿ ತಾಯಿ ದೂರಿನಲ್ಲಿ ತಿಳಿಸಿದ್ದಾಳೆ.
ಈ ಕುರಿತು ಬಾಲಕಿ ತಾಯಿ ನೀಡಿದ ದೂರಿನ ಮೇಲೆ ಆರೋಪಿ ಶಿಕ್ಷಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಮೇಲೆ ಪೋಕ್ಸೋ ಕಾಯ್ದೆ 10 ಮತ್ತು 12 ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಮತ್ತು 354 ಎ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತೆಯ ಹೇಳಿಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಿದ ನಂತರ ಅಪರಾಧಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಳ್ಳುತ್ತಾರೆ ಎಂದು ವರಿದಿಯಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − four =
Remember me
