ನವದೆಹಲಿ:ದಂಡಗಳನ್ನು ಹಿಡಿದ ಮುಸುಕುಧಾರಿಗಳು ದೆಹಲಿಯ ಜೆಎನ್​ಯು ಆವರಣ ಪ್ರವೇಶಿಸಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮೇಲೆ ಹಲ್ಲೆ ನಡೆಸಿರುವುದಕ್ಕೆ ತೀವ್ರ ಖಂಡನೆ ವ್ಯಕ್ತವಾಗುತ್ತಿದ್ದು, ಕಾಲೇಜು ಆವರಣದಲ್ಲಿರುವ ಸದ್ಯದ ಪರಿಸ್ಥಿತಿ ಹಾಗೂ ಘಟನೆ ಕುರಿತು ತಕ್ಷಣ ವರದಿ ಸಲ್ಲಿಸುವಂತೆ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಜೆಎನ್​ಯು ರಿಜಿಸ್ಟ್ರಾರ್​ ಬಳಿ ಕೇಳಿದೆ.
ವಿಶ್ವ ವಿದ್ಯಾಲಯದ ಉಪಕುಲಪತಿಗಳ ಬಳಿಯು ಮಾತನಾಡಲಾಗಿದೆ. ಶಾಂತಿ ನಿರ್ವಹಣೆ ಮಾಡಲು ದೆಹಲಿ ಪೊಲೀಸರಿಗೆ ಸೂಚನೆ ನೀಡಿಲಾಗಿದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇತ್ತ ಕೇಂದ್ರ ಗೃಹಸಚಿವ ಅಮಿತ್​ ಷಾ ಕೂಡ ದೆಹಲಿ ಪೊಲೀಸ್​ ಅಧಿಕಾರಿಗಳ ಘಟನೆ ಸಂಬಂಧ ತಕ್ಷಣ ವರದಿ ಸಲ್ಲಿಸುವಂತೆ ಕೇಳಿದ್ದಾರೆ.
ಭಾನುವಾರ ರಾತ್ರಿ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಜೆಎನ್​ಯು ಆವರಣಕ್ಕೆ ಪ್ರವೇಶಿಸಿದ ಗುಂಪೊಂದು ದಂಡಗಳಿಂದ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮೇಲೆ ಹಲ್ಲೆ ಮಾಡಿದಲ್ಲದೆ, ಕಾಲೇಜು ಆವರಣದ ಆಸ್ತಿಗೂ ಹಾನಿ ಉಂಟುಮಾಡಿದೆ.
ಘಟನೆಯಲ್ಲಿ ಸುಮಾರು 18 ಮಂದಿ ಗಾಯಗೊಂಡಿದ್ದು, ಏಮ್ಸ್​ಗೆ ದಾಖಲಿಸಲಾಗಿದೆ. ಜೆಎನ್​ಯು ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಐಶೆ ಘೋಶ್​ ತಲೆಗೆ ಗಂಭೀರ ಗಾಯವಾಗಿದೆ. ಇನ್ನು ಹಲ್ಲೆಯ ಬಗ್ಗೆ ಜೆಎನ್​ಯುಎಸ್​ಯು ಮತ್ತು ಎಬಿವಿಪಿ ಆರೋಪ ಪತ್ಯಾರೋಪದಲ್ಲಿ ತೊಡಗಿವೆ. ಘಟನೆಯ ಬೆನ್ನಲ್ಲೇ ಜೆಎನ್​ಯು ಕ್ಯಾಂಪಸ್​ ಹೊರಗೆ ಮತ್ತು ಒಳಗೆ ಬಿಗಿ ಪೊಲೀಸ್​ ಬಂದೋಬಸ್ತ್​ ಏರ್ಪಡಿಸಲಾಗಿದೆ.
ಘಟನೆಯನ್ನು ಖಂಡಿಸಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಜೆಎನ್​ಯು ವಿದ್ಯಾರ್ಥಿ ಮತ್ತು ಶಿಕ್ಷಕರ ಮೇಲೆ ನಡೆದಿರುವ ಮೃಗೀಯ ದಾಳಿಯನ್ನು ಖಂಡಿಸುತ್ತೇವೆ. ಇಂತಹ ಕೃತ್ಯಗಳನ್ನು ವಿವರಿಸಲು ಯಾವುದೇ ಪದಗಳು ಸಾಲುತ್ತಿಲ್ಲ ಎಂದಿದ್ದಾರೆ.
ವಿದೇಶಾಂಗ ಸಚಿವ ಎಸ್​.ಜೈಶಂಕರ್​ ಟ್ವೀಟ್​ ಮಾಡಿ ಹಲ್ಲೆಯನ್ನು ಖಂಡಿಸಿದ್ದಾರೆ. ಜೆಎನ್​ಯುನಲ್ಲಿ ಏನು ನಡೆದಿದೆ ಎಂಬುದನ್ನು ಚಿತ್ರಗಳಲ್ಲಿ ನೋಡಿದ್ದೇವೆ. ಇದು ನಮ್ಮ ವಿಶ್ವವಿದ್ಯಾಲಯ ಸಂಪ್ರದಾಯ ಮತ್ತು ಸಂಸ್ಕೃತಿಗೆ ಸಂಪೂರ್ಣ ತದ್ವಿರುದ್ಧವಾದದ್ದು ಎಂದು ಜರಿದಿದ್ದಾರೆ.
ಹೀಗೆ ಕಾಂಗ್ರೆಸ್​, ಬಿಜೆಪಿ ನಾಯಕರು ಸೇರಿದಂತೆ ಅನೇಕರು ಘಟನೆಯನ್ನು ಖಂಡಿಸಿ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:17 − 2 =
Remember me
