ಬೆಂಗಳೂರು:ರಾಜಧಾನಿ ಬೆಂಗಳೂರು ವಲಯದ ಎನ್​ಸಿಬಿ ಅಧಿಕಾರಿಗಳು ಇದೇ ಮೊದಲ ಬಾರಿಗೆ ಭಾರಿ ಪ್ರಮಾಣದ ಗಾಂಜಾ ವಶಪಡಿಸಿಕೊಂಡಿದ್ದು, ಇದು ಇವರ ಪಾಲಿಗೆ ಇದುವರೆಗಿನ ಗರಿಷ್ಠ ಪ್ರಮಾಣದ ಗಾಂಜಾ ವಶ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.
ಎನ್​ಸಿಬಿ ಅಧಿಕಾರಿಗಳು ಈ ಕಾರ್ಯಾಚರಣೆಯಲ್ಲಿ ಮಹಾರಾಷ್ಟ್ರ ಮೂಲದ ಕೆ. ಕಾಳೇ, ಡಿ. ದುರಾಲ್ಕರ್ ಸೇರಿ ಒಟ್ಟು ನಾಲ್ವರನ್ನು ಬಂಧಿಸಿದ್ದಾರೆ. ಮಾತ್ರವಲ್ಲ ಗಾಂಜಾ ಸಾಗಿಸುತ್ತಿದ್ದ ಟ್ರಕ್​ ಕೂಡ ವಶಕ್ಕೆ ಪಡೆದಿದ್ದಾರೆ. ಹೈದರಾಬಾದ್​ನ ಪೆದ್ದ ಅಂಬರ್​ಪೇಟ್ ಟೋಲ್ ಪ್ಲಾಜಾ ಬಳಿ ಇವರು ಈ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಆರೋಪಿಗಳು ಹೈದರಾಬಾದ್​ನಿಂದ ಪುಣೆ, ಮುಂಬೈ ಸೇರಿ ಹಲವೆಡೆಗೆ ಗಾಂಜಾ ಸಾಗಾಟ ಮಾಡುತ್ತಿದ್ದರು.
ಇದನ್ನೂ ಓದಿ:ಆತ್ಮಹತ್ಯೆ ಮಾಡಿಕೊಳ್ಳುವವರಲ್ಲಿ ಪುರುಷರೇ ಹೆಚ್ಚು, ಏಕೆ?; ಗೃಹಿಣಿಯರಿಗೆ ಖುಷಿ ಕೊಟ್ಟೀತು ಈ ಅಧ್ಯಯನ ವರದಿ!
ಆರೋಪಿಗಳು ಟ್ರಕ್​ನಲ್ಲಿ ಗಾಂಜಾ ಸಾಗಿಸುತ್ತಿದ್ದು, ಅದರಲ್ಲಿ 1080 ಗಾಂಜಾ ಪೊಟ್ಟಣಗಳಿದ್ದವು. ಒಂದೊಂದು ಪೊಟ್ಟಣದಲ್ಲೂ 2 ಕೆ.ಜಿ. ತೂಕದ ಗಾಂಜಾ ಇದೆ. ವಶಪಡಿಸಿಕೊಂಡಿರುವ ಗಾಂಜಾದ ಒಟ್ಟು ತೂಕ ಸುಮಾರು 2 ಟನ್​ ಇದ್ದು, ಇದರ ಮೌಲ್ಯ 15 ಕೋಟಿ ರೂಪಾಯಿ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಬೆಂಗಳೂರು ವಲಯದ ಎನ್​ಸಿಬಿ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದ ಗಾಂಜಾ ಇದೇ ಮೊದಲ ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ.
ಭಾರತದಲ್ಲಿ ಇಂದು ಒಂದು ಸೆಕೆಂಡ್​ನಲ್ಲಿ ಹಾಕಿಸಿದ ಲಸಿಕೆ ಎಷ್ಟು ಗೊತ್ತೇ!?

ನಾಪತ್ತೆಯಾದ ಹದಿನಾಲ್ಕರ ಹುಡುಗಿ 2 ವರ್ಷಗಳ ಬಳಿಕ 4 ತಿಂಗಳ ಮಗುವಿನೊಂದಿಗೆ ಪತ್ತೆಯಾದಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 19 =
Remember me
