ಕೋಲ್ಕತ್ತಾ:11ವರ್ಷದ ಬಾಲಕಿಯಯನ್ನು ಸಂಬಂಧಿಯೊಬ್ಬ ಶಿರಚ್ಛೇದ ಮಾಡಿದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ. ಇದನ್ನು ಖಂಡಿಸಿ ಬೃಹತ್​ ಪ್ರತಿಭಟನೆ ನಡೆಸಲಾಗುತ್ತಿದೆ.
ಇದನ್ನೂ ಓದಿ:ಕೀನ್ಯಾದಲ್ಲಿ ಭಾರಿ ಸ್ಫೋಟ: ಇಬ್ಬರು ಮೃತ್ಯು – 165 ಮಂದಿಗೆ ಗಾಯ
ಈ ಹಿಂದೆ ಬಾಲಕಿ ಹಲವು ಬಾರಿ ಸಾರ್ವಜನಿಕವಾಗಿ ಅವಮಾನಿಸಿದ್ದರಿಂದ ನಾನು ಆಕೆಯನ್ನು ಕೊಂದಿರುವುದಾಗಿ ಆರೋಪಿ ಆಕೆಯ ಚಿಕ್ಕಪ್ಪ ಪೊಲೀಸರಿಗೆ ತಿಳಿಸಿದ್ದಾನೆ.
ಜನವರಿ 29ರಿಂದ ನಾಪತ್ತೆಯಾಗಿದ್ದ ಬಾಲಕಿಯ ಮುಂಡ ಮತ್ತು ರುಂಡ ಮಾಲ್ಡಾ ನಗರದ ಬೇರೆ ಬೇರೆ ಸ್ಥಳಗಳಲ್ಲಿ ಪತ್ತೆಯಾಗಿವೆ. ಹುಡುಗಿಯ 27 ವರ್ಷದ ಚಿಕ್ಕಪ್ಪನನ್ನು ಸಿಸಿಟಿವಿ ಫೂಟೇಜ್ ಆದರಿಸಿ ಪತ್ತೆಹಚ್ಚಲಾಗಿದೆ. ಹುಡುಗಿ ಕಾಣೆಯಾಗುವ ಮೊದಲು ಆತ ಹುಡುಗಿಯೊಂದಿಗೆ ಕಾಣಿಸಿಕೊಂಡಿದ್ದ.
ಆರೋಪಿ ಮೊದಲಿಗೆ ಪೊಲೀಸರನ್ನು ದಾರಿತಪ್ಪಿಸಲು ಯತ್ನಿಸಿದ. ಆದರೆ ನಂತರ ಆಕೆಯನ್ನು ಕೊಲೆ ಮಾಡಿರುವುದಾಗಿ ತಪ್ಪೋಪ್ಪಿಕೊಂಡಿದ್ದಾನೆ. ಆತನನ್ನು ಬಂಧಿಸಿ 12 ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿ ಬಾಲಕಿಯ ಶಿರಚ್ಛೇದ ಮಾಡುವ ಮೊದಲು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಘಟನೆಯನ್ನು ಖಂಡಿಸಿ ಭಾರೀ ಪ್ರತಿಭಟನೆ ವ್ಯಕ್ತವಾಗಿದ್ದು, ಅಮಾನುಷವಾಗಿ ಕೊಲೆ ಮಾಡಿರುವ ಬಾಲಕಿಯ ಚಿಕ್ಕಪ್ಪನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಕೃತ್ಯ ಖಂಡಿಸಿ ಬಿಜೆಪಿ, ತೃಣಮೂಲ ಕಾಂಗ್ರೆಸ್ ಮತ್ತು ಸಿಪಿಐ(ಎಂ) ಕೂಡ ಪ್ರತಿಭಟನೆ ಮತ್ತು ಮೌನ ಮೆರವಣಿಗೆ ನಡೆಸಿದ್ದವು.
ಸುಧಾರಣೆಗಳು ಭಾರತದ ಆರ್ಥಿಕ ಯಶಸ್ಸಿಗೆ ಮೆಟ್ಟಿಲುಗಳಾಗಿವೆ: ಐಎಂಎಫ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − six =
Remember me
