ಉತ್ತರಪ್ರದೇಶ:ಸಾವು ಯಾವಾಗ ಮತ್ತು ಹೇಗೆ ಸಂಭವಿಸುತ್ತದೆ ಎಂದು ಯಾರಿಗೂ ತಿಳಿದಿಲ್ಲ. ಉತ್ತರ ಪ್ರದೇಶದಲ್ಲಿ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತದಲ್ಲಿ ದಂಪತಿ ಸಾವನ್ನಪ್ಪಿದ್ದಾರೆ. ಮೊರಾದಾಬಾದ್‌ನ ಮೈಂದಾರ್ ಪೊಲೀಸ್ ಠಾಣಾ ವ್ಯಾಪ್ತಿಯ ಮಹಮೂದ್‌ಪುರ ಮಾಫಿ ಗ್ರಾಮದಲ್ಲಿ ಈ ಭೀಕರ ಘಟನೆ ನಡೆದಿದೆ.
ಎರಡು ವಿಭಿನ್ನ ರಸ್ತೆ ಅಪಘಾತಗಳಲ್ಲಿ ಇಬ್ಬರು ಸಾವು:ವಿಮಲಾದೇವಿ,  ಶ್ಯಾಮಲಾಲ್ ಮೃತ ದಂಪತಿ. ಮಾಫಿ ಗ್ರಾಮದ ವಿಮಲಾದೇವಿ ಅವರು ತಮ್ಮ ಮಗನೊಂದಿಗೆ ಮೊರಾದಾಬಾದ್‌ನಿಂದ ಮಹ್ಮದ್‌ಪುರ ಮಾಫಿಯಲ್ಲಿರುವ ಮನೆಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಲಾಡುಪುರ ಗ್ರಾಮದ ಬಳಿ ಹಿಂದಿನಿಂದ ಮತ್ತೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ವಿಮಲಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ವಿಮಲಾದೇವಿಯನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಆಕೆ ಅದಾಗಲೇ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದರು.
ವಿಮಲಾ ಸಾವಿನ ಸುದ್ದಿ ತಿಳಿದ ತಕ್ಷಣ ಮೃತಳ ಪತಿ ಶ್ಯಾಮಲಾಲ್‌ಗೆ ಮಾಹಿತಿ ನೀಡಿದ್ದಾರೆ. ಶ್ಯಾಮಲಾಲ್ ಅವರು ತಮ್ಮ ಮತ್ತೋರ್ವ ಪುತ್ರನೊಂದಿಗೆ ಬೈಕ್ ನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದರು. ಆಸ್ಪತ್ರೆಯ ಗೇಟ್ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದಾಗ ಮೊರಾದಾಬಾದ್ ನಿಂದ ವೇಗವಾಗಿ ಬಂದ ಅಪರಿಚಿತ ವಾಹನ ಶ್ಯಾಮಲಾಲ್ ಅವರಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಶ್ಯಾಮಲಾಲ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶ್ಯಾಮ್ ಲಾಲ್ ಅವರಿಗೆ ಡಿಕ್ಕಿ ಹೊಡೆದ ನಂತರ ವಾಹನದ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಮಾಹಿತಿ ಪಡೆದ ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಎರಡು ರಸ್ತೆ ಅಪಘಾತದಲ್ಲಿ ಪತಿ-ಪತ್ನಿ ಸಾವನ್ನಪ್ಪಿರುವ ಸುದ್ದಿ ಕೇಳಿ ಕುಟುಂಬಸ್ಥರು ಕಂಬನಿ ಮಿಡಿದಿದ್ದಾರೆ. ಮತ್ತೊಂದೆಡೆ ಪೊಲೀಸರು ಅಪರಿಚಿತ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮರಣೋತ್ತರ ಪರೀಕ್ಷೆಯ ನಂತರ ಮೃತದೇಹಗಳನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − eighteen =
Remember me
