ನಾಗ್ಪುರ:ಕಳೆದ 10 ದಿನಗಳಿಂದ ನಾಪತ್ತೆಯಾಗಿದ್ದ ಮಹಾರಾಷ್ಟ್ರ ಬಿಜೆಪಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷೆ ಸನಾ ಖಾನ್​ರನ್ನು ಅವರ ಪತಿ ಅಮಿತ್​ ಸಾಹು ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಮಧ್ಯಪ್ರದೇಶದ ಜಬಲ್​ಪುರದಲ್ಲಿ ಕೊಲೆ ನಡೆದಿದ್ದು, ಅವರ ಮೃತದೇಹಕ್ಕಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಸನಾ ಖಾನ್​ ಹಾಗೂ ಅಮಿತ್​ ಆರು ತಿಂಗಳ ಹಿಂದೆ ವಿವಾಹವಾಗಿದ್ದರು ಎಂದು ತಿಳಿದು ಬಂದಿದೆ. ಹಣಕಾಸು ವಿಚಾರವಾಗಿ ದಂಪತಿಗಳ ನಡುವೆ ವೈಮನಸ್ಸು ಇದ್ದ ಕಾರಣ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಪ್ರಕರಣ ಸಂಬಂಧ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಪತಿಯನ್ನು ಭೇಟಿ ಮಾಡಿಕೊಂಡು ಬರುತ್ತೇನೆಂದು ಸನಾ ಆಗಸ್ಟ್​ 2ರಂದು ಮಧ್ಯಪ್ರದೇಶದ ಜಬಲ್​ಪುರಕ್ಕೆ ತೆರಳಿದ್ದರು. ಮೂರು ದಿನಗಳಾದರು ಮಗಳು ಮೊಬೈಲ್​ ಕರೆ ಸ್ವೀಕರಿಸದೆ ಇದ್ದಾಗ ಭಯಗೊಂಡ ಆಕೆಯ ಪೋಷಕರು ನಾಗ್ಪುರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಅಧಿಕಾರಿಗಳು ಜಬಲ್​ಪುರ ಪೊಲೀಸರಿಗೆ ವಿಷಯ ತಿಳಿಸಿ ಜಂಟಿ ಕಾರ್ಯಾಚರಣೆ ಆರಂಭಿಸಿದ್ದಾರೆ.
ಇದನ್ನೂ ಓದಿ:ಹೊರಬಿತ್ತು ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಯ ದಿನಾಂಕ; ಯಾವ್ಯಾವ ಗಣ್ಯರು ಬರ್ತಾರೆ? ಇಲ್ಲಿದೆ ವಿವರ
ಸನಾ ಖಾನ್​ ಪತ್ತೆಗಾಗಿ ವಿಶೇಷ ತಂಡ ರಚಿಸಿದ ಪೊಲೀಸರು ಎಷ್ಟೇ ಪ್ರಯತ್ನಿಸಿದರೂ ಮಹಿಳೆಯನ್ನೂ ಪತ್ತೆ ಮಾಡಲು ಸಾಧ್ಯವಾಗಿರಲಿಲ್ಲ. ಸಂಶಯದ ಮೇಲೆ ಆಕೆಯ ಪತಿಯನ್ನೂ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಆರೋಪಿ ಆಗಸ್ಟ್​ 2ರಂದು ಕೊಲೆ ಮಾಡಿ ಆಕೆಯ ಮೃತದೇಹವನ್ನೂ ಜಬಲ್​ಪುರದಿಂದ 45 ಕಿಲೋಮೀಟರ್​ ದೂರದಲ್ಲಿರುವ ಹಿರಾನ್​ ನದಿಗೆ ಎಸೆದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಸನಾ ಖಾನ್​ರ ಮೃತದೇಹ ಇನ್ನೂ ಸಹ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.
ಮದುವೆಯಾಗಿ ಆರು ತಿಂಗಳೂ ಕಳದರೂ ಸಹ ಸನಾ ತನ್ನ ತಾಯಿಯ ಮನೆಯಲ್ಲಿಯೇ ಉಳಿದಿದ್ದಳು. ಆರೋಪಿ ಅಮಿತ್​ ಜಬಲ್​ಪುರದಲ್ಲಿ ವಾಸವಿದ್ದ. ಇದಲ್ಲದೆ ದಂಪತಿಗಳಿಬ್ಬರ ನಡುವೆ ಹಣಕಾಸು ವಿಚಾರವಾಗಿ ಜಗಳವಾಗುತ್ತಿತ್ತು ಎಂದು ತಿಳಿದು ಬಂದಿದೆ. ಅದರಂತೆ ಆಗಸ್ಟ್​ 2ರಂದು ದಂಪತಿಗಳ ನಡುವೆ ಇದೇ ವಿಚಾರಕ್ಕೆ ಗಲಾಟೆಯಾಗಿದ್ದು, ಆರೋಪಿಯೂ ಸಿಟ್ಟಿನಿಂದ ಆಕೆಯನ್ನು ಕೊಲೆ ಮಾಡಿ ಬಳಿಕ ಮೃತದೇಹವನ್ನು ಹಿರಾನ್​ ನದಿಗೆ ಎಸೆದಿರುವುದಾಗಿ ವಿಚಾರಣೆ ವೇಳೆ ಹೇಳಿರುವುದಾಗಿ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + four =
Remember me
