ಅಹಮದ್‌ನಗರ: ಕೌಟುಂಬಿಕ ಕಲಹದಿಂದ ಪತಿಯೇ ಪತ್ನಿ ಹಾಗೂ ಅತ್ತೆಯನ್ನು ಕೊಂದಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಅಹಮದ್‌ನಗರ ಜಿಲ್ಲೆಯ ರಾಹುರಿಯಲ್ಲಿ ಬೆಳಕಿಗೆ ಬಂದಿದೆ.ಇದನ್ನೂ ಓದಿ:ಬೆಕ್ಕು ಅಡ್ಡ ಬಂದರೆ ಅಪಶಕುನವೆಂದು ಕಾರು ನಿಲ್ಲಿಸಿದ ಕಳ್ಳರು: ಆಮೇಲೆ ನಡೆದಿದ್ದು ಮಾತ್ರ..
ಮೃತರನ್ನು ಪತ್ನಿ ನೂತನ್(23) ಮತ್ತು ಸುರೇಖಾ (45) ಎಂದು ಗುರುತಿಸಲಾಗಿದ್ದು, ಜೋಡಿ ಕೊಲೆಯಿಂದಾಗಿ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಸಾಗರ್ ಸುರೇಶ ಸಾಬಳೆ ಎಂಬಾತನೇ ಈ ಕೃತ್ಯ ಎಸಗಿದ ಆರೋಪಿಯಾಗಿದ್ದು, ಆತ ತನ್ನ ಮನೆಯಲ್ಲಿ ಮಲಗಿದ್ದ ಪತ್ನಿ ಮತ್ತು ಅತ್ತೆಯ ತಲೆಗೆ ಕಬ್ಬಿಣದ ರಾಡ್​​ನಿಂದ ಹೊಡೆದು ಕೊಲೆ ಮಾಡಿದ್ದಾನೆ.
ಮರುದಿನ ನೂತನ್‌ನ ಸಹೋದರ ಆಕೆಯ ಮನೆಗೆ ಬಂದಿದ್ದು, ಆತ ಆಘಾತಕಾರಿ ಘಟನೆಯನ್ನು ಗಮನಿಸಿ ಘಟನೆಯ ಬಗ್ಗೆ ರಾಹುರಿ ಪೊಲೀಸರಿಗೆ ತಿಳಿಸಿದ್ದಾನೆ. ಸುದ್ದಿ ತಿಳಿದು ತಕ್ಷಣ ಸ್ಥಳಕ್ಕೆ ಆಗಮಿಸಿದ ಪೋಲಿಸರು, ಮೃತದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಸಾಗರ್ ಸುರೇಶ ಸಾಬಲೆ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದು, ಘಟನೆ ಬಳಿಕ ಆರೋಪಿ ಪರಾರಿಯಾಗಿದ್ದಾನೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − two =
Remember me
