ಲಖೌನ:ಪತಿ ಮತ್ತು ಮಾವ ಸೇರಿ ಮಹಿಳೆಯ ಕೈ ಕಾಲು ಕಟ್ಟಿ ಹಾಕಿ ಮನಬಂದಂತೆ ಹಲ್ಲೆ ನಡೆಸಿ ಆಕೆಯ ಬಾಯಿಗೆ ಕೀಟನಾಶಕವನ್ನು ಸರಿದ ಅಮಾನವೀಯ ಘಟನೆಯೊಂದು ಉತ್ತರಪ್ರದೇಶದ ಹಾಪುರ ಜಿಲ್ಲೆಯಲ್ಲಿ ನಡೆದಿದೆ.
ಇದನ್ನೂ ಓದಿ:ಕೇರಳ: ಚಲಿಸುವ ಕಾರಿನಲ್ಲಿ ಈಜುಕೊಳ ದುಸ್ಸಾಹಸ, ಯೂಟ್ಯೂಬರ್ ಬಂಧನ!
ಪತಿ ಮತ್ತು ಮಾವ ಸೇರಿ ಮಹಿಳೆಗೆ ಥಳಿಸಿದ್ದಲ್ಲದೆ, ಆಕೆಯನ್ನು ಸಾಯಿಸುವ ಉದ್ದೇಶದಿಂದ ಬೆಳೆಗೆ ಬಳಸುವ ಕೀಟನಾಶಕವನ್ನು ಆಕೆಯ ಬಾಯಿಗೆ ಸುರಿದಿದ್ದಾರೆ. ಈ ವೇಳೆ ಸಹೋದರ ವಿರೋಧ ವ್ಯಕ್ತಪಡಿಸಿದಾಗ ಆರೋಪಿಗಳು ಆತನಿಗೂ ಥಳಿಸಿದ್ದಾರೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಹಾಪುರ್ ಜಿಲ್ಲೆಯ ಗರ್ಮುಕ್ತೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಬಗದ್​ಪುರ ಗ್ರಾಮದ ನಿವಾಸಿ ಶೀಲಾ, ಗಜ್ರೌಲಾ ಪೊಲೀಸ್ ಠಾಣೆ ವ್ಯಾಪ್ತಿಯ ಫಿರೋಜ್‌ಪುರ ಗ್ರಾಮದ ಸುರೇಂದ್ರ ಎಂಬಾತನನ್ನು ವಿವಾಹವಾಗಿದ್ದರು. ಮಂಗಳವಾರ ರಾತ್ರಿ 8.30ರ ಸುಮಾರಿಗೆ ಶೀಲಾಳ ಪೋಷಕರಿಗೆ ಅತ್ತೆಯಂದಿರು ಥಳಿಸುವ ಮಾಹಿತಿ ಲಭಿಸಿತ್ತು.
ಮಾಹಿತಿ ತಿಳಿಯುತ್ತಿದ್ದಂತೆ ಶೀಲಾಳ ಸಹೋದರ ಜಯಪ್ರಕಾಶ್​ ತನ್ನ ಸ್ನೇಹಿತನ ಜೊತೆ ನೇರವಾಗಿ ಆಕೆಯ ಮನೆಗೆ ಬಂದರು. ಈ ವೇಳೆ ಸಹೋದರ ಮುಂದೆಯೇ ಪತಿ ಹಾಗೂ ಮಾವ ಸೇರಿ ಮಹಿಳೆಯ ಕೈಕಾಲು ಕಟ್ಟಿ ಥಳಿಸಿದ್ದಾರೆ. ಇದನ್ನು ಕಂಡ ಸಹೋದರ ತಡೆಯಲು ಪ್ರಯತ್ನಿಸಿದ್ದಾನೆ. ಈ ವೇಳೆ ಆತನ ಮೇಲೂ ಹೆಲ್ಲೆ ಮಾಡಿದ್ದಾರೆ.
ಅಲ್ಲದೇ ಸಹೋದರನ ಸಮ್ಮುಖದಲ್ಲಿಯೇ ಆರೋಪಿಗಳಿಬ್ಬರೂ ಬೆಳೆಗೆ ಬಳಸುವ ಕೀಟನಾಶಕವನ್ನು ಆಕೆಯ ಬಾಯಿಗೆ ಬಲವಂತವಾಗಿ ಸುರಿದಿದ್ದಾರೆ. ಪರಿಣಾಮ ಆಕೆಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ.  ಕೂಡಲೇ ಮಹಿಳೆಯನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ತನಿಖೆ ನಡೆಸಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಭಾರಿ ಇನ್ಸ್‌ಪೆಕ್ಟರ್ ಹರೀಶ್ ವರ್ಧನ್ ಸಿಂಗ್ ಹೇಳಿದ್ದಾರೆ.
ಶ್ರೀನಗರ: ಸೇನಾ ಸಿಬ್ಬಂದಿ ಥಳಿತ, ನಾಲ್ವರು ಪೊಲೀಸರಿಗೆ ಗಂಭೀರ ಗಾಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 6 =
Remember me
