ಮಧ್ಯಪ್ರದೇಶ:ಬ್ಯೂಟಿ ಪಾರ್ಲರ್‌ಗೆ ಹೋಗದಂತೆ ಆಕೆ ಪತಿ ತಡೆದಿದ್ದಕ್ಕೆ ಕೋಪಗೊಂಡ ಮಹಿಳೆ ಫ್ಯಾನ್‌ಗೆ ನೇಣು ಹಾಕಿಕೊಂಡು ಪ್ರಾಣ ಬಿಟ್ಟಿದ್ದಾಳೆ. ಈ ಘಟನೆ ನಗರದ ಇಂದೂರ್​​ನಲ್ಲಿ ಗುರುವಾರ ನಡೆದಿದೆ.
ಬ್ಯೂಟಿ ಪಾರ್ಲರ್‌ಗೆ ಹೋಗಲು ಅವಕಾಶ ನೀಡದಿದ್ದಕ್ಕೆ ಅಸಮಾಧಾನಗೊಂಡ 34 ವರ್ಷದ ಮಹಿಳೆಯೊಬ್ಬರು ಈ ಕೃತ್ಯ ಎಸಗಿದ್ದಾರೆ. ಪತಿ ಮೇಲಿನ ಸಿಟ್ಟಿಗೆ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಸಬ್ ಇನ್ಸ್‌ಪೆಕ್ಟರ್ ಉಮಾಶಂಕರ್ ಯಾದವ್ ತಿಳಿಸಿದ್ದಾರೆ.
ಆಕೆಯನ್ನು ಬ್ಯೂಟಿ ಪಾರ್ಲರ್‌ಗೆ ಹೋಗದಂತೆ ತಡೆದಿರುವುದಾಗಿ ಆಕೆಯ ಪತಿ ಹೇಳಿದ್ದಾರೆ. ಮತ್ತು ಕೋಪದ ಭರದಲ್ಲಿ ಫ್ಯಾನ್‌ಗೆ ನೇಣು ಹಾಕಿಕೊಂಡಿದ್ದಾರೆ ಎನ್ನಲಾಗಿದೆ. ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಪ್ರಕರಣವನ್ನು ಎಲ್ಲಾ ಕೋನಗಳಿಂದ ತನಿಖೆ ನಡೆಸಲಾಗುತ್ತಿದೆ ಎಂದು ಆಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಡೆತ್ ನೋಟ್ ಬರೆದಿಟ್ಟು ಏಳನೇ ಮಹಡಿ ಕಟ್ಟಡದಿಂದ ಹಾರಿ ಪ್ರಾಣ ಬಿಟ್ಟ ವಿದ್ಯಾರ್ಥಿನಿ
ಈ ತಿಂಗಳ ಆರಂಭದಲ್ಲಿ, ಮಹಾರಾಷ್ಟ್ರದ ಭಾಯಂದರ್‌ನಲ್ಲಿ 8 ನೇ ತರಗತಿಯ ವಿದ್ಯಾರ್ಥಿ ಕ್ಷೌರ ಮಾಡಿಸಲು ಹೋದ ವೇಳೆ ತನ್ನ ಕೂದಲನ್ನು ಚಿಕ್ಕದಾಗಿ ಕತ್ತರಿಸಲಾಗಿದೆ ಎಂದು ಮನೊಂದು ಬಾಲಕ ತನ್ನ ಫ್ಲಾಟ್‌ನ ಬಾತ್ರೂಮ್ ಕಿಟಕಿಯಿಂದ ಜಿಗಿದು ಪ್ರಾಣ ಕಳೆದುಕೊಂಡಿದ್ದನು.
ಸಾಂಬಾರ್​ಗೆ​ ಉಪ್ಪು ಹೆಚ್ಚಾಯಿತೆಂದು ಎದೆಗೆ ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − four =
Remember me
