ಹರಿಯಾಣ:ಗಂಡ-ಹೆಂಡತಿ ಜಗಳ ಉಂಡು ಮಲಗುವ ತನಕ ಎಂಬ ಮಾತನ್ನು ನಮ್ಮ ಹಿರಿಯರು ಸುಮ್ಮನೇ ಹೇಳಿಲ್ಲ. ಆದರೆ, ಇತ್ತೀಚಿನ ದಿನಗಳಲ್ಲಿ ಪತಿ-ಪತ್ನಿ ನಡುವೆ ಕ್ಷುಲಕ ಕಾರಣಕ್ಕೆ ಜಗಳಗಳಾಗುತ್ತಿದ್ದು, ಪರಿಸ್ಥಿತಿ ವಿಕೋಪಕ್ಕೆ ಕೆಲವೊಮ್ಮೆ ಕೊಲೆಗಳು ನಡೆದಿವೆ. ಇದೀಗ ಮೊಬೈಲ್​ ಹಾಟ್​ಸ್ಪಾಟ್​ ಆನ್​ ಮಾಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೋರ್ವ ತನ್ನ ಹೆಂಡತಿಯನ್ನು ಕೊಲೆ ಮಾಡಿ ಪೊಲೀಸರ ಅತಿಥಿಯಾಗಿರುವ ಘಟನೆ ಹರಿಯಾಣದ ರೋಹ್ಟಕ್​ನಲ್ಲಿ ನಡೆದಿದೆ.
ಹರಿಯಾಣದ ರೋಹ್ಟಕ್​ನ ಮದೀನಾ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ರೇಖಾ ಎಂದು ಗುರುತಿಸಲಾಗಿದೆ. ಈಕೆಯ ಪತಿ ಅಜಯ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.
#गांवमदीना मे तेज़धार हथियार से वार कर अपनी पत्नी की हत्या करने वाले आरोपी पति को किया गिरफ़्तार@cmohry@police_haryanapic.twitter.com/XlJUc0hNT2
ಇದನ್ನೂ ಓದಿ:ವಯನಾಡು ಭೂಕುಸಿತ; ಸಾವಿನ ಸಂಖ್ಯೆ 320ಕ್ಕೆ ಏರಿಕೆ, ಕಾಂಗ್ರೆಸ್‌ನಿಂದ 100 ಮನೆಗಳ ನಿರ್ಮಾಣ: ರಾಗಾ
ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಜುಲೈ 30ರಂದು ಅಜಯ್​ ಮೊಬೈಲ್​ ಬಳಸುವಾಗ ಡೇಟಾ ಖಾಲಿಯಾಗಿದೆ. ತನ್ನ ಮೊಬೈಲ್​ನಲ್ಲಿ ಡೇಟಾ ಖಾಲಿಯಾಗಿದ್ದು, ಹಾಟ್​ಸ್ಪಾಟ್​ ಆನ್​ ಮಾಡುವಂತೆ ಪತ್ನಿಗೆ ಹೇಳಿದ್ದಾನೆ. ಪತ್ನಿ ಕೂಡ ತನ್ನ ಮೊಬೈಲ್​ನಲ್ಲಿ ಕಡಿಮೆ ಡೇಟಾ ಇದ್ದು ಆನ್​ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾಳೆ.
ಪತ್ನಿಯ ಮಾತನ್ನು ಕೇಳಿ ಕುಪಿತಗೊಂಡ ಅಜಯ್​ ಆಕೆಯ ಜೊತೆ ಜಗಳವಾಡಲು ಶುರು ಮಾಡಿದ್ದಾನೆ. ಬಳಿಕ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಚೂಪಾದ ಆಯುಧದೊಂದಿಗೆ ಪತ್ನಿಗೆ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಮೃತ ರೇಖಾ ಕುಟುಂಬಸ್ಥರು ನೀಡಿದ ದೂರನ್ನು ಆಧರಿಸಿ ತಲೆಮಾರಿಸಿಕೊಂಡಿದ್ದ ಅಜಯ್​ನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಕೊಲೆ ಮಾಡಿದ್ಧಾಗಿ ತಪ್ಪೊಪ್ಪಿಕೊಂಡಿದ್ದಾನೆ. ಚಾರ್ಜ್​ಶೀಟ್​ ಸಿದ್ದಪಡಿಸಲಾಗುತ್ತಿದ್ದು, ಶೀಘ್ರದಲ್ಲೇ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + fourteen =
Remember me
