ನವದೆಹಲಿ:ದಾಂಪತ್ಯದಲ್ಲಿ ಹೊಂದಾಣಿಕೆಯಿಂದ ಹೊರಹೊಮ್ಮು ಸಂತೋಷ ಮುಖ್ಯವಾಗುತ್ತದೆ. ಗಂಡ, ಹೆಂಡತಿ ಜಗಳ ಉಂಡು ಮಲಗುವ ತನಕ..ಈ ಗಾದೆ ನೆನಪಿದ್ಯಾ? ದಂಪತಿ ನಡುವೆ ಜಗಳ ಹೆಚ್ಚು ಕಾಲ ಮುಂದುವರೆಯುತ್ತಿರಲಿಲ್ಲ. ಆದರೆ ಇಂದಿನ ಕಾಲ ಬದಲಾಗಿದೆ. ಪತಿ- ಪತ್ನಿಯ ನಡುವಿನ ಮನಸ್ಥಾಪ ಯಾವ ಹಂತಕ್ಕೂ ಕೂಡಾ ಹೋಗಬಹುದಾಗಿದೆ. ಹೀಗೆ ಇಲ್ಲೊಂದು ಜೋಡಿ ಗಲಾಟೆಯಿಂದ ವಿಮಾನವನ್ನೇ ತುರ್ತು ಭೂಸ್ಪರ್ಶ ಮಾಡಬೇಕಾಗಿದೆ.
ಲುಫ್ಥಾನ್ಸ ವಿಮಾನ ಸಂಖ್ಯೆ LH772 ಮ್ಯೂನಿಚ್‌ನಿಂದ ಥಾಯ್ಲೆಂಡ್‌ನ ರಾಜಧಾನಿ ಬ್ಯಾಂಕಾಕ್‌ಗೆ ಹೋಗುತ್ತಿತ್ತು. ವಿಮಾನದಲ್ಲಿ ಪತಿ-ಪತ್ನಿಯರ ನಡುವೆ ಜಗಳ ನಡೆದಿದೆ. ಇಬ್ಬರ ನಡುವೆ ಜಗಳ ವಿಕೋಪಕ್ಕೆ ಹೋಗಿ ಮಾರಾಮಾರಿ ನಡೆದಿದೆ. ವಿಮಾನದ ಒಳಗಿನ ಪರಿಸ್ಥಿತಿ ಹದಗೆಟ್ಟ ನಂತರ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಐಜಿಐ) ತುರ್ತು ಭೂಸ್ಪರ್ಶ ಮಾಡಬೇಕಾಯಿತು.
A Lufthansa flight (LH772) from Munich to Bangkok has been diverted to Delhi due to an unruly passenger on board. Security personnel have reached and waiting for flight gates to be opened: Delhi airport sources
— ANI (@ANI)November 29, 2023

ಪಾಕಿಸ್ತಾನದಲ್ಲಿ ಈ ವಿಮಾನವನ್ನು ಇಳಿಸಲು ಪ್ರಯತ್ನಿಸಲಾಗಿತ್ತು, ಆದರೆ ಅಲ್ಲಿನ ವಿಮಾನ ನಿಲ್ದಾಣ ಪ್ರಾಧಿಕಾರ ಅದಕ್ಕೆ ಅವಕಾಶ ನೀಡಲಿಲ್ಲ ಎಂದು ಹೇಳಲಾಗುತ್ತಿದೆ. ಇದಾದ ಬಳಿಕ ವಿಮಾನವನ್ನು ದೆಹಲಿ ಕಡೆಗೆ ತಿರುಗಿಸಲಾಯಿತು.
ದೆಹಲಿ ವಿಮಾನ ನಿಲ್ದಾಣದ ಮೂಲಗಳ ಪ್ರಕಾರ, ಏರ್ ಟ್ರಾಫಿಕ್ ಕಂಟ್ರೋಲ್ (ಎಟಿಸಿ) ಈ ಸುದ್ದಿಯನ್ನು ಸ್ವೀಕರಿಸಿದ ತಕ್ಷಣ, ಭದ್ರತಾ ಸಿಬ್ಬಂದಿ ವಿಮಾನ ನಿಲ್ದಾಣವನ್ನು ತಲುಪಿ ಫ್ಲೈಟ್ ಗೇಟ್ ತೆರೆದಿದ್ದಾರೆ.
ಆದರೆ, ಪತಿ-ಪತ್ನಿ ಎಲ್ಲಿಂದ ಬಂದವರು ಮತ್ತು ಅವರ ನಡುವಿನ ಜಗಳಕ್ಕೆ ಕಾರಣವೇನು ಎಂಬ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಈ ಘಟನೆಯ ನಂತರ ವ್ಯಕ್ತಿಯನ್ನು ವಿಮಾನದಿಂದ ಕೆಳಗಿಳಿಸಿ ಭದ್ರತಾ ಸಿಬ್ಬಂದಿಗೆ ಒಪ್ಪಿಸಲಾಗಿದೆ ಎಂದು ಹೇಳಲಾಗುತ್ತಿದೆ. ಈ ಘಟನೆಗೆ ಸಂಬಂಧಿಸಿದಂತೆ ಲುಫ್ತಾನ್ಸ ಏರ್ ಯಾವುದೇ ಹೇಳಿಕೆಯನ್ನು ನೀಡಿಲ್ಲ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
