ಹೈದರಾಬಾದ್​​:ರಾಮ್​​ ಚರಣ್​ ಅವರು ನಟಿಸಿರುವ ಗೇಮ್​ ಚೆಂಜರ್ ಸಿನಿಮಾ​ ಸಾಂಗ್​ ಲೀಕ್​​ ಮಾಡಿದ್ದ ಇಬ್ಬರು ಖದೀಮರನ್ನು ಸೈಬರ್​ ಪೊಲೀಸರು ಬಂಧಿಸಿದ್ದಾರೆ.
ಸೆನ್ಸೇಷನಲ್ ಡೈರೆಕ್ಟರ್ ಶಂಕರ್ ನಿರ್ದೇಶನದಲ್ಲಿ ರಾಮ್ ಚರಣ್ ದೊಡ್ಡ ಬಜೆಟ್ ಪ್ಯಾನ್ ಇಂಡಿಯಾ ಸಿನಿಮಾ ‘ಗೇಮ್ ಚೇಂಜರ್’ ವೆಂಕಟೇಶ್ವರ ಸಿನಿ ಕ್ರಿಯೇಷನ್ಸ್ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿದೆ. ಅದ್ಧೂರಿ ಬಜೆಟ್‌ನಲ್ಲಿ ನಿರ್ಮಾಪಕರಾದ ದಿಲ್ ರಾಜು ಮತ್ತು ಶಿರೀಷ್ ಅವರು ಗೇಮ್ ಚೇಂಜರ್ ಅನ್ನು ನಿರ್ಮಿಸುತ್ತಿದ್ದಾರೆ. ಆರ್‌ಆರ್‌ಆರ್‌ನಂತಹ ಸೆನ್ಸೇಷನಲ್ ಬ್ಲಾಕ್‌ಬಸ್ಟರ್ ಚಿತ್ರದ ನಂತರ ರಾಮ್ ಚರಣ್ ಅವರ ಮುಂದಿನ ಚಿತ್ರ, ಗೇಮ್ ಚೇಂಜರ್ ಭಾರಿ ನಿರೀಕ್ಷೆಗಳನ್ನು ಹೊಂದಿದೆ.
ಗೇಮ್ ಚೇಂಜರ್ ಚಿತ್ರದ ಹಾಡೊಂದು ಈ ಹಿಂದೆ ಸೋರಿಕೆಯಾಗಿತ್ತು. ಈ ಬಗ್ಗೆ ನಿರ್ಮಾಪಕ ದಿಲ್ ರಾಜು ಆಕ್ರೋಶ ವ್ಯಕ್ತಪಡಿಸಿದ್ದು ಗೊತ್ತೇ ಇದೆ. ಆ ವೇಳೆ ಸಾಂಗ್ ಲೀಕ್ ವಿರುದ್ಧ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಸೋರಿಕೆಯಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಅವರ ವಿರುದ್ಧ ಐಟಿ ಕಾಯ್ದೆಯ ಸೆಕ್ಷನ್ 66 ಸಿ, 66 ಆರ್/ಡಬ್ಲ್ಯೂ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
‘ಗೇಮ್ ಚೇಂಜರ್’ ಚಿತ್ರದ ಮೊದಲ ಹಾಡು ದೀಪಾವಳಿ ಸಂದರ್ಭದಲ್ಲಿ ಬಿಡುಗಡೆಯಾಗುತ್ತಿದೆ. ಮೆಗಾ ಪವರ್ ಸ್ಟಾರ್ ರಾಮ್ ಚರಣ್, ಸೆನ್ಸೇಷನಲ್ ಡೈರೆಕ್ಟರ್ ಶಂಕರ್ ಮತ್ತು ಮ್ಯೂಸಿಕ್ ಸೆನ್ಸೇಷನ್ ಎಸ್.ಎಸ್.ಥಮನ್ ಜತೆಯಲ್ಲಿ ಮೊದಲ ಬಾರಿಗೆ ಗೇಮ್ ಚೇಂಜರ್ ಚಿತ್ರದ ಹಾಡನ್ನು ಪ್ಯಾನ್ ಇಂಡಿಯಾ ರೇಂಜ್‌ನಲ್ಲಿ ದೀಪಾವಳಿಯಂದು ಬಿಡುಗಡೆ ಮಾಡಲು ಸಿದ್ಧತೆ ನಡೆಸಲಾಗಿದೆ ಎಂದು ಚಿತ್ರತಂಡ ತಿಳಿಸಿದೆ.
ಗೇಮ್ ಚೇಂಜರ್ ಚಿತ್ರದಲ್ಲಿ ಕಿಯಾರಾ ಅಡ್ವಾಣಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಸಾಯಿ ಮಾಧವ್ ಬುರ್ರಾ ಸಂಭಾಷಣೆಯನ್ನು ನೀಡುತ್ತಿದ್ದು, ತಮನ್ ಗಾಯನ ಸಂಯೋಜಿಸಿದ್ದಾರೆ.
VIDEO | ನಿರ್ಮಾಣ ಹಂತದ ರಸ್ತೆಯಲ್ಲಿರುವ ಸಿಮೆಂಟ್, ಮರಳು ಮಿಶ್ರಣ ಕದ್ದ ಗ್ರಾಮಸ್ಥರು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:6 − four =
Remember me
