ಹೈದರಾಬಾದ್​:ಹೈದರಾಬಾದ್​ನಲ್ಲಿ ಪೈಶಾಚಿಕ ಕೃತ್ಯವೊಂದು ನಡೆದಿದ್ದು, 10 ವರ್ಷದ ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿಸಲಾಗಿದ್ದು, ಬಾಲಕಿ ಈಗ ಗರ್ಭಿಣಿಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಸಂತ್ರಸ್ತೆ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಪೊಲೀಸರು 10 ಜನ ಆರೋಪಿಗಳನ್ನು ಬಂಧಿಸಿದ್ದಾರೆ.
ಇದನ್ನೂ ಓದಿ:ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಶಾಸಕ ಸಿ.ಎನ್. ಬಾಲಕೃಷ್ಣ ಪುನರಾಯ್ಕೆ!
ಆರೋಪಿಗಳನ್ನು ಕಾರು ಚಾಲಕ ಚಕ್ಕೋಲು ನರೇಶ್ (26), ವಿಜಯ್ ಕುಮಾರ್ (23), ಬಾಲಾಜಿ (23), ಗುಡ್ಡಂತಿ ಕೃಷ್ಣ (22), ಕಿರಣ್ ಕುಮಾರ್ (26), ಬೊಳ್ಳೆಪೋಗು ಅಜಯ್ (23), ಜೇಮ್ಸ್ ಕ್ಸೇವಿಯರ್ (24), ದೀಪಕ್ (25), ಸಬವತ್ ಹತ್ಯಾ ನಾಯ್ಕ್ (25), ಇಂಜಮುರಿ ಮಧು (30) ಎಂದು ಗುರುತಿಸಲಾಗಿದೆ. ಈ ಸಂಬಂಧ ತನಿಖೆಯನ್ನು ನಡೆಸಲಾಗುತ್ತಿದೆ.
ಅತ್ಯಾಚಾರ ಎಸಗಕ್ಕೂ ಮೊದಲು ಆರೋಪಿಗಳು ಸಂತ್ರಸ್ತೆಗೆ ಮತ್ತು ಬರುವ ಮಾದಕ ವಸ್ತು ತುಂಬಿದ ಪಾನೀಯವನ್ನು ಒತ್ತಾಯಪೂರ್ವಕವಾಗಿ ಕುಡಿಸಿದ್ದಾರೆ. ಬಳಿಕ ಒಬ್ಬೊಬ್ಬರಾಗಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಇದು ಆ ಬಾಲಕಿ ಗರ್ಭಿಣಿಯಾಗಲು ಕಾರಣವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳಿಂದ ಸ್ಕೂಟರ್, ದ್ವಿಚಕ್ರವಾಹನ ಸೇರಿದಂತೆ ಮೊಬೈಲ್, ವಾಹನಗಳು, ಸಿಮ್ ಕಾರ್ಡ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜೂನ್ 29 ರಂದು ಬಂಧಿತರಾಗಿರುವ ಎಲ್ಲಾ ಆರೋಪಿಗಳು ಅಪರಾಧ ಚಟುವಟಿಕೆಗಳು ಮತ್ತು ಮಾದಕ ದ್ರವ್ಯ ಸೇವನೆಯ ಹಿನ್ನೆಲೆಯನ್ನು ಹೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.  ಈ ಪೈಶಾಚಿಕ ಕೃತ್ಯ ಎಸೆಗಿದ ಆರೋಪಿಗಳನ್ನು ಮರುದಿನ ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿಗೆ ಒಪ್ಪಿಸಲಾಗಿದೆ.
ಹೊಸ ಕ್ರಿಮಿನಲ್ ಅಪರಾಧ ಕಾನೂನಿನಡಿ ದಿನವೇ ರಾಜ್ಯಾದ್ಯಂತ 63 ಎಫ್​ಐಆರ್​ ದಾಖಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − seven =
Remember me
